ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ: ಓರ್ವನ ಬಂಧನ

ಮಂಗಳೂರು, ಮಾ.26: ಇಲ್ಲಿನ ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಈತನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಕಾಸರಗೋಡು ಮೂಲದ ಇಸ್ಮಾಯಿಲ್ ಅಹ್ಮದ್ ಕಲ್ಲಾರ್ ಬಂಧಿತ ಆರೋಪಿ.
ಆರೋಪಿಯು ಸ್ಪೈಸ್‌ಜೆಟ್ ವಿಮಾನದಲ್ಲಿ ದುಬೈನಿಂದ ಆಗಮಿಸಿದ್ದ. ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾಗ ಈತನ ಒಳಉಡುಪುಗಳಲ್ಲಿ 57,14,940 ರೂ. ಮೌಲ್ಯದ 1.23 ಕಿ.ಗ್ರಾಂ ಚಿನ್ನ ಪತ್ತೆಯಾಗಿದೆ. ಚಿನ್ನದ ಪೌಡರ್ ಹಾಗೂ ಸರಪಳಿಯಾಗಿಸಿ ಚಿನ್ನವನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.
ಕಸ್ಟಮ್ಸ್ ಡೆಪ್ಯುಟಿ ಕಮಿಷನರ್ ಡಾ.ಕಪಿಲ್ ಗಡೆ, ಸೂಪರಿಂಟೆಂಡೆಂಟ್‌ಗಳಾದ ಶ್ರೀಕಾಂತ್ ಕೆ., ನಾಗೇಶ್ ಕುಮಾರ್, ನವೀನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Next Story





