Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಲೆಕ್ಟೋರಲ್ ಬಾಂಡ್‍ ಗಳ ಮಾರಾಟಕ್ಕೆ ತಡೆ...

ಇಲೆಕ್ಟೋರಲ್ ಬಾಂಡ್‍ ಗಳ ಮಾರಾಟಕ್ಕೆ ತಡೆ ಹೇರಲು ನಿರಾಕರಿಸಿದ ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ26 March 2021 12:56 PM IST
share
ಇಲೆಕ್ಟೋರಲ್ ಬಾಂಡ್‍ ಗಳ ಮಾರಾಟಕ್ಕೆ ತಡೆ ಹೇರಲು ನಿರಾಕರಿಸಿದ  ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಹೊಸ ಇಲೆಕ್ಟೋರಲ್ ಬಾಂಡ್‍ಗಳನ್ನು ಎಪ್ರಿಲ್ 1ರಿಂದ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ. ಇಲೆಕ್ಟೋರಲ್ ಬಾಂಡ್‍ಗಳಿಲ್ಲದೇ ಇದ್ದರೆ ರಾಜಕೀಯ ಪಕ್ಷಗಳು ನಗದನ್ನೇ ಬಳಸುವುದರಿಂದ  ಇಲೆಕ್ಟೋರಲ್ ಬಾಂಡ್‍ ಗಳಿಗೆ ತನ್ನ ಅನುಮತಿಯಿದೆ ಎಂದು ಚುನಾವಣಾ ಆಯೋಗ ನೀಡಿದ ಹೇಳಿಕೆಯ ಆಧಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಬಂದಿದೆ. ಆದರೆ ಇಲೆಕ್ಟೋರಲ್ ಬಾಂಡ್‍ಗಳಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಹೆಚ್ಚು ಪಾರದರ್ಶಕತೆ ತರಲು ತಾನು ಬಯಸಿದ್ದಾಗಿ ಚುನಾವಣಾ ಆಯೋಗ ಹೇಳಿದೆ.

"ಇಲೆಕ್ಟೋರಲ್ ಬಾಂಡ್‍ಗಳ ಬಿಡುಗಡೆಗೆ 2018 ಹಾಗೂ 2019ರಲ್ಲಿಯೂ ಯಾವುದೇ ಅಡೆತಡೆಗಳಿಲ್ಲದೆ ಅನುಮತಿ ನೀಡಿರುವಾಗ ಹಾಗೂ ಅಗತ್ಯ  ಮುನ್ನೆಚ್ಚರಿಕೆಗಳೂ ಇರುವುದರಿಂದ ಈಗ ಇಲೆಕ್ಟೋರಲ್ ಬಾಂಡ್‍ಗಳಿಗೆ ತಡೆ ಹೇರಬೇಕೆಂಬುದರಲ್ಲಿ ಸಮರ್ಥನೆಯಿಲ್ಲ" ಎಂದು ಇಂದು ಸುಪ್ರೀಂ ಕೋರ್ಟ್ ಹೇಳಿದೆ.

ಎಪ್ರಿಲ್ 1 ಹಾಗೂ ಎಪ್ರಿಲ್ 10ರ ನಡುವೆ ಇಲೆಕ್ಟೋರಲ್ ಬಾಂಡ್‍ಗಳ ಮಾರಾಟಕ್ಕೆ ಮಧ್ಯಂತರ ತಡೆಯಾಜ್ಞೆ ವಿಧಿಸಬೇಕೆಂದು ಕೋರಿ ಅಸೋಸಿಯೇಶನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್‌ ಅಪೀಲು ಸಲ್ಲಿಸಿತ್ತು.

ರಾಜಕೀಯ ಪಕ್ಷಗಳಿಗೆ ದೊರೆಯುವ ದೇಣಿಗೆ ಹಾಗೂ ಅವುಗಳ ಲೆಕ್ಕಪತ್ರಗಳಲ್ಲಿನ ಪಾರದರ್ಶಕತೆ ಕುರಿತ ವಿಚಾರಗಳು ಇತ್ಯರ್ಥವಾಗುವ ತನಕ ಬಾಂಡ್‍ಗಳ ಮಾರಾಟಕ್ಕೆ ತಡೆ ಹೇರುವಂತೆ  ಹಾಗೂ ಪಶ್ಚಿಮ ಬಂಗಾಲ, ಅಸ್ಸಾಂ ಮತ್ತಿತರ ರಾಜ್ಯಗಳಲ್ಲಿ ಚುನಾವಣೆಗಳು ನಡೆಯುತ್ತಿರುವುದರಿಂದ  ಕೆಲ ಕಂಪನಿಗಳು ರಾಜಕೀಯ ಪಕ್ಷಗಳ ಬೊಕ್ಕಸ ತುಂಬಿಸಬಹುದೆಂಬ  ಸಂದೇಹದ ಹಿನ್ನೆಲೆಯಲ್ಲಿ  ಎಡಿಆರ್ ತನ್ನ ಅಪೀಲು ಸಲ್ಲಿಸಿತ್ತು.

"ಆಡಳಿತ ಪಕ್ಷವು  ದೇಣಿಗೆ ಹೆಸರಿನಲ್ಲಿ ಲಂಚ ಪಡೆಯಲು ಇಲೆಕ್ಟೋರಲ್ ಬಾಂಡ್‍ಗಳನ್ನು ಬಳಸುತ್ತಿದೆ, ಜಗತ್ತಿನಲ್ಲಿ ಎಲ್ಲಿಯೂ ಈ ರೀತಿ ನಡೆಯುವುದಿಲ್ಲ,  ಯಾರು, ಯಾವ ಪಕ್ಷಕ್ಕೆ ಎಷ್ಟು ನೀಡಿದ್ದಾರೆಂದು ತಿಳಿಯುವುದಿಲ್ಲ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಅದರ ಮುಖಾಂತರ ಸರಕಾರಕ್ಕೆ ಮಾತ್ರ ತಿಳಿಯುತ್ತದೆ" ಎಂದು ಎಡಿಆರ್ ಪರ ವಾದಿಸಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ತಮ್ಮ ವಾದ ಮಂಡನೆ ವೇಳೆ ಹೇಳಿದ್ದರು.

ಆದರೆ ಇಂತಹ ದೇಣಿಗೆಗಳನ್ನು ಆಡಳಿತ ಪಕ್ಷ ಮಾತ್ರ ಪಡೆಯುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X