Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡು ಸಿಎಂ ಪಳನಿಸ್ವಾಮಿ ಅವರನ್ನು...

ತಮಿಳುನಾಡು ಸಿಎಂ ಪಳನಿಸ್ವಾಮಿ ಅವರನ್ನು ‘ಸ್ಟಾಲಿನ್ ಚಪ್ಪಲಿ’ ಗೆ ಹೋಲಿಸಿದ ಡಿಎಂಕೆ ನಾಯಕ

ವಾರ್ತಾಭಾರತಿವಾರ್ತಾಭಾರತಿ27 March 2021 11:39 AM IST
share
ತಮಿಳುನಾಡು ಸಿಎಂ ಪಳನಿಸ್ವಾಮಿ ಅವರನ್ನು ‘ಸ್ಟಾಲಿನ್ ಚಪ್ಪಲಿ’ ಗೆ ಹೋಲಿಸಿದ ಡಿಎಂಕೆ ನಾಯಕ

ಚೆನ್ನೈ: ಇಪಿಎಸ್ ಎಂದು ಜನಪ್ರಿಯವಾಗಿರುವ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರ ಮೌಲ್ಯ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರ ಚಪ್ಪಲಿಗಿಂತ ಕಡಿಮೆ ಎಂದು ಹೇಳಿರುವ ಮಾಜಿ ಕೇಂದ್ರ ಸಚಿವ ಎ.ರಾಜಾ ವಿವಾದವನ್ನು ಹುಟ್ಟುಹಾಕಿದ್ದಾರೆ.

ವೆಲ್ಲಮಂಡಿ(ಬೆಲ್ಲದ ಮಾರುಕಟ್ಟೆ)ಯಲ್ಲಿ ಕೆಲಸ ಮಾಡಿರುವ ಎಡಪ್ಪಾಡಿ ಪಳನಿಸ್ವಾಮಿ ಅವರು ಸ್ಟಾಲಿನ್‍ಗೆ ಸ್ಪರ್ಧೆಯೊಡ್ಡಬಲ್ಲರೇ? ಸ್ಟಾಲಿನ್ ಅವರ ಚಪ್ಪಲಿಯ ಮೌಲ್ಯವು ಪಳನಿಸ್ವಾಮಿಗಿಂತ  ಒಂದು ರೂಪಾಯಿ ಜಾಸ್ತಿಯೇ ಇದೆ. ಸ್ಟಾಲಿನ್ ಗೆ ಸವಾಲು ಹಾಕುವ ಧೈರ್ಯ ಅವರಿಗಿದೆಯೇ ಎಂದು ಚುನಾವಣಾ ಸಭೆಯೊಂದರಲ್ಲಿ ರಾಜಾ ಹೇಳಿದ್ದರು.

ನೆಹರೂ, ಇಂದಿರಾಗಾಂಧಿ ಹಾಗೂ ಮೋದಿಗೆ ಇರದ ಧೈರ್ಯವನ್ನು ಎಡಪ್ಪಾಡಿ ತೋರಿಸುತ್ತಿದ್ದಾರೆ. ಏಕೆಂದರೆ ಅವರು ಲೂಟಿ ಹೊಡೆದ ಹಣದ ಮೇಲೆ ನಂಬಿಕೆ ಇಟ್ಟಿದ್ದಾರೆ. ಪಕ್ಷವು ತನ್ನನ್ನು ಉಳಿಸುತ್ತದೆ ಎಂದು ನಂಬಿದ್ದಾರೆ. ಸ್ಟಾಲಿನ್ ಅವರನ್ನು ತಡೆಯುತ್ತೇನೆ ಎಂದು ಅವರು ಹೇಳುತ್ತಾರೆ. ಅವರು ಒಂದು ದಿನ ಹಾಗೆ ಮಾಡಿದರೆ ಅವರ ಕಾರು ಅವರ ಮನೆಯಿಂದ ಕಚೇರಿಗೆ ಹೋಗುವುದಿಲ್ಲ ಎಂದು ವಿನಮ್ರದಿಂದ ಹೇಳುವೆ ಎಂದು ರಾಜಾ ಹೇಳಿದ್ದಾರೆ.

ರಾಜಾ ಅವರ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಿದ ಪಳನಿಸ್ವಾಮಿ, ತಾನು ಕೃಷಿಕ, ಬಡ ಕುಟುಂಬದಿಂದ ಬಂದವನು. ಆದ್ದರಿಂದ ವಿನಮ್ರನಾಗಿರುತ್ತೇನೆ. ಸ್ಟಾಲಿನ್ ತಂದೆ ಮುಖ್ಯಮಂತ್ರಿಯಾಗಿದ್ದರಿಂದ ಅವರು ಬೆಳ್ಳಿ ಚಮಚ ಬಾಯಲ್ಲಿಟ್ಟುಕೊಂಡು ಜನಿಸಿದವರು. ಹಗರಣವನ್ನು ಮಾಡಿದ ಏಕೈಕ ಪಕ್ಷ ಡಿಎಂಕೆ. ಅವರು(ರಾಜಾ)ಬಳಸಿದ ಭಾಷೆ ಯಾವುದು ನೋಡಿ. ನನ್ನ ಮೌಲ್ಯವು ಸ್ಟಾಲಿನ್ ಧರಿಸಿರುವ ಚಪ್ಪಲಿಗಿಂತ ಒಂದು ರೂಪಾಯಿ ಕಡಿಮೆಯಂತೆ. ಮುಖ್ಯಮಂತ್ರಿಯನ್ನು ಚಪ್ಪಲಿಗೆ ಹೋಲಿಸಿದ್ದು ಸರಿಯೇ? ನಾನು ಯಾರೆಂದು ಎಲ್ಲರಿಗೂ ಗೊತ್ತಿದೆ. ನಾನು ಕೃಷಿಕ. ನಾವು ಬಡವರು. ನಾವು ಕಷ್ಟಪಟ್ಟು ದುಡಿಯುತ್ತೇವೆ. ನಾವು ನಿಭಾಯಿಸಬಹುದಾದ್ದನ್ನು ಮಾತ್ರ ಖರೀಸುತ್ತೇವೆ. ಆದರೆ ಅವರು ಹಾಗಲ್ಲ. ಅವರು 1.76 ಲಕ್ಷ ಕೋಟಿ ಭ್ರಷ್ಟಾಚಾರ ಹಗರಣ ಹಿಂದಿದ್ದವರು. ಅವರು ಏನು ಬೇಕಾದರೂ ಖರೀದಿಸಬಹುದು ಎಂದು ಇಪಿಎಸ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X