ದ.ಕ.ಜಿಲ್ಲೆ: 68 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಮಾ.28: ದ.ಕ.ಜಿಲ್ಲೆಯಲ್ಲಿ ರವಿವಾರ 68 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಡುವುದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 35,562 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.
ರವಿವಾರ 52 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಗೊಳ್ಳುವುದರೊಂದಿಗೆ ಈವರೆಗೆ 34,248 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 6,26,012 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 5,90,450 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 572 ಸಕ್ರಿಯ ಪ್ರಕರಣವಿದೆ. ಈವರೆಗೆ ಕೊರೋನ ಸೋಂಕಿಗೆ ಜಿಲ್ಲೆಯಲ್ಲಿ 742 ಮಂದಿ ಮೃತಪಟ್ಟಿದ್ದಾರೆ.
Next Story





