Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಡಿ ಪ್ರಕರಣ: ರಾಜಕೀಯ ಒತ್ತಡ ಲೆಕ್ಕಿಸದೆ...

ಸಿಡಿ ಪ್ರಕರಣ: ರಾಜಕೀಯ ಒತ್ತಡ ಲೆಕ್ಕಿಸದೆ ಅಸಲಿ ಸತ್ಯ ಬಯಲಿಗೆಳೆಯಲು ಜೆಡಿಎಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ27 March 2021 10:37 PM IST
share
ಸಿಡಿ ಪ್ರಕರಣ: ರಾಜಕೀಯ ಒತ್ತಡ ಲೆಕ್ಕಿಸದೆ ಅಸಲಿ ಸತ್ಯ ಬಯಲಿಗೆಳೆಯಲು ಜೆಡಿಎಸ್ ಆಗ್ರಹ

ಬೆಂಗಳೂರು, ಮಾ. 27: ‘ಸಿಡಿ ಪ್ರಕರಣವನ್ನು ಅದರ ಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯಕ್ಕೆ, ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನವಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು' ಎಂದು ಜೆಡಿಎಸ್ ಆಗ್ರಹಿಸಿದೆ.

ಶನಿವಾರ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ‘ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ. ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯನವರ ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ ‘ಹನಿಟ್ರ್ಯಾಪ್' ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ ನಡುವೆ ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ರಾಜ್ಯ ನಿಂತಿದೆ' ಎಂದು ತಿಳಿಸಿದೆ.

‘ರಾತ್ರಿ ಒಂದು ಆಡಿಯೊ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವಿಡಿಯೊ ಬಿಡುಗಡೆಯಾಗುವುದು. ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ' ಎಂದು ಜೆಡಿಎಸ್ ಸಂಶಯ ವ್ಯಕ್ತಪಡಿಸಿದೆ.

‘ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ' ಎಂದು ಜೆಡಿಎಸ್ ಪೊಲೀಸರಿಗೆ ಸಲಹೆ ಮಾಡಿದೆ.

‘ಲೈಂಗಿಕ ಪ್ರಕರಣವೊಂದರ ವರದಿಗಳು ನಿತ್ಯ ಪ್ರಕಟವಾಗುತ್ತಿದ್ದರೆ, ಅದರಿಂದ ಕುಟುಂಬಗಳು ಮತ್ತು ಮಕ್ಕಳ ಮೇಲೆ ಆಗುವ ಪರಿಣಾಮಗಳನ್ನು ನಾವು ಚಿಂತಿಸಬೇಕಿದೆ. ಇದಕ್ಕೆ ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ. ಇಲ್ಲವಾದರೆ, ಈ ಪ್ರಕರಣದ ಬೆಳವಣಿಗೆಗಳು ಮತ್ತಷ್ಟು ವಿಸ್ತಾರವಾಗುತ್ತ ನಾಗರಿಕ ಸಮಾಜ ನಾಚಿಕೆಯಲ್ಲಿ ದಿನ ಕಳೆಯಬೇಕಾಗುತ್ತದೆ' ಎಂದು ಜೆಡಿಎಸ್ ಬೇಸರ ವ್ಯಕ್ತಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X