Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ಡಿಸಿ ವರ್ಗಾವಣೆ ವಿಚಾರ:...

ಮೈಸೂರು ಡಿಸಿ ವರ್ಗಾವಣೆ ವಿಚಾರ: ಅರ್ಜಿಯನ್ನು 2 ವಾರದಲ್ಲಿ ಇತ್ಯರ್ಥಪಡಿಸಲು ಹೈಕೋರ್ಟ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ27 March 2021 11:13 PM IST
share
ಮೈಸೂರು ಡಿಸಿ ವರ್ಗಾವಣೆ ವಿಚಾರ: ಅರ್ಜಿಯನ್ನು 2 ವಾರದಲ್ಲಿ ಇತ್ಯರ್ಥಪಡಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು, ಮಾ.27: ಮೈಸೂರು ಡಿಸಿ ಹುದ್ದೆಯಿಂದ ಅವಧಿಪೂರ್ವ ವರ್ಗಾವಣೆ ಮಾಡಿದ ಸರಕಾರದ ಕ್ರಮ ಪ್ರಶ್ನಿಸಿ ಅಧಿಕಾರಿ ಬಿ.ಶರತ್ ಸಲ್ಲಿಸಿದ್ದ ಅರ್ಜಿಯನ್ನು ಮುಂದಿನ 2 ವಾರಗಳಲ್ಲಿ ಇತ್ಯರ್ಥಗೊಳಿಸುವಂತೆ ಹೈಕೋರ್ಟ್ ಕೇಂದ್ರ ಆಡಳಿತಾತ್ಮಕ ನ್ಯಾಯಾಧಿಕರಣಕ್ಕೆ(ಸಿಎಟಿ) ಶನಿವಾರ ನಿರ್ದೇಶಿಸಿದೆ.

ಪ್ರಕರಣವನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಸಿಎಟಿಗೆ ನಿರ್ದೇಶಿಸಬೇಕು ಎಂದು ಕೋರಿ ಅಧಿಕಾರಿ ಬಿ. ಶರತ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಹಾಗೂ ನ್ಯಾ.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಈ ನಿರ್ದೇಶನ ನೀಡಿದೆ.

ಪೀಠ ತನ್ನ ತೀರ್ಪಿನಲ್ಲಿ, ಸಿಎಟಿ ನಿಯಮ-1993ರ ರೂಲ್ಸ್ 105ರ ಪ್ರಕಾರ ಕೇಂದ್ರ ಆಡಳಿತಾತ್ಮಕ ನ್ಯಾಯಾಧಿಕರಣ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ದಿನದಿಂದ 3 ವಾರಗಳ ಒಳಗೆ ಪ್ರಕಟಿಸಬೇಕು. ಪಕ್ಷಗಾರರಿಗೆ ಸೂಚನೆ ಮೂಲಕ ತಿಳಿಸದೇ ಈ ಅವಧಿಯನ್ನು ಬದಲಿಸಲು ಬರುವುದಿಲ್ಲ. ಅದರಂತೆ ಈ ಪ್ರಕರಣದಲ್ಲಿ ಸಿಎಟಿ ಆದೇಶ ಕಾಯ್ದಿರಿಸಿದ ಡಿ.22ರ ನಂತರದ ಮೂರು ವಾರಗಳಲ್ಲಿ ತೀರ್ಪು ಪ್ರಕಟಿಸಬೇಕಿತ್ತು. ಆದರೆ ವಿಳಂಬ ಮಾಡಲಾಗಿದೆ. ಹೀಗಾಗಿ  ಮುಂದಿನ 2 ವಾರಗಳಲ್ಲಿ ತೀರ್ಪು ಪ್ರಕಟಿಸಬೇಕು ಎಂದು ನಿರ್ದೇಶಿಸಿದೆ.

