Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ಕ್ರಮ...

ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಥೋಲಿಕ್ ಒಕ್ಕೂಟ ಆಗ್ರಹ

ರೈಲಿನಲ್ಲಿ ಕ್ರೈಸ್ತ ಸನ್ಯಾಸಿನಿಯರಿಗೆ ಕಿರುಕುಳ

ವಾರ್ತಾಭಾರತಿವಾರ್ತಾಭಾರತಿ26 March 2021 10:57 PM IST
share
ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಥೋಲಿಕ್ ಒಕ್ಕೂಟ ಆಗ್ರಹ

ಹೊಸದಿಲ್ಲಿ, ಮಾ. 26: ಉತ್ತರಪ್ರದೇಶದ ಝಾನ್ಸಿಯ ಸಮೀಪ ಚಲಿಸುತ್ತಿರುವ ರೈಲಿನಲ್ಲಿ ಸೇಕ್ರೆಡ್ ಹಾರ್ಟ್‌ನ ಇಬ್ಬರು ಕ್ರೈಸ್ತ ಸನ್ಯಾಸಿನಿಯರು ಹಾಗೂ ಇಬ್ಬರು ವಿದ್ಯಾರ್ಥಿ ಕ್ರೈಸ್ತ ಸನ್ಯಾಸಿನಿಯರಿಗೆ ಕಿರುಕುಳ ನೀಡಿದ ಘಟನೆಯಲ್ಲಿ ಭಾಗಿಯಾದ ಸಂಘಪರಿವಾರದ ಕಾರ್ಯಕರ್ತರು ಹಾಗೂ ಪೊಲೀಸರ ವಿರುದ್ಧ ಅನುಕರಣೀಯ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಅಖಿಲ ಭಾರತ ಕೆಥೋಲಿಕ್ ಒಕ್ಕೂಟ ಬುಧವಾರ ಆಗ್ರಹಿಸಿದೆ.

ಇಂತಹ ಘಟನೆಗಳು ದೇಶಕ್ಕೆ ಕೆಟ್ಟ ಹೆಸರು ಎಂದು 101 ವರ್ಷ ಹಳೆಯ ಕೆಥೋಲಿಕ್ ಒಕ್ಕೂಟ ಎಚ್ಚರಿಸಿದೆ. ಅಲ್ಲದೆ, ವಿಶ್ವಸಸಂಸ್ಥೆ ಹಾಗೂ ಇತರ ಅಂತರ್ ರಾಷ್ಟ್ರೀಯ ಮಾನವ ಹಕ್ಕುಗಳ ಗುಂಪು ತಮ್ಮ ವರದಿಯಲ್ಲಿ ಉಲ್ಲೇಖಿಸಲು ಕಾರಣವಾಗುತ್ತದೆ ಎಂದು ಅದು ಹೇಳಿದೆ.

