Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಲಸಿಕೆಯ ಲಾಭ ಪಡೆಯುವುದು...

ಕೋವಿಡ್ ಲಸಿಕೆಯ ಲಾಭ ಪಡೆಯುವುದು ನಮ್ಮೆಲ್ಲರ ಕರ್ತವ್ಯ: ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ25 March 2021 6:25 PM IST
share
ಕೋವಿಡ್ ಲಸಿಕೆಯ ಲಾಭ ಪಡೆಯುವುದು ನಮ್ಮೆಲ್ಲರ ಕರ್ತವ್ಯ: ಡಾ.ಕೆ.ಸುಧಾಕರ್

ಬೆಂಗಳೂರು, ಮಾ.25: ಲಸಿಕೆ ಹಾಕಿಸಿ ಮುನ್ನೆಚ್ಚರಿಕೆಯೂ ಪಾಲಿಸಿ. ಕಳೆದ ವರ್ಷ ಕೊರೋನ ವೈರಾಣುವಿನ ಮೊದಲ ಅಲೆ ಅಪ್ಪಳಿಸಿದಾಗ ಲಸಿಕೆ ನಮಗೆ ಒಂದು ಆಶಾಕಿರಣವಾಗಿತ್ತು. ಆದರೆ ಈಗ ಅದು ವಾಸ್ತವವಾಗಿದೆ. ಇದು ಅಷ್ಟು ಸಾಮಾನ್ಯವಾದ ವಿಷಯವಲ್ಲ, ಅಷ್ಟು ಸುಲಭದ ಕೆಲಸವೂ ಆಗಿರಲಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಸಿಕೆ ಕಂಡು ಹಿಡಿಯುವುದರ ಹಿಂದೆ ನಮ್ಮ ವಿಜ್ಞಾನಿಗಳ ಅಚಲ ತಪಸ್ಸು, ಕಠಿಣ ಪರಿಶ್ರಮ, ನಿರಂತರ ಪ್ರಯತ್ನಗಳಿವೆ. ಉದಾಹರಣೆಗೆ ರೋಟಾ ವೈರಸ್‍ಗೆ ಲಸಿಕೆ ಸಿಗಲು 29 ವರ್ಷ ಬೇಕಾಗಿತ್ತು. ಎಬೋಲಾ ವೈರಸ್‍ಗೆ ಲಸಿಕೆ ಕಂಡುಹಿಡಿಯಲು 20 ವರ್ಷ ಕಾಯಬೇಕಾಯಿತು ಎಂದು ಹೇಳಿದರು.

ಕೊರೋನ ಲಸಿಕೆ ಬರುವ ಮುನ್ನ, ಮಂಪ್ಸ್ ವೈರಸ್‍ಗೆ 4 ವರ್ಷದಲ್ಲಿ ಲಸಿಕೆ ಕಂಡುಹಿಡಿದಿದ್ದೇ ಈವರೆಗೂ ನಮಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಸಿಕ್ಕ ಲಸಿಕೆಯಾಗಿತ್ತು. ಈಗ ಕೊರೋನ ವೈರಸ್‍ಗೆ 1 ವರ್ಷದೊಳಗೆ ಲಸಿಕೆ ಕಂಡುಹಿಡಿಯಲಾಗಿದೆ. ಇಂತಹ ಕಠಿಣ ಪರಿಶ್ರಮದ ಪ್ರತಿಫಲವಾದ ಲಸಿಕೆ ನಮಗೆ ದೊರೆತಿರುವಾಗ ಅದರ ಲಾಭ ಪಡೆಯುವುದು ನಮ್ಮೆಲ್ಲರ ಕರ್ತವ್ಯ ಎಂದು ಸುಧಾಕರ್ ತಿಳಿಸಿದರು.

