Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಶ್ಲೀಲ ಸಿಡಿ ಪ್ರಕರಣ: ಯುವತಿಯ ದೂರಿನ...

ಅಶ್ಲೀಲ ಸಿಡಿ ಪ್ರಕರಣ: ಯುವತಿಯ ದೂರಿನ ಬೆನ್ನಲ್ಲೆ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‍ಐಆರ್

ಅತ್ಯಾಚಾರ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ26 March 2021 6:21 PM IST
share
ಅಶ್ಲೀಲ ಸಿಡಿ ಪ್ರಕರಣ: ಯುವತಿಯ ದೂರಿನ ಬೆನ್ನಲ್ಲೆ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‍ಐಆರ್

ಬೆಂಗಳೂರು, ಮಾ.26: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಲಿಖಿತ ದೂರು ನೀಡಿದ ಕೆಲವೇ ಗಂಟೆಗಳಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಇಲ್ಲಿನ ಕಬ್ಬನ್‍ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ಅತ್ಯಾಚಾರಗೈದಿರುವ ಆರೋಪ ಹೊರಿಸಲಾಗಿದೆ.

ಶುಕ್ರವಾರ ಯುವತಿ ಮೂರನೆ ವಿಡಿಯೊಂದನ್ನು ಹರಿಬಿಟ್ಟಿದ್ದು, ತದನಂತರ ನ್ಯಾಯವಾದಿ ಜಗದೀಶ್ ಕೆ.ಎನ್.ಮಹದೇವ್ ಅವರ ಮುಖಾಂತರ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಲಿಖಿತ ದೂರು ಮುಟ್ಟಿಸಿದ್ದಳು. ಇದರನ್ವಯ ಕಬ್ಬನ್‍ಪಾರ್ಕ್ ಪೊಲೀಸ್ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಮೊಕದ್ದಮೆ ದಾಖಲಾಗಿದೆ.

ಇದರಲ್ಲಿ ಐಪಿಸಿ ಸೆಕ್ಷನ್ 376ಸಿ (ಪ್ರಭಾವಿ ಹುದ್ದೆಯಲ್ಲಿದ್ದು ಅತ್ಯಾಚಾರ), 354 ಎ(ಕೆಲಸ ನೀಡುವುದಾಗಿ ನಂಬಿಸಿ ದೈಹಿಕ ಸಂಪರ್ಕ) 506 (ಜೀವ ಬೆದರಿಕೆ) 417(ವಂಚನೆ) ಅಡಿ ದಾಖಲಾಗಿದೆ. ಜತೆಗೆ, ವಿಡಿಯೊ ಹರಿಬಿಟ್ಟಿರುವ ಆರೋಪದ ಮೇಲೂ ರಮೇಶ್ ಜಾರಕಿಹೊಳಿ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67ರ ಅಡಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ವಕೀಲರಿಂದ ದೂರು ಸಲ್ಲಿಕೆ: ಯುವತಿಯ ಲಿಖಿತ ದೂರನ್ನು ನ್ಯಾಯವಾದಿ ಜಗದೀಶ್ ಕೆ.ಎನ್.ಮಹದೇವ್ ನೇತೃತ್ವದ ತಂಡ ನಗರದ ಪೊಲೀಸ್ ಆಯುಕ್ತ ಕಚೇರಿಗೆ ಭೇಟಿ ನೀಡಿ ಶುಕ್ರವಾರ ತಲುಪಿಸಿತು.

ಬಳಿಕ ಈ ಕುರಿತು ಪ್ರತಿಕ್ರಿಯಿಸಿದ ಜಗದೀಶ್ ಕೆ.ಎನ್.ಮಹದೇವ್, ರಾಜ್ಯ ಸರಕಾರ, ಸಿಟ್ ತನಿಖಾಧಿಕಾರಿಗಳು ಯುವತಿಗೆ ಭದ್ರತೆ ಕೊಡಬೇಕೆಂದು ಆಕೆ ವಿಡಿಯೊದಲ್ಲಿ ಹೇಳಿಕೆ ನೀಡಿದ್ದಾಳೆ. ಇನ್ನೊಂದೆಡೆ ರಮೇಶ್ ಜಾರಕಿಹೊಳಿ ಪರ ಮಾಜಿ ಶಾಸಕ ನಾಗರಾಜ್ ದೂರು ನೀಡಿದ್ದರು. ಹೀಗಾಗಿ ಆಕೆ ಭಯದಿಂದ ಹೊರ ಬರುತ್ತಿಲ್ಲ ಎಂದರು.

