Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ ಅಭಿವೃದ್ಧಿಗೆ ಯೋಜನೆಗೆ ಹಣದ...

ರಾಜ್ಯದ ಅಭಿವೃದ್ಧಿಗೆ ಯೋಜನೆಗೆ ಹಣದ ಕೊರತೆಯಿಲ್ಲ: ಸಿಎಂ ಯಡಿಯೂರಪ್ಪ

ಜಲ ಮಾರ್ಗ ಅಭಿವೃದ್ಧಿ ಹಾಗೂ ಸೌಂದರೀಕರಣಗೊಳಿಸುವ ಯೋಜನೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ25 March 2021 6:50 PM IST
share
ರಾಜ್ಯದ ಅಭಿವೃದ್ಧಿಗೆ ಯೋಜನೆಗೆ ಹಣದ ಕೊರತೆಯಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು, ಮಾ.25: ರಾಜ್ಯದ ಅಭಿವೃದ್ಧಿಗೆ ಯೋಜನೆಗೆ ಹಣದ ಕೊರತೆಯಿಲ್ಲ. ಹೀಗಾಗಿ ಕಾಮಗಾರಿಗಳನ್ನು ನಿರ್ವಹಿಸುತ್ತಿರುವ ಗುತ್ತಿಗೆದಾರರು ಹಣಕಾಸಿನ ಬಗ್ಗೆ ಚಿಂತೆ ಮಾಡದೆ ನಿಗದಿತ ವೇಳೆಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದರತ್ತ ಗಮನ ಕೇಂದ್ರೀಕರಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಗುರುವಾರ ಇಲ್ಲಿನ ಶಾಂತಿನಗರ ಬಸ್ ನಿಲ್ದಾಣದ ಮುಂಭಾಗ ಕೋರಮಂಗಲ ರಾಜಕಾಲುವೆ(ಕೆ-100)ಯನ್ನು ಕೆ.ಆರ್.ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆಯವರೆಗೆ ಜಲ ಮಾರ್ಗ ಅಭಿವೃದ್ಧಿ ಹಾಗೂ ಸೌಂದರೀಕರಣಗೊಳಿಸುವ ಯೋಜನೆಗೆ ಶಂಕುಸ್ಥಾಪನೆಯನ್ನು ಮಾಡಿ ಅವರು ಮಾತನಾಡಿದರು.

