Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕನ್ಯಾನ: ನಮ್ಮ ಭೂಮಿಯಲ್ಲಿ ಸ್ವಉದ್ಯೋಗ...

ಕನ್ಯಾನ: ನಮ್ಮ ಭೂಮಿಯಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಗಾರ

ವಾರ್ತಾಭಾರತಿವಾರ್ತಾಭಾರತಿ27 March 2021 8:21 PM IST
share
ಕನ್ಯಾನ: ನಮ್ಮ ಭೂಮಿಯಲ್ಲಿ ಸ್ವಉದ್ಯೋಗ ಮಾಹಿತಿ ಕಾರ್ಯಗಾರ

ಕುಂದಾಪುರ, ಮಾ.27: ತಾಲೂಕಿನ ಕನ್ಯಾನದ ನಮ್ಮ ಭೂಮಿಯಲ್ಲಿ ಸೆಲ್ಕೋ ಎನರ್ಜಿ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ಮಣಿಪಾಲ, ತೋಟಗಾರಿಕೆ ಇಲಾಖೆ ಕುಂದಾಪುರ, ಪಶು ವೈದ್ಯಾಧಿಕಾರಿಗಳು ಕುಂದಾಪುರ ಮತ್ತು ಕನ್ಸರ್ನ್ಡ್‌ಫಾರ್ ವರ್ಕಿಂಗ್ ಚಿಲ್ಡ್ರನ್ (ಸಿಡಬ್ಲ್ಯೂಸಿ) ಸಂಸ್ಥೆಗಳ ಸಹಭಾಗಿತ್ವದಲ್ಲಿ ಸ್ಥಳೀಯ ಸಮುದಾಯಕ್ಕೆ ಸ್ವಉದ್ಯೋಗದ ಮಾಹಿತಿ ಕಾರ್ಯಗಾರ ಗುರುವಾರ ನಡೆಯಿತು.

ಸೆಲ್ಕೋ ಎನರ್ಜಿ ಸಂಸ್ಥೆಯ ಗುರುಪ್ರಕಾಶ ಶೆಟ್ಟಿ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯ ಉಪನ್ಯಾಸಕಿ ನವ್ಯ, ಸಿಡಬ್ಲ್ಯೂಸಿ ಸಂಸ್ಥೆಯ ಕಾರ್ಯಕಾರಿ ನಿರ್ದೇಶಕ ಶಿವಮೂರ್ತಿ ಭಂಡಾರ್ಕರ್ ಮತ್ತು ನಮ್ಮಭೂಮಿಯ ಮಕ್ಕಳ ಪಂಚಾಯತ್‌ನ ಅಧ್ಯಕ್ಷ ಪ್ರೀತಮ್ ಅವರು ಒಂದಾಗಿ ಗಿಡಕ್ಕೆ ಗೊಬ್ಬರ ಮತ್ತು ನೀರು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸೆಲ್ಕೋ ಎನರ್ಜಿಯ ಗುರುಪ್ರಕಾಶ ಶೆಟ್ಟಿ ಮಾತನಾಡಿ, ಹಳ್ಳಿಯಲ್ಲಿ ದಿನನಿತ್ಯದ ಬಳಕೆಯ ವಸ್ತುಗಳನ್ನು ಪಟ್ಟಿ ಮಾಡಿ ಅದರಲ್ಲಿ ಹೆಚ್ಚು ಹೆಚ್ಚು ವಸ್ತುಗಳನ್ನು ಹಳ್ಳಿಯಲ್ಲಿಯೇ ಉತ್ಪಾದಿಸುವಂತಾದರೆ ಹಳ್ಳಿಯ ಜನ ವಲಸೆ ಹೋಗುವುದನ್ನು ತಪ್ಪಿಸಬಹುದು ಅಲ್ಲದೇ ಹಳ್ಳಿಯಲ್ಲಿಯೇ ಸ್ವಾವಲಂಬಿ ಜೀವನ ನಡೆಸಬಹುದು ಎಂದರು.

ಮಣಿಪಾಲ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯ ನವ್ಯ ಮಾತನಾಡಿ, ಸ್ವಉದ್ಯೋಗದ ಬಗ್ಗೆ ಇರುವ ಹಿಂಜರಿಕೆ ಮತ್ತು ಕೀಳರಿಮೆ ಭಾವನೆಗಳನ್ನು ತೆಗೆದು ಹಾಕಿ ಆತ್ಮವಿಶ್ವಾಸದಿಂದ ಸ್ವಉದ್ಯೋಗವನ್ನು ಪ್ರಾರಂಭಿಸಿ. ಇಂದಿನ ದಿನಗಳಲ್ಲಿ ಸ್ವ ಉದ್ಯೋಗ ಎಂಬುದು ಅನಿವಾರ್ಯವೂ ಆಗಿದೆ ಎಂದರು.

ಕುಂದಾಪುರದ ಪಶುವೈದ್ಯಾಧಿಕಾರಿ ಡಾ. ಸಂತೋಷ, ಹೈನುಗಾರಿಕೆ ಮತ್ತು ಕೋಳಿ ಸಾಕಾಣಿಕೆಯಲ್ಲಿ ಸ್ವಚ್ಛತೆ ಮತ್ತು ಪೌಷ್ಠಿಕ ಆಹಾರ ನೀಡುವುದು ಹಾಗೂ ಈ ಉದ್ಯೋಗದಿಂದ ಸಿಗುವ ಲಾಭದ ಬಗ್ಗೆ ಮಾಹಿತಿ ನೀಡಿದರು. ಕುಂದಾಪುರ ತೋಟಗಾರಿಕಾ ಇಲಾಖೆಯ ಕಿರಿಯ ಸಹಾಯಕ ನಿರ್ದೇಶಕ ಸಂಜೀವ ನಾಯ್ಕೆ, ಕೃಷಿ ಪೂರಕ ಉದ್ಯೋಗಗಳು ಹಾಗೂ ಸರಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಸಮುದಾಯದ ಮಹಿಳೆಯರು, ಪುರುಷರು ಮತ್ತು ನಮ್ಮಭೂಮಿಯ ತರಬೇತಿ ಮಕ್ಕಳು, ಸಂಸ್ಥೆಯ ಕಾರ್ಯಕರ್ತರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X