ಲಿಖಿತ ರೂಪದಲ್ಲಿರುವ ಆಕೆಯ ದೂರನ್ನು ಪೊಲೀಸ್ ಆಯುಕ್ತರಿಗೆ ನೀಡಿದ್ದೇವೆ ಎಂದ ಅವರು, ನಿರ್ಭಯಾ ಪ್ರಕರಣದ ನಿಯಮ ಮಾದರಿ ಸ್ವಯಂಪ್ರೇರಿತ ದೂರು ದಾಖಲಿಸಲು ಮನವಿ ಮಾಡಿದ್ದೇವು. ಆದರೆ, ವಿಡಿಯೊ ಸುಳ್ಳು ಆಗಿದ್ದರೆ ಸಮಸ್ಯೆ ಆಗುತ್ತದೆ. ಹೀಗಾಗಿ, ದೂರು ನೀಡಿದ್ದೇವೆ ಎಂದು ತಿಳಿಸಿದರು.

ಯುವತಿ ಹಾಜರು?: ರಮೇಶ್ ಜಾರಕಿಹೊಳಿ ಅವರ ವಿರುದ್ಧ ಸದ್ಯ ಎಫ್‍ಐಆರ್ ದಾಖಲಾಗಿರುವ ಹಿನ್ನೆಲೆ ತನಿಖಾಧಿಕಾರಿಗಳು ಯುವತಿಯ ಅಧಿಕೃತ ಹೇಳಿಕೆ, ಸಹಿ ಮತ್ತು ಘಟನೆ ಬಗ್ಗೆ ಪರಿಶೀಲನೆ ನಡೆಸಿ, ಒಟ್ಟು ಪಂಚನಾಮೆ ಪ್ರಕ್ರಿಯೆ ಮುಗಿಸುವ ಸಾಧ್ಯತೆ ಇದ್ದು, ಈ ಮೂಲಕ ಠಾಣೆಗೆ ಹಾಜರಾಗುವಂತೆ ಕೋರಿ ನ್ಯಾಯವಾದಿ ಜಗದೀಶ್ ಕೆ.ಎನ್.ಮಹದೇವ್ ಮೂಲಕ ಯುವತಿಗೆ ನೋಟಿಸ್ ರವಾನೆ ಮಾಡಲಾಗಿದೆ. ಇದರನ್ವಯ ಆಕೆ ಹಾಜರಾಗಬಹುದು ಎಂದು ಪೊಲೀಸ್ ಅಧಿಕಾರಿವೊಬ್ಬರು ಮಾಹಿತಿ ನೀಡಿದ್ದಾರೆ.

ಯುವತಿ ದೂರಿನಲ್ಲಿ ಏನಿದೆ ?

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಸರಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ನನ್ನೊಂದಿಗೆ ಲೈಂಗಿಕ ಸಂಪರ್ಕ ಮಾಡಿದ್ದಾರೆ. ವಿಡಿಯೊ ಕರೆ ಮೂಲಕ ನಗ್ನವಾಗಿ, ಅಶ್ಲೀಲವಾಗಿ ಮಾತನಾಡಲು ಪುಸಲಾಯಿಸಿ ಕೆಲಸ ಕೊಡಿಸದೆ ವಂಚಿಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಯುವತಿ ಆಯುಕ್ತರಿಗೆ ಸಲ್ಲಿಸಿರುವ ದೂರಿನಲ್ಲಿ ಆರೋಪ ಮಾಡಿದ್ದಾಳೆ.

ನಾನು ಬೆಂಗಳೂರು ನಗರದಲ್ಲಿ ಉದ್ಯೋಗ ಹುಡುಕಿಕೊಂಡು ಬಂದು ನೆಲೆಸಿದ್ದು, ಕಿರುಚಿತ್ರ ಮಾಡುವ ಸಲುವಾಗಿ ಸಚಿವರಾಗಿದ್ದ ರಮೇಶ ಜಾರಕಿಹೊಳಿ ಅವರನ್ನು ಒಮ್ಮೆ ಭೇಟಿ ಮಾಡಿದ್ದೆ. ನಂತರ ಅವರು ನನ್ನ ಮೊಬೈಲ್ ನಂಬರ್ ಪಡೆದು ಕರೆ ಮಾಡುವುದಾಗಿ ತಿಳಿಸಿದರು. ನಂತರ ಅವರು ಕರೆ ಮಾಡಿ ನನ್ನ ಬಗ್ಗೆ ಮತ್ತು ಕುಟುಂಬದ ಬಗ್ಗೆ ವಿಚಾರಿಸಿ ಸಲುಗೆಯಿಂದ ಮಾತನಾಡಲು ಆರಂಭಿಸಿದರು.

