Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿಡಿ ಸಂತ್ರಸ್ತೆ ನನ್ನನ್ನು...

ಸಿಡಿ ಸಂತ್ರಸ್ತೆ ನನ್ನನ್ನು ಭೇಟಿಯಾಗಿಲ್ಲ, ಭೇಟಿಯಾದರೆ ಸಹಾಯ ಮಾಡುವ ಬಗ್ಗೆ ಪರಿಶೀಲಿಸುತ್ತೇನೆ: ಡಿಕೆಶಿ

ವಾರ್ತಾಭಾರತಿವಾರ್ತಾಭಾರತಿ27 March 2021 12:56 PM IST
share
ಸಿಡಿ ಸಂತ್ರಸ್ತೆ ನನ್ನನ್ನು ಭೇಟಿಯಾಗಿಲ್ಲ, ಭೇಟಿಯಾದರೆ ಸಹಾಯ ಮಾಡುವ ಬಗ್ಗೆ ಪರಿಶೀಲಿಸುತ್ತೇನೆ: ಡಿಕೆಶಿ

ಬೆಂಗಳೂರು, ಮಾ.27: ‘ಸಿ.ಡಿ ಪ್ರಕರಣದಲ್ಲಿನ ಸಂತ್ರಸ್ತ ಯುವತಿ ಇದುವರೆಗೆ ನನ್ನನ್ನು ಭೇಟಿಯಾಗಿಲ್ಲ. ಸಮಸ್ಯೆ ಇಟ್ಟುಕೊಂಡು ಯಾರೇ ಬಂದರೂ ಪ್ರಾಮಾಣಿಕವಾಗಿದ್ದರೆ ಸಹಾಯ ಮಾಡುತ್ತೇನೆ. ಈಗಲೂ ನನ್ನನ್ನು ಭೇಟಿಯಾದರೆ ಆಕೆಗೆ ಸಹಾಯ ಮಾಡುವ ಬಗ್ಗೆ ಪರಿಶೀಲಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ತಾನು ಡಿಕೆಶಿಯವರನ್ನು ಭೇಟಿಯಾಗಲು ಯತ್ನಿಸಿದ್ದಾಗಿ ಸಿಡಿ ಪ್ರಕರಣದ ಸಂತ್ರಸ್ತೆಯ ವೀಡಿಯೋ ಹೇಳಿಕೆ ಕುರಿತಂತೆ ಶನಿವಾರ‌ ಮಾಧ್ಯಮದವರ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

‘ನಾವು ರಾಜಕಾರಣಿಗಳು ಹಾಗೂ ನೀವು ಮಾಧ್ಯಮದವರು ಸಾರ್ವಜನಿಕ ಜೀವನದಲ್ಲಿ ಇರುವವರು. ಯಾವುದೇ ಪಕ್ಷದ ರಾಜಕಾರಣಿ ಆದರೂ ನೊಂದವರಿಗೆ, ಕಷ್ಟ ಅಂತಾ ಬಂದವರಿಗೆ ಸಹಾಯ ಮಾಡುವ ಪ್ರವೃತ್ತಿ ಹೊಂದಿರುತ್ತಾರೆ. ಹಾಗೇ ಆ ಹೆಣ್ಣು ಮಗಳು ನನ್ನ ಭೇಟಿಗೆ ಪ್ರಯತ್ನಿಸಿದ್ದೆ ಅಂತಾ ಹೇಳಿದ್ದಾಳೆ.

ಸಂಕಷ್ಟ ಹೇಳಿಕೊಂಡು ಬಂದವರಿಗೆ ನಾವು ಸಹಾಯ ಮಾಡುತ್ತೇವೆ. ದಿನ ಬೆಳಗಾದರೆ ನನ್ನ ಮನೆ ಬಳಿ ಬಂದು ನೋಡಿ. ಅನೇಕರು ಹಣಕಾಸು ಸಮಸ್ಯೆ, ಸರ್ಕಾರದಿಂದ ತೊಂದರೆ, ಕೌಟುಂಬಿಕ ಸಮಸ್ಯೆ ಹೇಳಿಕೊಂಡು ಬರುತ್ತಾರೆ. ಅದೇ ರೀತಿ ಯಾರು ಬೇಕಾದರೂ ಬಂದು ಭೇಟಿ ಮಾಡಬಹುದು.

