ಮಾ.27ರಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ
ಬೆಂಗಳೂರು, ಮಾ.26: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಾ.27, 28 ಹಾಗೂ 29ರಂದು ಚಂದನ ವಾಹಿನಿಯಲ್ಲಿ ಸರ್ ಸಿ.ವಿ.ರಾಮನ್ ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ‘ಥಟ್ ಅಂತ ಹೇಳಿ’ ಕಾರ್ಯಕ್ರಮವನ್ನು ಆಯೋಜಿದೆ.
ನಗರದ ಜಯಮಹಲ್‍ನಲ್ಲಿರುವ ಕರ್ನಾಟಕ ಸ್ಟೇಟ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್‍ಫೇರ್ ನಲ್ಲಿ ಮಾ.27ರಂದು ಬೆಳಗ್ಗೆ 10.30ಕ್ಕೆ ಹಿರಿಯ ವಿಜ್ಞಾನಿ ಪ್ರೊ.ಎಂ.ಆರ್.ಎನ್.ಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‍ನ ಅಧ್ಯಕ್ಷ ಗಿರೀಶ ಕಡ್ಲೇವಾಡ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವೇಳೆ ಎಚ್.ಜಿ.ಹುದ್ದಾರ್, ಎಚ್.ಎಸ್.ಟಿ.ಸ್ವಾಮಿ, ಪಿ.ಎಸ್.ಕೌಶಿಕ್, ಫ್ರಾನ್ಸಿಸ್ ಜಿ.ಬೆಂಜಮಿನ್ ಮತ್ತಿತರರು ಭಾಗವಹಿಸಲಿದ್ದಾರೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story





