Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಗಳೂರು ಸಿಎಎ ಪ್ರತಿಭಟನೆ ವೇಳೆ ಹೆಣಗಳು...

ಮಂಗಳೂರು ಸಿಎಎ ಪ್ರತಿಭಟನೆ ವೇಳೆ ಹೆಣಗಳು ಬಿದ್ದಾಗ ಮುಸ್ಲಿಮರ ಬೆಂಬಲಕ್ಕೆ ನಿಂತಿದ್ದು ಜೆಡಿಎಸ್: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ26 March 2021 8:49 PM IST
share
ಮಂಗಳೂರು ಸಿಎಎ ಪ್ರತಿಭಟನೆ ವೇಳೆ ಹೆಣಗಳು ಬಿದ್ದಾಗ ಮುಸ್ಲಿಮರ ಬೆಂಬಲಕ್ಕೆ ನಿಂತಿದ್ದು ಜೆಡಿಎಸ್: ಕುಮಾರಸ್ವಾಮಿ

ಬೆಂಗಳೂರು, ಮಾ.26: ಮಂಗಳೂರಿನಲ್ಲಿ ಸಿಎಎ ಪ್ರತಿಭಟನೆ ವೇಳೆ ಹೆಣಗಳು ಬಿದ್ದು, ಅಲ್ಪಸಂಖ್ಯಾತರು ಆತಂಕದಲ್ಲಿದ್ದಾಗ ಕಾಂಗ್ರೆಸ್ ನಾಯಕರು ಬಿಲ ಸೇರಿದ್ದರು. ಅಂದು ಮುಸ್ಲಿಮರ ಬೆಂಬಲಕ್ಕೆ ನಿಂತಿದ್ದು ಜೆಡಿಎಸ್. ಇಂದು ಬಸವಕಲ್ಯಾಣದಲ್ಲಿ ನಾವು ಮುಸ್ಲಿಮ್ ಅಭ್ಯರ್ಥಿಯನ್ನು ಹಾಕುತ್ತಲೇ ಕಾಂಗ್ರೆಸ್ ತಾನು ಮುಸ್ಲಿಮರ ರಕ್ಷಕ ಎಂದು ಎದೆತಟ್ಟಿಕೊಂಡು ಮುಂದೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‍ಗಳನ್ನು ಮಾಡಿರುವ ಅವರು, ನಮ್ಮ ರಾಜ್ಯ, ನಮ್ಮ ನೆಲ, ನಮ್ಮ ಪಕ್ಷ, ನಮ್ಮ ಅಭ್ಯರ್ಥಿ. ಇದರಲ್ಲಿ ಜೆಡಿಎಸ್ ಯಾರ ಅಪ್ಪಣೆಗೆ ಕಾಯಬೇಕು? ಯಾವ ದೊಣ್ಣೆ ನಾಯಕನ ಆಜ್ಞೆ ಆಗಬೇಕು ನಮಗೆ. ಜನರಿಗೆ ಬೇಕಾದ ಅಭ್ಯರ್ಥಿಗಳನ್ನು ನಾವು ಹಾಕುತ್ತೇವೆ. ಅದರಲ್ಲಿ ನಮಗೆ ಧರ್ಮ ನಗಣ್ಯ. ಪ್ರತಿಯೊಂದರಲ್ಲೂ ಹಿಂದೂ-ಮುಸ್ಲಿಮ್ ಎಂದು ಹುಡುಕುವವರಿಗೆ ಜನ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಬೇಕು ಎಂದರು.

ಮುಸ್ಲಿಮರನ್ನು ಮತಗಳಾಗಿ ನೋಡುವುದು ಕಾಂಗ್ರೆಸ್‍ನ ಐತಿಹಾಸಿಕ ದುರಭ್ಯಾಸ. ಅದಕ್ಕಾಗಿಯೇ ಮುಸ್ಲಿಮರನ್ನು ಕಾಂಗ್ರೆಸ್ ನಮ್ಮ ಮತ ಎನ್ನುತ್ತದೆ. ನಮ್ಮವರು ಅನ್ನುವುದಿಲ್ಲ. ಕಾಂಗ್ರೆಸ್‍ನ ಇಂಥ ತಪ್ಪುಗಳಿಂದಲೇ ಬಿಜೆಪಿ ಈ ಹಂತಕ್ಕೆ ಬೆಳೆದಿದೆ. ದೇಶದಲ್ಲಿ ಕೋಮು ಭಾವನೆಗಳು ಈ ಮಟ್ಟಕ್ಕೆ ಕೆರಳಿರುವುದರ ಹಿಂದೆ ಕಾಂಗ್ರೆಸ್‍ನ ಪ್ರಮಾದಗಳಿವೆ ಎಂದು ಅವರು ತಿಳಿಸಿದ್ದಾರೆ.

ಬಸವಕಲ್ಯಾಣದಲ್ಲಿ ಜೆಡಿಎಸ್ ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ‘ಮಹಾನ್ ನಾಯಕ'ರು ಹೇಳಿದ್ದಾರೆ. ಪ್ರತಿಯೊಂದಕ್ಕೂ ಒಳ ಒಪ್ಪಂದ, ಒಳಸಂಚು ಮಾಡಿದವರಿಗಷ್ಟೇ ಒಳ ಒಪ್ಪಂದದ ಕನವರಿಕೆ. ಆಪರೇಷನ್ ಕಮಲದಲ್ಲಿ, ಮೈತ್ರಿ ಸರಕಾರ ಉರುಳಿದ್ದರಲ್ಲಿ ಅಂಥ ಒಳಒಪ್ಪಂದಗಳು ಈಗಾಗಲೇ ಬಯಲಾಗಿವೆ. ಜೆಡಿಎಸ್‍ಗೆ ಇಂಥ ದುರ್ಬುದ್ಧಿ ಇಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ನಮ್ಮ ಆಯ್ಕೆ, ನಿರ್ಧಾರಗಳ ಬಗ್ಗೆ ಮಾತನಾಡುವುದನ್ನು ಕಾಂಗ್ರೆಸ್‍ನ ಮಹಾನ್ ನಾಯಕರು ನಿಲ್ಲಿಸಿದರೆ ಉತ್ತಮ. ಇಲ್ಲವಾದಲ್ಲಿ ಜಾತ್ಯತೀತವಾದಿ ಮುಖವಾಡ ಧರಿಸಿರುವ ಅವರ ಕೋಮುವಾದಿ ಮುಖವನ್ನು ಬಯಲು ಮಾಡಬೇಕಾಗುತ್ತದೆ. ಶತಮಾನಗಳಿಂದ ವೀರನಾಗಿ ಮಲಗಿದ್ದ ಟಿಪ್ಪು ಸುಲ್ತಾನನ್ನು ದೇಶದ್ರೋಹಿಯನ್ನಾಗಿ ಮಾಡಿದ ಮಹಾನ್ ನಾಯಕರು ತೆಪ್ಪಗಿದ್ದರೆ ಸರಿ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X