Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರ ಸರಕಾರದಲ್ಲಿ ಸರ್ವಾಧಿಕಾರಿ ಧೋರಣೆ...

ಕೇಂದ್ರ ಸರಕಾರದಲ್ಲಿ ಸರ್ವಾಧಿಕಾರಿ ಧೋರಣೆ ಶುರುವಾಗಿದೆ: ಸಚಿವ ಮಾಧುಸ್ವಾಮಿ ಅಸಮಾಧಾನ

"ಕರ್ನಾಟಕದ ಜನರು ಹೋರಾಟ ಮಾಡುವುದಿಲ್ಲ. ಏಕೆಂದರೆ..."

ವಾರ್ತಾಭಾರತಿವಾರ್ತಾಭಾರತಿ27 March 2021 7:55 PM IST
share
ಕೇಂದ್ರ ಸರಕಾರದಲ್ಲಿ ಸರ್ವಾಧಿಕಾರಿ ಧೋರಣೆ ಶುರುವಾಗಿದೆ: ಸಚಿವ ಮಾಧುಸ್ವಾಮಿ ಅಸಮಾಧಾನ

ಮೈಸೂರು, ಮಾ.27: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೆಲವು ನೀತಿಗಳಿಂದ ಪ್ರಾದೇಶಿಕತೆಗೆ ಧಕ್ಕೆ ಬರುತ್ತಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಮ್ಮದೇ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಜೆಎಸ್‍ಎಸ್ ಮಹಿಳಾ ಕಾಲೇಜಿನಲ್ಲಿ ಶನಿವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಬಿ.ಎಸ್.ಸಿದ್ದಲಿಂಗಶೆಟ್ಟರ ದತ್ತಿ, ಸಿದ್ದಮಣ್ಣಿ ಸಿದ್ದಲಿಂಗಶೆಟ್ಟರ ದತ್ತಿ, ಸಿದ್ದನಂಜಪ್ಪ ದತ್ತಿ, ಶಾಂತಾದೇವಿ ಸಿದ್ದನಂಜಪ್ಪ ದತ್ತಿ ವತಿಯಿಂದ “ರಾಷ್ಟ್ರೀಯ ಐಕ್ಯತೆ ಮತ್ತು ಪ್ರಾದೇಶಿಕ ಸ್ವಾತಂತ್ರ್ಯ” ವಿಷಯದ ಬಗ್ಗೆ ನಡೆದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರದಲ್ಲಿ ಸಾರ್ವಭೌಮ ಹಾಗೂ ಸರ್ವಾಧಿಕಾರಿ ಧೋರಣೆ ಶುರುವಾಗಿರುವುದು ಏಕತೆಗೆ ಭಾರೀ ದೊಡ್ಡ ಆತಂಕ. ಕೇಂದ್ರ ಸರ್ಕಾರದ ಕೆಲವು ನೀತಿಗಳಿಂದಾಗಿ ಪ್ರಾದೇಶಿಕತೆಗೆ ಧಕ್ಕೆ ಬರುತ್ತಿದೆ. ರಾಜ್ಯ ಪಟ್ಟಿಯಲ್ಲಿರುವ ಇಲಾಖೆಗಳು ನಿಧಾನವಾಗಿ ಕೇಂದ್ರದ ಕೈ ಸೇರುತ್ತಿದ್ದು, ಎಲ್ಲವೂ ವಿಕೇಂದ್ರೀಕರಣ ಆಗುವ ಬದಲು ಕೇಂದ್ರೀಕರಣ ಆಗುತ್ತಿದೆ ಎಂದು ಹೇಳಿದರು.

ಸರ್ವಾಧಿಕಾರಿ ಧೋರಣೆಯಿಂದ ಎಂದಿಗೂ ಪ್ರಾದೇಶಿಕ ಸ್ವಾತಂತ್ರ್ಯಕ್ಕೆ ಒಳಿತಾಗುವುದಿಲ್ಲ. ಅಲ್ಲದೆ ಕೇಂದ್ರ ಸರ್ಕಾರದ ಸಾಕಷ್ಟು ಯೋಜನೆಗಳು ಉತ್ತಮ ಪರಿಸ್ಥಿತಿಯಲ್ಲಿರುವವರಿಗೆ ಇನ್ನಷ್ಟು ಸವಲತ್ತುಗಳನ್ನು ನೀಡುತ್ತಿವೆ. ಸ್ವಾತಂತ್ರ್ಯ ಬಂದಾಗ 16 ರಾಜ್ಯಗಳಿದ್ದವು. ಆದರೆ ಈಗ 29 ರಾಜ್ಯಗಳಿವೆ. ಎಲ್ಲ ರಾಜ್ಯಗಳಲ್ಲಿಯೂ ಅಭಿವೃದ್ಧಿ ಒಂದೆರಡು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿರುವ ಕಾರಣ ಮಿಕ್ಕ ಜಿಲ್ಲೆಗಳು ಬೇರೆ ರಾಜ್ಯ ಕೇಳುತ್ತಿವೆ. ಉತ್ತರ ಕರ್ನಾಟಕ ವಿಚಾರದಲ್ಲಿಯೂ ಇದೇ ಆಗಿದೆ, ತೆಲಂಗಾಣ ರಾಜ್ಯ ಸೃಷ್ಟಿಯಾಗಲೂ ಇದೇ ಕಾರಣ ಎಂದು ಹೇಳಿದರು.

