ರಾಜ್ಯ ಉಪಚುನಾವಣೆ: ಅಭ್ಯರ್ಥಿಗಳನ್ನು ಪ್ರಕಟಿಸಿದ ಬಿಜೆಪಿ

ಬೆಂಗಳೂರು, ಮಾ.25: ರಾಜ್ಯದಲ್ಲಿ ಎಪ್ರಿಲ್17 ರಂದು ನಡೆಯಲಿರುವ ಲೋಕಸಭೆ, 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಗುರುವಾರ ಅಭ್ಯರ್ಥಿಗಳನ್ನು ಘೋಷಿಸಿದೆ.
ನಾರಾಯಣರಾವ್ ಅವರ ನಿಧನದಿಂದ ತೆರವಾಗಿದ್ದ ಬಸವಕಲ್ಯಾಣ ಕ್ಷೇತ್ರದಲ್ಲಿ ಶರಣು ಸಲಗರ್ ಅವರಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ನಲ್ಲಿದ್ದ ಪ್ರತಾಪಗೌಡ ಪಾಟೀಲ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಮಸ್ಕಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ನಿರೀಕ್ಷೆಯಂತೆ ಪ್ರತಾಪಗೌಡ ಪಾಟೀಲ್ ಅವರಿಗೇ ಬಿಜೆಪಿಯಿಂದ ಟಿಕೆಟ್ ನೀಡಲಾಗಿದೆ.
ಎಪ್ರಿಲ್17 ರಂದೇ ಉಪಚುನಾವಣೆ ನಡೆಯಲಿರುವ ಬೆಳಗಾವಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯನ್ನಾಗಿ ದಿವಂಗತ ಸುರೇಶ ಅಂಗಡಿ ಅವರ ಪತ್ನಿ ಮಂಗಲಾ ಸುರೇಶ ಅಂಗಡಿ ಅವರಿಗೆ ಟಿಕೆಟ್ ಘೋಷಣೆಯಾಗಿದೆ.
Next Story