ಸಚಿವರು ನನ್ನನ್ನು ಅಷ್ಟು ಕಾಳಜಿಯಿಂದ ಮಾತನಾಡಿಸಿದ್ದು, ನನಗೆ ತುಂಬಾ ಖುಷಿಯಾಯಿತು. ಹಾಗಾಗಿ ಅವರನ್ನು ಗೌರವದಿಂದ ಮಾತನಾಡಿಸಿದೆ. ಅಗಾಗೆ ನನಗೆ ಕರೆ ಮಾಡಿ ಮಾತನಾಡಲು ಆರಂಭಿಸಿದರು. ನನಗೆ ತಮ್ಮ ಪ್ರಭಾವ ಬಳಸಿ ಸರಕಾರಿ ಕೆಲಸ ಕೊಡಿಸುವುದಾಗಿ ಹೇಳಿದರು. ಬದಲಾಗಿ ನೀನು ನನ್ನ ಜೊತೆಗೆ ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಕೇಳಿದರು.

ಅವರನ್ನು ಟಿವಿಗಳಲ್ಲಿ ನೋಡಿದ್ದು, ಮಂತ್ರಿ ಈ ರೀತಿ ಹೇಳಿದ ಮೇಲೆ ಕೆಲಸ ಕೊಟ್ಟೇ ಕೊಡಿಸುತ್ತಾರೆ ಎಂದು ನಂಬಿದೆ. ನನ್ನ ಬಳಿ ಹಣವಿಲ್ಲದಿರುವುದನ್ನು ಮುಂಚೆಯೇ ತಿಳಿದುಕೊಂಡಿದ್ದ ಅವರು ಹಣದ ಬದಲು ಅವರ ಜೊತೆಗೆ ಸಹಕರಿಸಿ ಖುಷಿ ನೀಡಬೇಕು ಎಂದು ಕೇಳಿದ್ದರಿಂದ ನಂಬಿ ಅವರು ಕೇಳಿದಂತೆ ನಡೆದುಕೊಂಡು ಬಂದಿದ್ದೇನೆ. ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದೇನೆ ಎಂದು ವಿಡಿಯೊ ಕರೆ ಮಾಡಿ ನನ್ನೊಂದಿಗೆ ಲೈಂಗಿಕ ವಿಚಾರಗಳನ್ನು ಮಾತನಾಡಿದ್ದರು. ನಾನು ಅವರು ಹೇಳಿದಂತೆಯೇ ಮಾಡಿದ್ದೇನೆ ಎಂದು ಆಕೆ ತಿಳಿಸಿದ್ದಾಳೆ.

ನಂತರ ಬೆಂಗಳೂರಿಗೆ ಬಂದು ನನ್ನ ನಿವಾಸಕ್ಕೆ ಬಾ ನಿನ್ನ ಕೆಲಸ ವಿಚಾರವಾಗಿ ಮಾತನಾಡಬೇಕೆಂದರು. ಆನಂತರ, ನಾನು ಅವರು ಹೇಳಿದ ಅಪಾರ್ಟ್ ಮೆಂಟ್‍ಗೆ ಎರಡು ಬಾರಿ ಹೋಗಿದ್ದೆ. ಅವರು ನನ್ನೊಂದಿಗೆ ಅಶ್ಲೀಲವಾಗಿ ನಡೆದುಕೊಂಡರು. ನಾನು ಎದುರು ಮಾತನಾಡಲು ಹೆದರಿ ಅವರು ಕೇಳಿದಂತೆ ಮಾಡಿರುತ್ತೇನೆ. ನಂತರ ಸರಕಾರಿ ನೌಕರಿ ಬಗ್ಗೆ ಕೇಳಿದಾಗ ಸ್ವಲ್ಪ ಹಣ ಬೇಕಾದರೆ ಕೇಳು ಕೆಲಸದ ಬಗ್ಗೆ ಆಮೇಲೆ ನೋಡೋಣ ಎಂದು ನನ್ನನ್ನು ದೂರವಾಗಿಸಿದರು.

ಇದಾದ ಕೆಲ ದಿನಗಳ ಬಳಿಕ ವಿಡಿಯೊಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ನಾನು ರಮೇಶ ಜಾರಕಿಹೊಳಿ ವಿರುದ್ಧ ದೂರು ನೀಡದಂತೆ ಈ ರೀತಿ ಕುತಂತ್ರವನ್ನು ಮಾಡಿದ್ದಾರೆ. ಹಣವಂತರು, ಪ್ರಭಾವಿಗಳಾದ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಂದ ನನಗೂ ಮತ್ತು ಕುಟುಂಬಸ್ಥರಿಗೂ ಜೀವ ಬೆದರಿಕೆ ಇದೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಾನು ದೂರು ನೀಡದಂತೆ ತಡೆಯಲು ಮತ್ತು ಅವರ ಕೈಗೆ ಸಿಕ್ಕರೆ ಕೊಲೆ ಮಾಡಲು ಎಲ್ಲ್ಲ ಪ್ರಯತ್ನ ಮಾಡುತ್ತಿದ್ದಾರೆ. ದಯಮಾಡಿ ತಾವು ನನಗೆ ಮತ್ತು ನನ್ನ ಕುಟುಂಬದ ಸದಸ್ಯರಿಗೆ ಭದ್ರತೆ ನೀಡಿ. ನನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಕೆಲಸ ಕೊಡಿಸದೆ ಮೋಸ ಮಾಡಿರುವ ರಮೇಶ ಜಾರಕಿಹೊಳಿ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡುತ್ತೇನೆ ಎಂದು ಆಕೆ ಹೇಳಿದ್ದಾಳೆ.

