ಪರಿಶಿಷ್ಟ ಜಾತಿಯ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ: ಶ್ರೀರಾಮುಲು

ಬೆಂಗಳೂರು, ಮಾ.24: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಎರಡು ಪರಿಶಿಷ್ಟ ಜಾತಿಯ ವಸತಿ ಶಾಲೆಗಳಿವೆ. ಆ ಶಾಲೆಗಳಲ್ಲಿ ಶಿಕ್ಷಕ, ಶಿಕ್ಷಕೇತರ ಒಟ್ಟು 11 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಬುಧವಾರ ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಕೆ.ಹರೀಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಳ್ತಂಗಡಿ ತಾಲೂಕಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಇಂದಿರಾಗಾಂಧಿ ವಸತಿ ಶಾಲೆಗಳಿದ್ದು, ಈ ಎರಡು ಶಾಲೆಗಳಲ್ಲಿ ಒಟ್ಟು 329 ವಿದ್ಯಾರ್ಥಿಗಳಿದ್ದಾರೆ. ಖಾಲಿ ಇರುವ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.
ಈ ಎರಡು ವಸತಿ ಶಾಲೆಗಳಲ್ಲಿ 6 ರಿಂದ 10ನೆ ತರಗತಿವರೆಗೆ ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಕೊರೋನದಿಂದಾಗಿ 2020-21ನೆ ಸಾಲಿನಲ್ಲಿ 7 ರಿಂದ 10ನೆ ತರಗತಿವರೆಗಿನ ಪ್ರಾರಂಭಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
Next Story