 ಒಂದು ವೇಳೆ ನಮ್ಮಿಂದ ಯಾರಿಗಾದರೂ ತೊಂದರೆಯಾದರೆ ಆಡಳಿತ ಪಕ್ಷದವರ ಬಳಿ ಹೋಗುತ್ತಾರೆ. ಅದೇ ರೀತಿ ಆ ಯುವತಿ ಬಂದಿರ ಬಹುದು. ನಾನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಒಂದು ವೇಳೆ ಆಕೆ ಬಂದರೂ ನಾನು ಪರಿಶೀಲನೆ ಮಾಡುತ್ತೇನೆ. ನಮ್ಮ ಸರ್ಕಾರದ ಶಾಸಕರನ್ನು ಸೆಳೆಯುತ್ತೇವೆ ಎಂದಾಗ ಅವರನ್ನು ಟ್ರ್ಯಾಕ್ ಮಾಡಿದ್ದು ನಿಜ. ಯಾರು ಯಾರ ಜತೆ ಮಾತನಾಡುತ್ತಿದ್ದಾರೆ, ಎಲ್ಲಿ ಹೋಗುತ್ತಿದ್ದಾರೆ ಎಂದು ಗಮನಿಸಿದ್ದೆವು. ಆದರೆ ಇದು ಅವರ ವೈಯಕ್ತಿಕ ವಿಚಾರ. ಅದರ ಅವಶ್ಯಕತೆ ನಮಗಿಲ್ಲ ಎಂದರು.

ನರೇಶ್ ಮಾಧ್ಯಮದ ವ್ಯಕ್ತಿ. ನನಗೆ ಪರಿಚಯಸ್ಥ. ನನಗೆ ಬೇಕಾದ ಹುಡುಗ. ಅವರ ಮನೆಗೂ ಹೋಗಿದ್ದೇನೆ. ಅನೇಕ ಬಾರಿ ಭೇಟಿ ಮಾಡಿದ್ದು, ಅನೇಕ ವಿಚಾರಗಳನ್ನು ಆತ ಹಂಚಿಕೊಂಡಿದ್ದ.

ರಮೇಶ್ ಜಾರಕಿಹೊಳಿ ನನ್ನನ್ನು ಸ್ಮರಿಸಿಕೊಂಡರೆ, ನಾನ್ಯಾಕೆ ಬೇಡ ಎನ್ನಲಿ. ನನ್ನ ಬಗ್ಗೆ ಅವರಿಗೆ ಅನುಕಂಪ ಇರುವುದಕ್ಕೆ ಬಹಳ ಸಂತೋಷ.

ರಕ್ಷಣೆ ನೀಡುವುದು ಸರ್ಕಾರದ ಕೆಲಸ. ಪೊಲೀಸ್ ಇಲಾಖೆಯಲ್ಲಿ ಉತ್ತಮ ಅಧಿಕಾರಿಗಳಿದ್ದಾರೆ. ಅವರಿಗೆ ಅವರದೇ ಆದ ಘನತೆ ಇದೆ. ಅವರು ಸೂಕ್ತ ರಕ್ಷಣೆ ನೀಡುತ್ತಾರೆ. ಯುವತಿ ಪೋಷಕರು ಯಾರ ಬಳಿ ಇದ್ದಾರೆ ಅಂತಾ ನನಗೆ ಗೊತ್ತಿಲ್ಲ. ಅದು ಆ ಯುವತಿಗೇ ಗೊತ್ತು. ನಾನು ಅದನ್ನು ಯಾಕೆ ಟ್ರ್ಯಾಕ್ ಮಾಡಲಿ.’ ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X