Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಜಿಲ್ಲೆಯಲ್ಲಿ ಕನ್ನಡ ಬಳಕೆ ಕಡ್ಡಾಯ:...

​ಜಿಲ್ಲೆಯಲ್ಲಿ ಕನ್ನಡ ಬಳಕೆ ಕಡ್ಡಾಯ: ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್

ವಾರ್ತಾಭಾರತಿವಾರ್ತಾಭಾರತಿ26 March 2021 10:36 PM IST
share
​ಜಿಲ್ಲೆಯಲ್ಲಿ ಕನ್ನಡ ಬಳಕೆ ಕಡ್ಡಾಯ: ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ, ಮಾ.26: ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳು, ಖಾಸಗಿ ಸಂಸ್ಥೆಗಳು, ಉದ್ದಿಮೆಗಳು, ಕಾರ್ಖಾನೆಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾನಾಡುತಿದ್ದರು.

ಪ್ರಸ್ತುತ ಕನ್ನಡ ಕಾಯಕ ವರ್ಷವನ್ನು ಆಚರಿಸಲಾಗುತ್ತಿದ್ದು, ಈ ಕುರಿತು ಸರಕಾರದಿಂದ ನೀಡಿರುವ ಅಧಿಕೃತ ಚಿಹ್ನೆಯನ್ನು ಎಲ್ಲಾ ಸರಕಾರಿ ಇಲಾಖೆಗಳು ತಮ್ಮ ದೈನಂದಿನ ಪತ್ರ ವ್ಯವಹಾರಗಳಲ್ಲಿ ಕಡ್ಡಾಯವಾಗಿ ಬಳಸುವಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಇಲಾಖೆಗಳು ತಮ್ಮ ಸಾಮಾಜಿಕ ಜಾಲತಾಣಗಳಾದ ಪೇಸ್ಬುಕ್, ಟ್ವಿಟರ್, ನಲ್ಲಿ ಕನ್ನಡವನ್ನು ಪ್ರಧಾನವಾಗಿ ಬಳಸಬೇಕು, ಗಣಕಯಂತ್ರದಲ್ಲಿ ಸಂಪೂರ್ಣವಾಗಿ ಕನ್ನಡ ತಂತ್ರಾಂಶವನ್ನು ಅಳವಡಿಸಬೇಕು. ವಾಹನಗಳಲ್ಲಿ ಸಂಖ್ಯಾಪಲಕ, ಸರ್ಕಾರಿ ವಾಹನಗಳ ನಾಮಪಲಕಗಳಲ್ಲಿ , ಮೈಲುಗಳಲ್ಲಿ, ಹೆದ್ದಾರಿ ಫಲಕಗಳಲ್ಲಿ ಕನ್ನಡವನ್ನು ಪ್ರಧಾನವಾಗಿ ಬಳಸಬೇಕು. ಜಿಲ್ಲಾ ಪಂಚಾಯತ್‌ನ ಕೆಡಿಪಿ ಸಭೆಗಳಲ್ಲಿ ಕನ್ನಡವನ್ನು ಒಂದು ಅಂಶವಾಗಿ ಚರ್ಚೆ ಮಾಡಬೇಕು ಎಂದರು.

ಜಿಲ್ಲೆಯ ಎಲ್ಲಾ ಅಂಗಡಿಗಳು ಕಂಪೆನಿ-ಕಚೇರಿ, ಹೋಟೆಲ್‌ಗಳು, ವಾಣಿಜ್ಯ ಸಂಕೀರ್ಣಗಳು, ಚಿತ್ರಮಂದಿರಗಳ ನಾಮಪಲಕಗಳಲ್ಲಿ ಶೇ.60ರಷ್ಟು ಭಾಗ ಕಡ್ಡಾಯ ವಾಗಿ ಕನ್ನಡವನ್ನು ಹೊಂದಿರಬೇಕು.ಸರಕಾರಿ ಇಲಾಖೆಗಳು ಆಂಗ್ಲಬಾಷೆಯಲ್ಲಿ ವಾರ್ಷಿಕ ದರಪಟ್ಟಿ, ಅಂದಾಜು ಪಟ್ಟಿ, ಟೆಂಡರ್‌ಗಳನ್ನು ಪತ್ರಿಕೆಗಳಿಗೆ ನೀಡುತ್ತಿರುವ ಬಗ್ಗೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.

ಸರಕಾರಿ ಶಾಲೆಗಳಲ್ಲಿ ಶಾಲೆಗಳ ದುರಸ್ತಿ, ಗ್ರಂಥಾಲಯ, ಗುಣಮಟ್ಟದ ಶಿಕ್ಷಣ, ಮೂಲಸೌಲಭ್ಯ ಅಭಿವೃದ್ಧಿಗೊಳಿಸಬೇಕು ಎಂದ ಅವರು , ಜಿಲ್ಲೆಯ ಎಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳು ಒಳಗೊಂಡಂತೆ ಮತ್ತು ಕೇಂದ್ರೀಯ ವಿದ್ಯಾಲಯಗಳಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುತ್ತಿರುವ ಬಗ್ಗೆ ಪರಿಶೀಲಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನಗರಸಭಾ ವ್ಯಾಪ್ತಿಯ ಗೋಡೆಗಳಲ್ಲಿ ಕನ್ನಡ ಕವಿಗಳ ಚಿತ್ರಗಳನ್ನು ಹಾಗೂ ಕನ್ನಡ ಅಕ್ಷರ ಮಾಲೆಗಳನ್ನು ರಚಿಸುವ ಮೂಲಕ ಕನ್ನಡ ಜಾಗೃತಿ ಮೂಡಿಸುವಂತೆ ನಗರಸಬೆ ಅಧಿಕಾರಿಗಳಿಗೆ ಸೂಚನೆ ನೀಡಿದ ಡಿಸಿ, ಎಲ್ಲಾ ಬ್ಯಾಂಕುಗಳಲ್ಲಿ ಅರ್ಜಿ ನಮೂನೆಗಳನ್ನು ಕನ್ನಡದಲ್ಲಿ ಮುದ್ರಿಸುವ ಕುರಿತಂತೆ ಲೀಡ್ ಬ್ಯಾಂಕ್ ಮೆನೇಜರ್ ಗೆ ಸೂಚನೆ ನೀಡಿದರು..

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇರ್ಶಕ ಕುಮಾರ ಬೆಕ್ಕೆರಿ ಮಾತನಾಡಿ ಕನ್ನಡವನ್ನು ಉಳಿಸಿ ಬೆಳೆಸುವ ದೃಷ್ಟಿಯಿಂದ ಆಡಳಿತದ ಎಲ್ಲಾ ವಲಯಗಳಲ್ಲಿ ಕನ್ನಡಪರ ಆದೇಶಗಳನ್ನು ಸಮರ್ಪಕವಾಗಿ ಕಾರ್ಯಗತಗೊಳಿಸುವುದು ಕನ್ನಡ ಪರ ಆದೇಶ ಮತ್ತು ಸುತ್ತೋಲೆಗಳ ಸಂಕಲನವು ಕನ್ನಡ ಅಭಿವೃದ್ಧಿ ಪ್ರಾಧಿಕಾದ ಜಾಲತಾಣದಲ್ಲಿ ಲ್ಯವಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ , ರಂಗೂಮಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ, ಡಾ.ಕಾತ್ಯಾಯಿನಿ ಕುಂಜಿಬೆಟ್ಟು, ದೀಪಿಕಾ ಭಟ್, ಶಿಲ್ಪಾಜೋಶಿ ಆತಾ್ರಡಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X