Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನ್ಯಾಯದಾನ ವಿಳಂಬದಿಂದಲೇ ವ್ಯಾಜ್ಯಗಳು...

ನ್ಯಾಯದಾನ ವಿಳಂಬದಿಂದಲೇ ವ್ಯಾಜ್ಯಗಳು ಇತ್ಯರ್ಥವಾಗುತ್ತಿಲ್ಲ: ನ್ಯಾ.ಎನ್.ಸಂತೋಷ್ ಹೆಗ್ಡೆ ಬೇಸರ

ವಾರ್ತಾಭಾರತಿವಾರ್ತಾಭಾರತಿ28 March 2021 10:33 PM IST
share
ನ್ಯಾಯದಾನ ವಿಳಂಬದಿಂದಲೇ ವ್ಯಾಜ್ಯಗಳು ಇತ್ಯರ್ಥವಾಗುತ್ತಿಲ್ಲ: ನ್ಯಾ.ಎನ್.ಸಂತೋಷ್ ಹೆಗ್ಡೆ ಬೇಸರ

ಬೆಂಗಳೂರು, ಮಾ.28: ಕೋರ್ಟ್‍ಗಳಲ್ಲಿ ಲಕ್ಷಾಂತರ ವ್ಯಾಜ್ಯಗಳು ಇತ್ಯರ್ಥವಾಗದೆ ನೆನೆಗುದಿಗೆ ಬಿದ್ದಿದ್ದು, ಇಂದು ನ್ಯಾಯದಾನ ವಿಳಂಬವಾಗುತ್ತಿದೆ. ಇವುಗಳನ್ನು ಕಡಿಮೆ ಮಾಡಲು ನ್ಯಾಯಾಂಗ ಕಾರ್ಯಪ್ರವೃತ್ತವಾಗಬೇಕಿದೆ ಎಂದು ಮಾಜಿ ಲೋಕಾಯುಕ್ತ ಹಾಗೂ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದ್ದಾರೆ.

ರಾಜ್ಯಮಟ್ಟದ 3ನೆ ಮೆಗಾ ಇ-ಲೋಕ್‍ ಅದಾಲತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ನಾಗರಿಕನಿಗೂ ನ್ಯಾಯ ಲಭ್ಯವಾಗಬೇಕು ಎಂಬ ಹಿನ್ನೆಲೆಯಲ್ಲಿ ಲೋಕ ಅದಾಲತ್‍ಗಳನ್ನು ಆಯೋಜಿಸುತ್ತಿರುವುದು ಒಳ್ಳೆಯ ಬೆಳವಣಿಗೆ. ಆದರೆ, ಇಂದು ನ್ಯಾಯ ದಾನ ವಿಳಂಬವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. 

ಹೆಚ್ಚೆಚ್ಚು ನ್ಯಾಯಮೂರ್ತಿಗಳನ್ನು ನಿಯೋಜಿಸುವುದರಿಂದ ವ್ಯಾಜ್ಯಗಳನ್ನು ಕಡಿಮೆ ಮಾಡಲು ಸಾಧ್ಯವಿಲ್ಲ. ಮುಂದುವರಿದ ದೇಶಗಳಲ್ಲಿ ಕೋರ್ಟ್ ವ್ಯವಸ್ಥೆ ಎರಡು ಹಂತದಲ್ಲಿವೆ. ಒಂದು ವಿಚಾರಣಾ ನ್ಯಾಯಾಲಯ ಮತ್ತೊಂದು ಉನ್ನತ ನ್ಯಾಯಾಲಯ. ಪ್ರಕರಣವನ್ನು ವಿಚಾರಣೆ ನಡೆಸಿ ತಪ್ಪಿದ್ದರೆ ಮಾತ್ರ ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸಲು ಅವಕಾಶ. ಹೀಗಿದ್ದಾಗ ಅನಗತ್ಯ ಮೇಲ್ಮನವಿಗಳನ್ನು ಸಲ್ಲಿಸಲು, ನ್ಯಾಯಕ್ಕಾಗಿ ವರ್ಷಗಟ್ಟಲೆ ಅಲೆದಾಡುವುದು ತಪ್ಪುತ್ತದೆ. ಆದರೆ, ನಮ್ಮಲ್ಲಿ ಪ್ರಾಧಿಕಾರ, ನ್ಯಾಯಾಧಿಕರಣ, ವಿಚಾರಣಾ ನ್ಯಾಯಾಲಯ, ಹೈಕೋರ್ಟ್, ಸುಪ್ರೀಂಕೋರ್ಟ್ ಎಂದು ಹಲವು ಹಂತದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಿರುವುದೇ ನ್ಯಾಯದಾನ ವಿಳಂಬ ಮತ್ತು ಸುಧೀರ್ಘವಾಗಿದೆ ಎಂದರು.

ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಮಾತನಾಡಿ, ಕೊರೋನ ಆವರಿಸಿದ ಬಳಿಕ 3ನೆ ಬಾರಿ ರಾಜ್ಯ ಮಟ್ಟದ ಇ-ಲೋಕ ಅದಾಲತ್ ಹಮ್ಮಿಕೊಂಡಿದ್ದೇವೆ. ಹಿಂದಿನ ಎರಡು ಇ-ಲೋಕ ಅದಾಲತ್‍ನಲ್ಲಿ 3.65 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದೇವೆ ಎಂದರು.

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಮಾತನಾಡಿ, ಇತ್ತೀಚೆಗೆ ವಿಧಾನಸೌಧ ಕಲಾಪದಲ್ಲಿ ಜನಪ್ರತಿನಿಧಿಗಳು ನ್ಯಾಯಾಂಗದ ಭ್ರಷ್ಟಾಚಾರದ ಕುರಿತು ಚರ್ಚಿಸಿದ್ದನ್ನು ಪರೋಕ್ಷವಾಗಿ ಪ್ರಸ್ತಾಪಿಸಿದರು. ಜನಪ್ರತಿನಿಧಿಗಳಿಗೂ ಜವಾಬ್ದಾರಿ ಇರುತ್ತದೆ. ಹಾಗಿದ್ದೂ, ಜನಪ್ರತಿನಿಧಿಗಳು ನ್ಯಾಯಾಂಗವನ್ನು ನೈತಿಕವಾಗಿ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಂವಿಧಾನದಲ್ಲಿ ನ್ಯಾಯಾಂಗಕ್ಕೆ ಅದರದೇ ಆದ ಪವಿತ್ರ ಸ್ಥಾನ ಹಾಗೂ ಜವಾಬ್ದಾರಿ ಇದೆ. ಈ ಕಾರ್ಯವನ್ನು ರಾಜ್ಯದಲ್ಲಿ ಮುಖ್ಯ ನ್ಯಾಯಮೂರ್ತಿಗಳು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಅವರಿಗೆ ವಕೀಲ ಸಮುದಾಯದ ಬೆಂಬಲವಿದೆ. ಅದಾಲತ್ ಗಳ ಮೂಲಕ ಜನರ ಬಳಿಗೆ ನ್ಯಾಯ ತೆಗೆದುಕೊಂಡು ಹೋಗುವ ಕಾರ್ಯಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು.

ವಿಡಿಯೋ ಕಾನ್ಫರೆನ್ಸ್ ಮೂಲಕವೇ ನಡೆದ ಇ-ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಹೈಕೋರ್ಟ್‍ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳ ಎಲ್ಲ ನ್ಯಾಯಮೂರ್ತಿಗಳು, ರಾಜ್ಯ ವಕೀಲರ ಪರಿಷತ್ತಿನ ಪದಾಧಿಕಾರಿಗಳು, ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ರಾಜ್ಯ ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X