ದಿಲ್ಲಿಯ ಸೇನಾ ಆಸ್ಪತ್ರೆಯಲ್ಲಿ ತಪಾಸಣೆಗೊಳಗಾದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಹೊಸದಿಲ್ಲಿ: ಎದೆಯಲ್ಲಿ ಅಸ್ವಸ್ಥತೆ ಕಂಡುಬಂದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ರಾಷ್ಟ್ರ ರಾಜಧಾನಿಯ ಸೇನಾ ಆಸ್ಪತ್ರೆಯಲ್ಲಿ ತಪಾಸಣೆಗೊಳಪಟ್ಟರು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ರಾಷ್ಟ್ರಪತಿಯವರ ಆರೋಗ್ಯಸ್ಥಿತಿ ಸ್ಥಿರವಾಗಿದೆ. ಅವರು ನಿಯಮಿತ ತಪಾಸಣೆಗೆ ಒಳಗಾಗಿದ್ದು, ಅವರನ್ನು ನಿಗಾದಲ್ಲಿಡಲಾಗಿದೆ ಎಂದು ಆಲ್ ಇಂಡಿಯಾ ರೇಡಿಯೊ ನ್ಯೂಸ್ ತಿಳಿಸಿದೆ.
ಇಂದು ಬೆಳಗ್ಗೆ ಎದೆಯಲ್ಲಿ ಅಸ್ವಸ್ಥತೆ ಕಾಣಿಸಿಕೊಂಡ ಕಾರಣ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೇನಾ ಆಸ್ಪತ್ರೆಗೆ ಭೇಟಿ ನೀಡಿ ರೂಟಿನ್ ಚೆಕ್ ಅಪ್ ಗೆ ಒಳಗಾದರು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸೇನಾ ಆಸ್ಪತ್ರೆ ತಿಳಿಸಿದೆ ಎಂದು ಎಎನ್ ಐ ಟ್ವೀಟಿಸಿದೆ.
Next Story