ಏನಿದು ಪ್ರಕರಣ: ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ರೋಹಿಣಿ ಸಿಂಧೂರಿ ನೇಮಕ ಮಾಡುವ ಉದ್ದೇಶದಿಂದ ರಾಜ್ಯ ಸರಕಾರ ಬಿ. ಶರತ್ ಅವರನ್ನು ಅವಧಿಪೂರ್ವ ವರ್ಗಾವಣೆ ಮಾಡಿತ್ತು. 2020ರ ಆ.29ರಂದು ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಬಿ.ಶರತ್ ಅವರನ್ನು ಸೆ.27ರಂದು ತಿಂಗಳು ತುಂಬುವ ಮುನ್ನವೇ ಹುದ್ದೆಯಿಂದ ತೆರವು ಮಾಡಿತ್ತು. ಸರಕಾರದ ಈ ಏಕಾಏಕಿ ನಿರ್ಧಾರವನ್ನು ಪ್ರಶ್ನಿಸಿ ಸ್ಥಳೀಯ ಸಂಘಟನೆಗಳು ಕೂಡ ಪ್ರತಿಭಟಿಸಿದ್ದವು,

ಅಕ್ಟೋಬರ್ ಮೊದಲ ವಾರದಲ್ಲಿ ಸರಕಾರದ ವರ್ಗಾವಣೆ ಕ್ರಮ ಪ್ರಶ್ನಿಸಿ ಬಿ. ಶರತ್ ಸಿಎಟಿ ಮೆಟ್ಟಿಲೇರಿದ್ದರು. ಸೇವಾ ನಿಯಮಗಳನ್ನು ಉಲ್ಲಂಘಿಸಿ 2 ವರ್ಷ ತುಂಬುವ ಮೊದಲೇ ತನ್ನನ್ನು ವರ್ಗಾವಣೆ ಮಾಡಿರುವ ಸರಕಾರದ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು. ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಲ್ಲಿಂದ ಹಿಡಿದು ವಾದ ಮಂಡನೆವರೆಗೂ ವಿಳಂಬ ಧೋರಣೆ ಅನುಸರಿಸಿದ್ದ ಸರಕಾರ ಅಂತಿಮವಾಗಿ ಬಿ. ಶರತ್ ಅವರನ್ನು ರೇಷ್ಮೆ ಮಾರುಕಟ್ಟೆ ಮಂಡಳಿ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಆದರೆ ಶರತ್ ಅನಾರೋಗ್ಯ ಕಾರಣ ನೀಡಿ ಅಧಿಕಾರ ಸ್ವೀಕರಿಸದೆ ಉಳಿದಿದ್ದಾರೆ. ಇಂತಹ ಅನಾರೋಗ್ಯ ಪೀಡಿತ ಅಧಿಕಾರಿಯನ್ನು ಮೈಸೂರು ಡಿಸಿ ಹುದ್ದೆಗೆ ನಿಯೋಜಿಸಲು ಸಾಧ್ಯವಿಲ್ಲ ಎಂದು ತನ್ನ ನಿಲುವು ತಿಳಿಸಿತ್ತು.

ಡಿ.22ರಂದು ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ಸಿಎಟಿ ತೀರ್ಪನ್ನು ಕಾಯ್ದಿರಿಸಿರುವುದಾಗಿ ತಿಳಿಸಿತ್ತು. ಆದರೆ, ತೀರ್ಪು ಪ್ರಕಟಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಗೆ ರಿಟ್ ಸಲ್ಲಿಸಿದ್ದ ಅಧಿಕಾರಿ ಶರತ್, ಸಿಎಟಿ ರೂಲ್ಸ್ 105ರ ಪ್ರಕಾರ ಕಾಯ್ದಿರಿಸಿದ ತೀರ್ಪನ್ನು ಮೂರು ವಾರಗಳಲ್ಲಿ ಪ್ರಕಟಿಸಬೇಕಿತ್ತು. ಹೀಗಾಗಿ ತೀರ್ಪು ಪ್ರಕಟಿಸಲು ಸಿಎಟಿಗೆ ನಿರ್ದೇಶಿಸಬೇಕು ಎಂದು ಕೋರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X