ಪಡಿತರ ಚೀಟಿಗೆ ಇ-ಕೆವೈಸಿ ಕಡ್ಡಾಯ: ಉಡುಪಿ ಜಿಲ್ಲಾಧಿಕಾರಿ
ಉಡುಪಿ, ಮಾ.26: ಜಿಲ್ಲೆಯ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಹೊಂದಿರುವವರು, ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಕಾರ್ಡಿನ ಸದಸ್ಯರಿಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ತಂತ್ರಾಂಶದಲ್ಲಿ ಬಯೋ ದೃಡೀಕರಣ ನೀಡಿ, ಇ-ಕೆವೈಸಿ ಮಾಡಲು ಪ್ರತಿ ತಿಂಗಳ 1 ರಿಂದ 10 ನೇ ತಾರೀಖಿನ ವರೆಗೆ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ.
ಈವರೆಗೆ ಇ-ಕೆವೈಸಿ ಆಗದೇ ಇರುವ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ದೃಡೀಕರಣ ಮೂಲಕ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





