Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅತ್ಯಾಚಾರಿಯನ್ನು ರಕ್ಷಣೆ ಮಾಡುವ ಕಳಂಕ...

ಅತ್ಯಾಚಾರಿಯನ್ನು ರಕ್ಷಣೆ ಮಾಡುವ ಕಳಂಕ ಕರ್ನಾಟಕಕ್ಕೆ ಅಂಟಿಕೊಂಡಿದೆ: ಸರಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ಸಿಡಿ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ28 March 2021 5:58 PM IST
share
ಅತ್ಯಾಚಾರಿಯನ್ನು ರಕ್ಷಣೆ ಮಾಡುವ ಕಳಂಕ ಕರ್ನಾಟಕಕ್ಕೆ ಅಂಟಿಕೊಂಡಿದೆ: ಸರಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು, ಮಾ.28: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ್ದೆನ್ನಲಾದ ಸಿಡಿ ಪ್ರಕರಣ ಕುರಿತು ಕಾಂಗ್ರೆಸ್- ಬಿಜೆಪಿ ನಡುವೆ ಟ್ವೀಟ್‌ ಸಮರ ಜೋರಾಗಿದ್ದು, ಅತ್ಯಾಚಾರಿ ಆರೋಪಿಯನ್ನು ಗೂಳಿಯಂತೆ ತಿರುಗಲು ಬಿಟ್ಟಿದ್ದು ಸರ್ಕಾರದ ನೀಚತನವೋ ಅಥವಾ ಪೊಲೀಸರ ಹೇಡಿತನವೋ ಎಂದು ಪ್ರಶ್ನಿಸಿದೆ.

ರವಿವಾರ ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ರಮೇಶ್ ಜಾರಕಿಹೊಳಿಯ ಚಡ್ಡಿಯ ಲಾಡಿಯೂ ಸಡಿಲ, ನಾಲಿಗೆಯೂ ಸಡಿಲ, ಬುದ್ಧಿಯೂ ಸಡಿಲ ಎನ್ನುವುದನ್ನು ಜಗತ್ತು ನೋಡಿದೆ. ರಾಜ್ಯದ ಮರ್ಯಾದೆ ದಿನ ದಿನಕ್ಕೂ ಕುಸಿಯುತ್ತಿದೆ. ಹೀಗಿದ್ದರೂ ಅತ್ಯಾಚಾರಿ ಆರೋಪಿಯನ್ನು ಗೂಳಿಯಂತೆ ತಿರುಗಲು ಬಿಟ್ಟಿದ್ದು ಸರ್ಕಾರದ ನೀಚತನವೋ ಅಥವಾ ಪೊಲೀಸರ ಹೇಡಿತನವೋ ಗೃಹ ಸಚಿವ ಬಸವರಾಜ ಬೊಮ್ಮಯಿ ಅವರೇ?’ ಎಂದು ಪ್ರಶ್ನಿಸಿದೆ.

‘ಹಿಂದೆಲ್ಲ ಆರೋಪಿಗಳನ್ನು ಹಿಡಿಯಲು ಪೊಲೀಸರ ತಂಡ ರಚನೆಯಾಗುತ್ತಿತ್ತು. ಆದರೆ, ಅತ್ಯಾಚಾರ ಆರೋಪಿಯ ರಕ್ಷಣೆಗಾಗಿಯೇ ಎಸ್‌ಐಟಿ ಎನ್ನುವ ಪೊಲೀಸರ ತಂಡ ಸೃಷ್ಟಿಯಾಗಿದ್ದು, ಈ ದೇಶದ ಇತಿಹಾಸದಲ್ಲಿ ಇದೇ ಮೊದಲೇನೋ! ಬಿಜೆಪಿ ಆಡಳಿತದಲ್ಲಿ ಅತ್ಯಾಚಾರಿಯೊಬ್ಬನನ್ನು ರಕ್ಷಣೆ ಮಾಡುವ ಕಳಂಕ ಕರ್ನಾಟಕಕ್ಕೆ ಅಂಟಿಕೊಂಡಿದೆ’ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

‘ಬೆಳಗಾವಿಯಲ್ಲಿ ಪ್ರತಿಭಟನೆಯಂತೆ! ಕಂಡವರ ಮನೆಯ ಹೆಣ್ಣು ಮಕ್ಕಳನ್ನು ಮಂಚ ಹತ್ತಿಸಿಕೊಂಡಿದ್ದಕ್ಕಾ? ಅತ್ಯಾಚಾರ ಆರೋಪಿಯನ್ನು ಗೂಳಿಯಂತೆ ತಿರುಗಲು ಬಿಟ್ಟಿರುವ ಸರ್ಕಾರದ ವಿರುದ್ಧವಾ? ಕನ್ನಡಿಗರನ್ನು ಅವಾಚ್ಯವಾಗಿ ನಿಂದಿಸಿದ ಅತ್ಯಾಚಾರಿ ವಿರುದ್ಧವಾ? ದೇಶದೆದುರು ರಾಜ್ಯದ ಮರ್ಯಾದೆ ಹರಾಜು ಹಾಕುತ್ತಿರುವ ಬಿಜೆಪಿ ವಿರುದ್ಧವಾ?’ ಎಂದು ಕಾಂಗ್ರೆಸ್ ತೀಕ್ಷ್ಣವಾಗಿ‌ ಪ್ರಶ್ನಿಸಿದೆ.