ದಿಲ್ಲಿಯ ಸೇಕ್ರೆಡ್ ಹಾರ್ಟ್‌ನ ಇಬ್ಬರು ಕ್ರೈಸ್ತ ಸನ್ಯಾಸಿನಿಯರು ಹಾಗೂ ಇಬ್ಬರು ವಿದ್ಯಾರ್ಥಿ ಕ್ರೈಸ್ತ ಸನ್ಯಾಸಿನಿಯರಿಗೆ ಸಂಘ ಪರಿವಾರದವರು ರೈಲಿನಲ್ಲಿ ಕಿರುಕುಳ ನೀಡಿದ್ದರು. ಅನಂತರ ರೈಲ್ವೆ ಪೊಲೀಸರು ಕ್ರೈಸ್ತ ಸನ್ಯಾಸಿನಿಯರನ್ನು ಝಾನ್ಸಿಯಲ್ಲಿ ಕೆಳಗೆ ಇಳಿಸಿದ್ದರು. ಸಂಘಪರಿವಾರದ ಕಾರ್ಯಕರ್ತರು ‘ಜೈ ಶ್ರೀರಾಮ್’ ಹಾಗೂ ‘ಜೈ ಹನುಮಾನ್’ ಎಂದು ಘೋಷಣೆ ಕೂಗುತ್ತಿರುವ ಈ ಘಟನೆಯ ವೀಡಿಯೊ ವೈರಲ್ ಆಗಿತ್ತು. ಕ್ರೈಸ್ತ ಸನ್ಯಾಸಿನಿಯರು ಮತಾಂತರ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸುತ್ತಿರುವುದು, ತಾವು ಕ್ರಿಶ್ಚಿಯನ್ನರು ಎಂದು 19 ವರ್ಷದ ವಿದ್ಯಾರ್ಥಿನಿ ಗುರುತು ಚೀಟಿಯನ್ನು ತೋರಿಸುತ್ತಿರುವುದು, ಆದರೂ ಸಂಘ ಪರಿವಾರದ ಕಾರ್ಯಕರ್ತರು ಹಿಂದಿರುಗದೇ ಇರುವುದು ವೀಡಿಯೊದಲ್ಲಿ ದಾಖಲಾಗಿತ್ತು. ಉತ್ತರಪ್ರದೇಶ ಪೊಲೀಸರು ಸಂಘ ಪರಿವಾರದ ಕಾರ್ಯಕರ್ತರು ಕಿರುಕುಳ ನೀಡುವುದನ್ನು ತಡೆಯುವ ಬದಲು ಕೈಸ್ತ ಸನ್ಯಾಸಿನಿಯರನ್ನು ರೈಲಿನಿಂದ ಬಲವಂತವಾಗಿ ಕೆಳಗೆ ಇಳಿಸಿದ್ದಾರೆ ಹಾಗೂ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಕೆಥೋಲಿಕ್ ಒಕ್ಕೂಟ ಆರೋಪಿಸಿದೆ.

ಇಬ್ಬರು ಮಹಿಳೆಯರು ಕೇರಳದವರಾಗಿರುವುದರಿಂದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಘಟನೆ ಕುರಿತು ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರು. ಕೇರಳದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘‘ಕ್ರಿಮಿನಲ್‌ಗಳನ್ನು ಕಾನೂನಿನ ಮುಂದೆ ತರಲಾಗುವುದು’’ ಎಂದು ಹೇಳಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬರೆದ ಪತ್ರದಲ್ಲಿ ಎಐಸಿಯು ರಾಷ್ಟ್ರಾಧ್ಯಕ್ಷ ಲ್ಯಾನ್ಸಿ ಡಿ ಕುನ್ಹಾ, ‘‘ತಮ್ಮನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗದ ನಿಸ್ಸಹಾಯಕ ಜನರ ಮೇಲೆ ನಕಲಿ ರಕ್ಷಕ ಗುಂಪುಗಳು ಭೀತಿ ಹುಟ್ಟಿಸದಂತೆ ದೇಶದ ಅಲ್ಪಸಂಖ್ಯಾತರಿಗೆ ಭಾರತದ ಪ್ರಧಾನಿ ಹಾಗೂ ನೀವು ಭರವಸೆ ನೀಡಬೇಕು’’ ಎಂದು ಹೇಳಿದ್ದಾರೆ. ಇಂತಹ ಅಪರಾಧಗಳಲ್ಲಿ ತೊಡಗುವುದನನ್ನು ಕಂಡರೆ ಹಾಗೂ ಸ್ವಘೋಷಿತ ನಕಲಿ ರಕ್ಷಕರು ಕಾನೂನನ್ನು ಕೈಗೆತ್ತಿಕೊಳ್ಳುವ ಸಂದರ್ಭ ಮೂಕ ಪ್ರೇಕ್ಷಕರಾಗುವ ಪೊಲೀಸರ ವಿರುದ್ಧ ಕಠಿಣ ಶಿಸ್ತು ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಕೇಂದ್ರ ಸರಕಾರದ ಎಚ್ಚರಿಕೆ ನೀಡಬಹುದು ಎಂದು ಕೂಡ ನಾವು ನಿರೀಕ್ಷಿಸುತ್ತೇವೆ ಎಂದು ಎಐಸಿಯು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X