ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ: ಲಕ್ಷಾಂತರ ರೂ. ನಷ್ಟ

ಬೆಂಗಳೂರು, ಮಾ.28: ಇಲ್ಲಿನ ಕಾಚೋಹಳ್ಳಿ ವ್ಯಾಪ್ತಿಯಲ್ಲಿರುವ ಗೋದಾಮಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ನಾಲ್ಕು ವಾಹನ ಸೇರಿದಂತೆ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಬೆಳಕಿಗೆ ಬಂದಿದೆ.
ಶನಿವಾರ ಮಧ್ಯರಾತ್ರಿ ರಾಜಣ್ಣ ಮತ್ತು ಖಲೀಲ್ ಎಂಬುವರಿಗೆ ಸೇರಿದ ಕಟ್ಟಿಗೆ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಆನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದರು.
ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