‘ರಾಜ್ಯದ ಕಾನೂನು ಸುವ್ಯವಸ್ಥೆಯ ವೈಫಲ್ಯ, ಪೊಲೀಸರ ಕಳಪೆ ಕಾರ್ಯಕ್ಷಮತೆ ಈ ಸಿಡಿ ಪ್ರಕರಣದಲ್ಲಿ ಬಯಲಾಗಿದೆ. ದೂರು ದಾಖಲಾಗಿದ್ದರೂ ಅತ್ಯಾಚಾರ ಆರೋಪಿಯನ್ನು ಬಂಧಿಸದೆ ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ. ಶೋಷಣೆಗೆ ಒಳಪಟ್ಟ ಸಾಮಾನ್ಯ ಹೆಣ್ಣು ಮಗಳನ್ನು ಪತ್ತೆಹಚ್ಚಿ ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ’ 

'ಸರ್ಕಾರಕ್ಕೆ ಬೆದರಿಕೆ ಹಾಕಿ, ಪುಂಡ ಪೋಕರಿಗಳಿಗೆ ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಿ ಬದಲಾಗುವುದಿಲ್ಲ ರಮೇಶ್ ಜಾರಕಿಹೊಳಿಯವರೇ., ಬಸವರಾಜ ಬೊಮ್ಮಯಿ- ಯಡಿಯೂರಪ್ಪ ಅವರೇ ಆರೋಪಿಯನ್ನು ಬಂಧಿಸದೇ ಕಲ್ಲೆಸೆದು, ದಾಂಧಲೆ ಎಬ್ಬಿಸುವ ಭಯೋತ್ಪಾದಕ ಕೃತ್ಯವೆಸಗಲು ಕಳಿಸಿದ್ದೀರಾ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

‘ರಾಜ್ಯದ ಕಾನೂನು ಸುವ್ಯವಸ್ಥೆ ಕಾಲು ಮುರಿದು ಮೂಲೆಯಲ್ಲಿ ಕುಳಿತಿರುವುದು ದಿನೇ ದಿನೇ ಸ್ಪಷ್ಟವಾಗುತ್ತಿದೆ. ವಿರೋಧ ಪಕ್ಷದ ಅಧ್ಯಕ್ಷರೊಬ್ಬರ ಎದುರು ಚಂಬಲ್ ಕಣಿವೆಯ ಡಕಾಯಿತರಂತೆ ವರ್ತಿಸುತ್ತಿದೆ ರಮೇಶ್ ಜಾರಕಿಹೊಳಿಯ ಗೂಂಡಾಪಡೆ. ಬೊಮ್ಮಯಿ ಅವರೇ ನೀವು ಅತ್ಯಾಚಾರಿಯ ಈ ನಾಟಕ ನೋಡಿ ಮಜಾ ಅನುಭವಿಸುತ್ತಾ ಕುಳಿತಿದ್ದೀರಾ?’ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಹಿಂದೆಲ್ಲ ಆರೋಪಿಗಳನ್ನ ಹಿಡಿಯಲು ಪೊಲೀಸರ ತಂಡ ರಚನೆಯಾಗುತ್ತಿತ್ತು ಆದರೆ
ಅತ್ಯಾಚಾರ ಆರೋಪಿಯ ರಕ್ಷಣೆಗಾಗಿಯೇ SIT ಎನ್ನುವ ಪೊಲೀಸರ ತಂಡ ಸೃಷ್ಟಿಯಾಗಿದ್ದು ಈ ದೇಶದ ಇತಿಹಾಸದಲ್ಲಿ ಇದೇ ಮೊದಲೇನೋ!@BJP4Karnataka ಆಡಳಿತದಲ್ಲಿ ಅತ್ಯಾಚಾರಿಯೊಬ್ಬನನ್ನು ರಕ್ಷಣೆ ಮಾಡುವ ಕಳಂಕ ಕರ್ನಾಟಕಕ್ಕೆ ಅಂಟಿಕೊಂಡಿದೆ.#ArrestRapistRamesh

— Karnataka Congress (@INCKarnataka) March 28, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X