Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಕ್‌ಡೌನ್ ಪರಿಹಾರವಲ್ಲ, ಕೊರೋನದೊಂದಿಗೇ...

ಲಾಕ್‌ಡೌನ್ ಪರಿಹಾರವಲ್ಲ, ಕೊರೋನದೊಂದಿಗೇ ಬದುಕುವುದನ್ನು ಕಲಿಯಬೇಕು: ದಿಲ್ಲಿ ಆರೋಗ್ಯ ಸಚಿವ

ವಾರ್ತಾಭಾರತಿವಾರ್ತಾಭಾರತಿ27 March 2021 9:37 PM IST
share
ಲಾಕ್‌ಡೌನ್ ಪರಿಹಾರವಲ್ಲ, ಕೊರೋನದೊಂದಿಗೇ ಬದುಕುವುದನ್ನು ಕಲಿಯಬೇಕು: ದಿಲ್ಲಿ ಆರೋಗ್ಯ ಸಚಿವ

ಹೊಸದಿಲ್ಲಿ, ಮಾ.27: ಎರಡನೇ ಬಾರಿಗೆ ಲಾಕ್‌ಡೌನ್ ವಿಧಿಸುವುದು ಕೊರೋನ ಸೋಂಕಿನ ಸಮಸ್ಯೆಗೆ ಖಂಡಿತಾ ಪರಿಹಾರವಲ್ಲ. ಕೊರೋನದೊಂದಿಗೇ ಬದುಕುವುದನ್ನು ನಾವು ಕಲಿಯಬೇಕಾಗಿದೆ ಎಂದು ದಿಲ್ಲಿಯ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಹೇಳಿದ್ದಾರೆ.

ಶುಕ್ರವಾರದಿಂದ ಶನಿವಾರ ಬೆಳಗ್ಗಿನವರೆಗಿನ 24 ಗಂಟೆಗಳ ಅವಧಿಯಲ್ಲಿ ದಿಲ್ಲಿಯಲ್ಲಿ 1,500ಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣ ಪತ್ತೆಯಾಗಿದೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದ ಆರೋಗ್ಯತಜ್ಞರು, ಕೊರೋನದ ಹೊಸ ಸೋಂಕು ತಳಿ ಇನ್ನೂ ಒಂದು ವರ್ಷ ಸಕ್ರಿಯವಾಗಿರುವ ಸಾಧ್ಯತೆಯಿದ್ದು, ಮತ್ತೊಮ್ಮೆ ಲಾಕ್‌ಡೌನ್‌ನಂತಹ ಕಠಿಣ ಕ್ರಮಗಳನ್ನು ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸುವಂತೆ ಸಲಹೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸತ್ಯೇಂದರ್ ಜೈನ್, ಲಾಕ್‌ಡೌನ್‌ನ ಸಾಧ್ಯತೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ಲಾಕ್‌ಡೌನ್ ವಿಧಿಸಿರುವ ಹಿಂದೆ ವಿವೇಚನೆಯಿತ್ತು. ಸೋಂಕಿನ ವೈರಸ್ ಹೇಗೆ ಹರಡುತ್ತದೆ ಎಂದು ಯಾರಿಗೂ ತಿಳಿದಿರಲಿಲ್ಲ. 21 ದಿನ ಎಲ್ಲಾ ಚಟುವಟಿಕೆ ಸ್ಥಗಿತಗೊಂಡರೆ ಸೋಂಕು ನಿಯಂತ್ರಣಕ್ಕೆ ಬರುತ್ತದೆ ಎಂದು ವರದಿಯಾಗಿತ್ತು. ಆದ್ದರಿಂದ ಲಾಕ್‌ಡೌನ್ ಮುಂದುವರಿಯಿತು. ಆದರೂ ಸೋಂಕಿನ ವೈರಸ್ ನಾಶವಾಗಿಲ್ಲ. ಲಾಕ್‌ಡೌನ್ ಪರಿಹಾರವಲ್ಲ ಎಂಬುದು ತನ್ನ ಭಾವನೆ ಎಂದು ಹೇಳಿದರು. ಇದೊಂದು ಆವರ್ತಕ(ಮತ್ತೆ ಮತ್ತೆ ಬರುವ) ಕಾಯಿಲೆಯಾಗಿದ್ದು ತಕ್ಷಣವೇ ನಾಶವಾಗುವ ಸಾಧ್ಯತೆಯಿಲ್ಲ ಎಂದು ತಜ್ಞರು ಆರಂಭದಿಂದಲೇ ಹೇಳುತ್ತಾ ಬಂದಿದ್ದಾರೆ.

ಸೋಂಕು ದೀರ್ಘಾವಧಿಯೂ ಮುಂದುವರಿಯುವುದಾಗಿ ತಜ್ಞರು ಹೇಳಿರುವುದರಿಂದ ಜನತೆ ಕೊರೋನ ವಿರುದ್ಧದ ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಎರಡು-ಮೂರು ತಿಂಗಳು ಮಾಸ್ಕ್ ಧರಿಸಿದ ಬಳಿಕ ಜನತೆ ನಿರ್ಲಕ್ಷ ತೋರಿದರು. ಆದರೆ ಇದು ಸರಿಯಲ್ಲ, ಮಾಸ್ಕ್ ಧಾರಣೆ ಸೋಂಕು ಹರಡುವುದನ್ನು ನಿಯಂತ್ರಿಸಬಹುದು ಎಂದವರು ಹೇಳಿದ್ದಾರೆ. ಕೊರೋನ ಲಸಿಕೆ ಪಡೆಯುವ ಸಮಯ ಬಂದಾಗ ಅರ್ಹರು ತಪ್ಪದೇ ಲಸಿಕೆ ಪಡೆಯಬೇಕು. ಲಸಿಕೆ ಪಡೆಯುವ ಅವಧಿಯನ್ನು ಬೆಳಿಗೆ 9 ಗಂಟೆಯಿಂದ ರಾತಿ 9ರವರೆಗೆ ವಿಸ್ತರಿಸಲಾಗಿದೆ ಎಂದವರು ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X