ಅಭಿವೃದ್ಧಿ ಯೋಜನೆಗೆ ಹಣಕಾಸಿನ ಕೊರತೆಯಿದೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು.ಈ ಬಗ್ಗೆ ಗುತ್ತಿಗೆದಾರರು ತಲೆ ಕೆಡಿಸಿಕೊಳ್ಳದೆ ಕಾಮಗಾರಿಗಳನ್ನು ಪೂರ್ಣಗೊಳಿಸುವುದರತ್ತ ತಮ್ಮ ಗಮನಹರಿಸಬೇಕು. ಇದಕ್ಕೆ ಯಾವುದೇ ರೀತಿಯಲ್ಲಿ ಹಣಕಾಸು ಕೊರತೆಯಾಗದಂತೆ ಗಮನ ವಹಿಸುವ ಜವಾಬ್ದಾರಿ ರಾಜ್ಯ ಸರಕಾರದ್ದಾಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಿಷನ್ ಬೆಂಗಳೂರು-2020ರಡಿಯಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಬೆಂಗಳೂರಿನ ಸಂಪೂರ್ಣ ಚಹರೆ ಬದಲಾಗಲಿದೆ. ಸುಗಮ ಸಾರಿಗೆ, ಸ್ವಚ್ಛ ಪರಿಸರ, ವೈಜ್ಞಾನಿಕ ವಿಧಾನದಲ್ಲಿ ಘನ ತ್ಯಾಜ್ಯ ವಿಲೇವಾರಿ, ರಾಜ ಕಾಲುವೆಗಳ ಸಮಗ್ರ ನಿರ್ವಹಣೆ, ಕೆರೆಗಳ ಅಭಿವೃದ್ಧಿ ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಿಲಿಕಾನ್‍ಸಿಟಿಯ ಹೃದಯ ಭಾಗದಲ್ಲಿ ಹಾದು ಹೋಗಿರುವ 'ಜಲ ಮಾರ್ಗ'ಕ್ಕೆ ಪ್ರವಾಸಿ ತಾಣದ ಸ್ಪರ್ಶ ನೀಡಿ, ಗತಕಾಲದ ವೈಭವ ಮರುಕಳಿಸುವಂತೆ ಮಾಡುವುದಕ್ಕಾಗಿ 175 ಕೋಟಿ ರೂ.ವೆಚ್ಚದಲ್ಲಿ ಜಲಮಾರ್ಗ ಅಭಿವೃದ್ಧಿ ಯೋಜನೆ ರೂಪಿಸಲಾಗಿದೆ. ಇದು ಸಾಕಾರಗೊಂಡರೆ, ವರ್ಷಪೂರ್ತಿ ಕೊಳಚೆ ನೀರು ಹರಿಯುತ್ತಿದ್ದ ಕಾಲುವೆಯಲ್ಲಿ ಮಳೆ ನೀರು ಹರಿಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬೆಂಗಳೂರು ನಗರದ ಹಸಿರು ಸಿರಿಯನ್ನು ಕಾಪಾಡುವ ನಿಟ್ಟಿನಲ್ಲಿ ಹೊಸ ಉದ್ಯಾನಗಳು ಮತ್ತು ಬೃಹತ್ ವೃಕ್ಷೋದ್ಯಾನಗಳನ್ನೂ ನಿರ್ಮಿಸಲಾಗುವುದು. ಹಾಗೂ ಬೆಂಗಳೂರು ನಗರದ ಸಮಸ್ಯೆಗಳ ಕೂಲಂಕಷ ಅಧ್ಯಯನ ಮಾಡಲಾಗಿದ್ದು, ನಗರವನ್ನು ವಿಶ್ವದರ್ಜೆಗೆ ಏರಿಸುವ ಹಾಗೂ ಬೆಂಗಳೂರಿನಲ್ಲಿ ಅತ್ಯುತ್ತಮ ರಸ್ತೆಗಳ ನಿರ್ಮಾಣದ ಮಹತ್ವಾಕಾಂಕ್ಷೆ ಹೊಂದಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಮಾತನಾಡಿ, ನಗರದೆಲ್ಲೆಡೆ ಇರುವ ರಾಜಕಾಲುವೆಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಶೇಷ ಒತ್ತು ನೀಡಿದ್ದು, ಇದನ್ನು ವಿಹಾರಧಾಮಗಳನ್ನಾಗಿ ಮಾಡುವ ಗುರಿ ನೀಡಲಾಗಿದೆ. ಮುಂದಿನ ಹತ್ತು ತಿಂಗಳಿನಲ್ಲಿ ರಾಜಕಾಲುವೆಗಳು ಪ್ರವಾಸಿ ತಾಣಗಳಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಸಕ ಉದಯ ಗರುಡಾಚಾರ್, ವಿಧಾನ ಪರಿಷತ್ ಸದಸ್ಯರಾದ ಕೆ.ಗೋವಿಂದರಾಜು, ಎಚ್.ಎಂ.ರಮೇಶ್ ಗೌಡ, ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತೆ  ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ(ನಗರಾಭಿವೃದ್ಧಿ ಇಲಾಖೆ) ರಾಕೇಶ್ ಸಿಂಗ್, ಪಾಲಿಕೆ ಆಡಳಿತಗಾರ ಗೌರವ್ ಗುಪ್ತಾ, ಜಲಮಂಡಳಿ ಅಧ್ಯಕ್ಷ  ಜಯರಾಮ್, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X