ಉ.ಪ್ರ.: ಅಂಗವಿಕಲ ದಲಿತ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಬಂಧನ

ಮುಝಪ್ಫರ್‌ನಗರ್, ಮಾ. 27: ಜಿಲ್ಲೆಯ ರಾಮರಾಜ್ ಪೊಲೀಸ್ ಠಾಣಾ ಪದೇಶದ ವ್ಯಾಪ್ತಿಯಲ್ಲಿ ಅಂಗವಿಕಲೆ ದಲಿತ ಯುವತಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಈ ಘಟನೆ ಶುಕ್ರವಾರ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಆರೋಪಿ ಫರ್ಮಾನ್ 25 ವರ್ಷದ ಅಂಗವಿಕಲ ಯುವತಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಘಟನೆ ಬಗ್ಗೆ ಯಾರಿಗಾದರೂ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಆತ ಯುವತಿಗೆ ಬೆದರಿಕೆ ಒಡ್ಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಯುವತಿ ನೀಡಿದ ದೂರಿನ ಆಧಾರದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸರ್ಕಲ್ ಅಧಿಕಾರಿ ಶಕೀಲ್ ಅಹ್ಮದ್ ತಿಳಿಸಿದ್ದಾರೆ. ಅನಂತರ ಆತನನ್ನು ಬಂಧಿಸಲಾಯಿತು ಎಂದು ಅವರು ತಿಳಿಸಿದ್ದಾರೆ.
Next Story