ಕರ್ನಾಟಕದಲ್ಲಿ ಇರುವ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡಿಗರಿಗೆ ಅವಕಾಶ ಇಲ್ಲ. ತುಮಕೂರಿನಲ್ಲಿ ಪ್ರಧಾನಿ ಉದ್ಘಾಟನೆ ಮಾಡಿದ ಫುಡ್ ಪಾರ್ಕ್, ಬೆಂಗಳೂರಿನಲ್ಲಿರುವ ಕಂಪನಿಗಳು. ಹೀಗೆ ಎಲ್ಲಿಯೂ ಕನ್ನಡಿಗರಿಗೆ ಆದ್ಯತೆ ಇದೆ. ಜಾಗ, ಸೌಲಭ್ಯ ಎಲ್ಲವೂ ನಮ್ಮದಾದರೂ ಉದ್ಯೋಗ ಮಾತ್ರ ಬೇರೆಯವರಿಗೆ ಸೇರಿದೆ. ಇದರ ವಿರುದ್ಧ ತಮಿಳುನಾಡಿನಂತಹ ರಾಜ್ಯಗಳು ಹೋರಾಟ ಮಾಡಿ ತಮ್ಮ ರಾಜ್ಯದವರಿಗೆ ಅನುಕೂಲವಾಗುವಂತೆ ಮಾಡಿದವು. ಆದರೆ ಕರ್ನಾಟಕದ ಜನರು ಹೋರಾಟ ಮಾಡುವುದಿಲ್ಲ. ಏಕೆಂದರೆ ನಾವು ರಾಷ್ಟ್ರೀಯವಾದಿಗಳು ಎಂದು ವ್ಯಂಗ್ಯವಾಡಿದರು.

ಕ್ರೈಸ್ತ ಧರ್ಮದ ಪ್ರತಿಪಾದನೆ ಬಸವಣ್ಣನ ತತ್ವಗಳಿಗೆ ಹತ್ತಿರವಾದದ್ದು. ಅವರು ಆಮಿಷಗಳನ್ನು ತೋರಿಸಿ ಧಾರ್ಮಿಕವಾಗಿ ತುಳಿತಕ್ಕೆ ಒಳಗಾಗಿದ್ದವರನ್ನು ತಮ್ಮ ಧರ್ಮಕ್ಕೆ ಕರೆಸಿಕೊಂಡರೆ ಬಸವಣ್ಣ ಅವರಿಗೆ ಸಮಾನತೆ ಒದಗಿಸಿಕೊಡಲು ಆ ಕೆಲಸ ಮಾಡಿದರು. ಆದರೆ ಇಂದು ಬಸವಣ್ಣನ ಅನುಯಾಯಿಗಳಲ್ಲೇ ಸಾಕಷ್ಟು ಬೇಧಗಳಿವೆ, ಭಿನ್ನಾಭಿಪ್ರಾಯ ಹಾಗೂ ಅಸಮಾನತೆ ಇದೆ. ಇದನ್ನು ಹೋಗಲಾಡಿಸಬೇಕಾದುದು. ನಮ್ಮ ಕರ್ತವ್ಯ ಎಂದು ಹೇಳಿದರು.

ಸಂಸದ ತೇಜಸ್ವಿ ಸೂರ್ಯ, ವಿಧಾನಪರಿಷತ್ ಸದಸ್ಯ ರವಿಕುಮಾರ್, ಎಸ್‍ವಿವೈಎಂ ಸಂಸ್ಥಾಪಕ ನಿರ್ದೇಶಕ ಡಾ.ಆರ್.ಬಾಲಸುಬ್ರಹ್ಮಣ್ಯಂ , ವಿಧಾನಪರಿಷತ್ ಮಾಜಿ ಸದಸ್ಯ ತೋಂಟದಾರ್ಯ, ಡಾ.ಕಮಲ ಕುಮಾರಿ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.​

share
ವಾರ್ತಾಭಾರತಿ
ವಾರ್ತಾಭಾರತಿ
Next Story
X