ರವಿವಾರದಿಂದ ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ

ಮುಂಬೈ:ಕೋವಿಡ್-19 ಪ್ರಕರಣಗಳು ಹಿಂದಿನ ಎಲ್ಲ ದಾಖಲೆಗಳನ್ನು ಮುರಿಯುತ್ತಾ ಕ್ಷಿಪ್ರವಾಗಿ ಹರಡುತ್ತಿರುವ ಕಾರಣ ರವಿವಾರದಿಂದ(ಮಾರ್ಚ್ 28)ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹೇರಲು ಮಹಾರಾಷ್ಟ್ರ ಸರಕಾರ ನಿರ್ಧರಿಸಿದೆ.
ಜಿಲ್ಲಾ ಮ್ಯಾಜಿಸ್ಟ್ರೇಟ್ ರೊಂದಿಗೆ ಸಭೆ ನಡೆಸಿ ಕೋವಿಡ್-19- ಪರಿಸ್ಥಿತಿಯನ್ನು ತಿಳಿದುಕೊಂಡ ಬಳಿಕ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಕೋವಿಡ್-19 ಹರಡುವಿಕೆಯನ್ನು ತಡೆಯಲು ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ನಿಯಮಗಳನ್ನು "ಕಟ್ಟುನಿಟ್ಟಾಗಿ ಜಾರಿಗೊಳಿಸಲು" ಮುಖ್ಯಮಂತ್ರಿ ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯವ್ಯಾಪಿ ರಾತ್ರಿ ಕರ್ಫ್ಯೂಗೆ ಸಂಬಂಧಿಸಿದ ಮಾರ್ಗಸೂಚಿಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ರಾತ್ರಿ 8 ರಿಂದ ಬೆಳಿಗ್ಗೆ 7 ರವರೆಗೆ ಎಲ್ಲಾ ಮಾಲ್‌ಗಳು ಮುಚ್ಚಲ್ಪಡುತ್ತವೆ.
Next Story





