Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡಭಟ್ಕಳ ಬೈಪಾಸ್ ರಸ್ತೆಗೆ ಅಂಡರಪಾಸ್...

ಮೂಡಭಟ್ಕಳ ಬೈಪಾಸ್ ರಸ್ತೆಗೆ ಅಂಡರಪಾಸ್ ನಿರ್ಮಾಣಕ್ಕೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ26 March 2021 7:10 PM IST
share
ಮೂಡಭಟ್ಕಳ ಬೈಪಾಸ್ ರಸ್ತೆಗೆ ಅಂಡರಪಾಸ್ ನಿರ್ಮಾಣಕ್ಕೆ ಆಗ್ರಹಿಸಿ ಧರಣಿ

ಭಟ್ಕಳ: ಪಟ್ಟಣದ ಮೂಡಭಟ್ಕಳ ಭೈಪಾಸ್ ರಸ್ತೆಗೆ ಅಂಡರಪಾಸ್ ಒದಗಿಸಬೇಕು ಎಂದು ಆಗ್ರಹಿಸಿ ಮೂಡಭಟ್ಕಳ ಬೈಪಾಸ್ ರಸ್ತೆ ಅಂಡರಪಾಸ್ ಹೋರಾಟ ಸಮಿತಿ ಹಾಗೂ ಮುಟ್ಟಳ್ಳಿ ಮತ್ತು ಮೂಡಭಟ್ಕಳ ಸಾರ್ವಜನಿಕರು ಸದಸ್ಯರು ಶುಕ್ರವಾರ ಧರಣಿ ನಡೆಸಿ ಭಟ್ಕಳ ಉಪವಿಭಾಗಾಧಿಕಾರಿಗಳಿಗೆ ಮನವಿ ನೀಡಿದರು.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಟ್ಟಳ್ಳಿ, ಕೋಣಾರ, ಹದ್ಲೂರು, ಬೇಹಳ್ಳಿ ಸಬ್ಬತ್ತಿ ಸೇರಿ ವಿವಿಧ ಗ್ರಾಮಗಳಿಂದ ಮೂಡಭಟ್ಕಳ ಬೈಪಾಸ್ ಮೂಲಕ ಭಟ್ಕಳ ಪೇಟೆಗೆ ಪ್ರತಿ ನಿತ್ಯ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಉದ್ಯೋಗಸ್ಥರು ತಿರುಗಾಡುತ್ತಾರೆ. ಕೊಂಕಣ ರೈಲ್ವೆ ಸ್ಟೇಷನ್‍ಗೆ ಹೋಗಿ ಬರಲು ಕೂಡ ಇರುವುದು ಇದು ಒಂದೇ ಮಾರ್ಗ. ಈ ಬೈಪಾಸ್ ರಸ್ತೆಯ ನೆಹರುರೋಡ್ ಮಾರ್ಗವಾಗಿ ಪೇಟೆಯನ್ನು ಕಡಿಮೆ ಅವಧಿಯಲ್ಲಿ ತಲುಪುವ ಮಾರ್ಗವಾಗಿರುತ್ತದೆ. ಇಂತಹ ಜನ ನಿಬಿಡ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಮಾಡುವಾಗ ಅಂಡರ್ ಪಾಸ್ ಸೌಲಭ್ಯ ಕೊಡದೇ ಇರುವುದರಿಂದ ಪ್ರತಿ ನಿತ್ಯ ರಸ್ತೆ ಅಪಘಾತಗಳು ನಡೆಯುತ್ತಿವೆ. ಕೂಡಲೆ ಸ್ಥಳವನ್ನು ಪರೀಶೀಲನೆ ನಡೆಸಿ ವಾಹನ ದಟ್ಟಣೆ ಮತ್ತು ಪಾದಾಚಾರಿಗಳ ಓಡಾಟವನ್ನು ಗಣನೆಗೆ ತೆಗೆದುಕೊಂಡು ಈ ಸ್ಥಳದಲ್ಲಿ ಅಂಡರ್ ಪಾಸ್ ಸೌಲಭ್ಯವನ್ನು ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. 

2017ರಲ್ಲಿ  ಶಾಸಕರು ಸ್ಥಳ ಪರಿಶೀಲನೆ ನಡೆಸಿ ಅಂದಿನ ಉಪವಿಭಾಗಾಧಿಕಾರಿಗಳಿಗೆ ಅಂಡರಪಾಸ್ ಮಹತ್ವ ವಿವರಿಸಿದ್ದರು. ಅವರು ಈ ಕುರಿತು  ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಿದ್ದರು. ಆದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಈ ರಸ್ತೆಯ ಕಾಮಗಾರಿಯನ್ನು ಇತ್ತೀಚೆಗೆ ಪ್ರಾರಂಭ ಮಾಡಲು ತಯಾರಿ ನಡೆಸಿದ್ದು, ಅಂಡರಪಾಸ್ ಸೌಲಭ್ಯದ ಕಾಮಗಾರಿ ನಡೆಸುವ ಕುರಿತು  ಸಾರ್ವಜನಿಕರಿಗೆ ಯಾವುದೆ ಮಾಹಿತಿ ನೀಡುತ್ತಿಲ್ಲ. ಸಂಭದಪಟ್ಟ ಅಧಿಕಾರಿಗಳು ಈ ಕುರಿತು ನಮಗೆ ಸೂಕ್ತ ಮಾಹಿತಿ ಒದಗಿಸಬೇಕು. ಒಂದು ವೇಳೆ ಅಂಡರಪಾಸ್ ಮಂಜೂರು ಆಗಿದ್ದರೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಇಲ್ಲವಾದರೆ ಅಂಡರಪಾಸ್ ಸೌಲಭ್ಯ ಒದಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದರು. ಈ ಸಂದರ್ಬದಲ್ಲಿ ಮುಟ್ಟಳ್ಳಿ ಗ್ರಾ.ಪಂ ಅಧ್ಯಕ್ಷ ಶೇಷಗಿರಿ ನಾಯ್ಕ ಸೇರಿ,ವೆಂಕಟೇಶ ನಾಯ್ಕ, ಜಟ್ಟಪ್ಪ ನಾಯ್ಕ, ಚಂದ್ರಹಾಸ ನಾಯ್ಕ, ನರೇಂದ್ರ ನಾಯಕ, ಸುರೇಂದ್ರ ಭಟ್ಕಳಕರ, ಶಂಕರ ಶೆಟ್ಟಿ ಮಂಜುನಾಥ ನಾಯ್ಕ, ಮಾಸ್ತಪ್ಪ ನಾಯ್ಕ,ಮಂಜಪ್ಪ ನಾಯ್ಕ,ವೆಂಕಟೇಶ ಟಿ.ನಾಯ್ಕ, ರಾಘವೇಂದ್ರ ನಾಯ್ಕ, ಲೋಕೇಶ್ ನಾಯ್ಕ,ಶಿವರಾಮ ನಾಯ್ಕ, ಹನುಮಂತ ನಾಯ್ಕ,ರವಿಚಂದ್ರನ್ ನಾಯ್ಕ,ರಾಘವೇಂದ್ರ  ನಾಯ್ಕ ಮತ್ತಿತರರು ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X