ಲಸಿಕೆ ಪಡೆದುಕೊಂಡ ವ್ಯಕ್ತಿ ತಾನು ಸೋಂಕಿನಿಂದ ಸುರಕ್ಷಿತವಾಗುವುದರ ಜೊತೆಗೆ ಇತರರ ಸುರಕ್ಷತೆಗೂ ಸಹಕಾರಿಯಾಗುವುದರಿಂದ ಲಸಿಕೆ ಪಡೆಯುವುದು ನಮ್ಮ ಸುರಕ್ಷತೆ ಜೊತೆಗೆ ಒಂದು ಸಾಮೂಹಿಕ ಸಾಮಾಜಿಕ ಜವಾಬ್ದಾರಿಯೂ ಆಗಿದೆ. ಆದುದರಿಂದ, ಎಲ್ಲ ಅರ್ಹ ವ್ಯಕ್ತಿಗಳು ಈ ಕೂಡಲೇ http://cowin.gov.in ಅಥವಾ ಆರೋಗ್ಯ ಸೇತು ಆ್ಯಪ್ ಮೂಲಕ ನೋಂದಣಿ ಮಾಡಿಸಿಕೊಂಡು ಅಥವಾ ತಮ್ಮ ಹತ್ತಿರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ತಪ್ಪದೆ ಲಸಿಕೆ ಪಡೆಯಬೇಕೆಂದು ಅವರು ಮನವಿ ಮಾಡಿದರು.

ತಮ್ಮ ಮನೆಯಲ್ಲಿ, ನೆರೆಹೊರೆಯಲ್ಲಿ, ಸ್ನೇಹಿತರಲ್ಲಿ ಬಂಧು-ಬಳಗದಲ್ಲಿರುವ ಎಲ್ಲ ಅರ್ಹ ವ್ಯಕ್ತಿಗಳಿಗೆ, ಅದರಲ್ಲೂ ವಿಶೇಷವಾಗಿ ಹಿರಿಯ ನಾಗರಿಕರಿಗೆ ಮತ್ತು ಸಹ-ಅಸ್ವಸ್ಥತೆ ಹೊಂದಿರುವವರಿಗೆ ಲಸಿಕೆ ಪಡೆಯಲು ಅರಿವು ಮೂಡಿಸಿ, ಪ್ರೋತ್ಸಾಹಿಸಿ, ಸಹಾಯ ಮಾಡಿರಿ. ನಾವೆಲ್ಲರೂ ಒಗ್ಗಟ್ಟಿನಿಂದ ಕರ್ನಾಟಕವನ್ನು ಕೊರೋನ ಮುಕ್ತ ರಾಜ್ಯವನ್ನಾಗಿ ಮಾಡೋಣ ಎಂದು ಸುಧಾಕರ್ ಕರೆ ನೀಡಿದರು.

4 ಲಕ್ಷ ಡೋಸ್ ಕೊರೋನ ಲಸಿಕೆ ಆಗಮನ

ನಿನ್ನೆ ತಡರಾತ್ರಿ ರಾಜ್ಯಕ್ಕೆ 4 ಲಕ್ಷ ಡೋಸ್ ಕೊರೋನ ಲಸಿಕೆ ಆಗಮಿಸಿದ್ದು, ಕೇಂದ್ರ ಸರಕಾರದ ಭರವಸೆಯಂತೆ ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ರವಾನೆಯಾಗಲಿದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಸಿಕೆಯ ಕೊರತೆ ಉಂಟಾಗದಂತೆ ಕ್ರಮ ಕೈಗೊಂಡಿದ್ದು, ಎಲ್ಲ ಅರ್ಹ ನಾಗರಿಕರು ಕೂಡಲೇ ನೋಂದಣಿ ಮಾಡಿಕೊಂಡು ಇದರ ಸದುಪಯೋಗ ಪಡೆಯಬೇಕೆಂದು ಕೋರುತ್ತೇನೆ.

-ಡಾ.ಕೆ.ಸುಧಾಕರ್, ಆರೋಗ್ಯ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X