ಇನ್ನು, ನಾನು ನೇರವಾಗಿ ಯಾವ ಪೊಲೀಸ್ ಠಾಣೆಗೂ ಬಂದು ದೂರು ನೀಡದಂತೆ ಪೊಲೀಸ್ ಇಲಾಖೆಯನ್ನು ಬಳಸಿಕೊಳ್ಳುತ್ತಿದ್ದಾರೆ. ನನ್ನ ಪರವಾಗಿ ಯಾರೂ ಮಾತನಾಡದಂತೆ ತೇಜೋವಧೆ ಮಾಡುತ್ತಿದ್ದಾರೆ. ನನಗೆ ಸಹಾಯ ಮಾಡಿದವರಿಗೆ ಮತ್ತು ಅವರ ಕುಟುಂಬಸ್ಥರಿಗೆ ಹಿಂಸೆ ಕೊಡುತ್ತಿರುವುದರಿಂದ ಬಹಳ ನೋವಾಗಿದೆ. ನನಗೆ ಭದ್ರತೆ ಇಲ್ಲದೆ ಕಾರಣ ಕೈಯಲ್ಲಿ ಬರೆದು ಈ ದೂರನ್ನು ನನಗೆ ಪರಿಚಿತ ವಕೀಲರಾದ ಜಗದೀಶ್ ಕೆ.ಎನ್.ಮಹದೇವ್ ಅವರ ಮೂಲಕ ಕಳುಸುತ್ತಿದ್ದೇನೆ. ರಮೇಶ ಜಾರಕಿಹೊಳಿ ಮತ್ತು ಅವರ ಕಡೆಯವರಿಂದ ನಮಗೆ ಯಾವುದೇ ಅಪಾಯವಾಗದಂತೆ ರಕ್ಷಣೆ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದು ಯುವತಿ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾಳೆ.

'ಮಹಾನಾಯಕನ' ಹೆಸರು ಪ್ರಸ್ತಾವ ?

ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದ್ದು, ಯುವತಿ ತನ್ನ ಕುಟುಂಬಸ್ಥರೊಂದಿಗೆ ಮಾತನಾಡುವ ಧ್ವನಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾವ ಮಾಡಿದ್ದಾಳೆ ಎಂದು ವರದಿಯಾಗಿದೆ.

ನಿನ್ನ(ಯುವತಿ) ವೀಡಿಯೊ ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿದೆ ಎಂದು ಆಕೆಯ ಕುಟುಂಬದವರು ಪ್ರಶ್ನಿಸಿದಾಗ, ನಾನ್ಯಾಕೆ ಅಂತಹ ಕೆಲಸ ಮಾಡಲಿ. ಬೇರೆ ಯುವತಿಯ ದೃಶ್ಯ ಅದು. ನಾನಲ್ಲ, ಅಲ್ಲದೆ ಇದನ್ನು ಯಾರೂ ನಂಬುತ್ತಿಲ್ಲ ಎಂದು ಯುವತಿ ಹೇಳಿದ್ದಾಳೆ. ಮುಂದುವರಿದು, ಆಕೆ ಮನೆಯವರೊಂದಿಗೆ ಮಾತನಾಡುವ ವೇಳೆ ಯುವತಿ ಡಿ.ಕೆ.ಶಿವಕುಮಾರ್ ಹೆಸರು ಹೇಳಿದ್ದು, ನಾನು ಅವರ ಜೊತೆಯಲ್ಲಿದ್ದೇನೆ ಎಂದು ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ. ಒಟ್ಟು, 6 ನಿಮಿಷ 59 ಸೆಕೆಂಡ್‍ಗಳ ಧ್ವನಿಸುರುಳಿಯಲ್ಲಿ ಹಲವು ಅಂಶಗಳನ್ನು ಆಕೆ ತಿಳಿಸಿರುವುದಾಗಿ ಹೇಳಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X