Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಬಿದ್ರಿ: ತ್ಯಾಜ್ಯ ಸಂಸ್ಕರಣಾ ಘಟಕ...

ಪಡುಬಿದ್ರಿ: ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ವಿರೋಧ

ವಾರ್ತಾಭಾರತಿವಾರ್ತಾಭಾರತಿ28 March 2021 10:37 PM IST
share

ಪಡುಬಿದ್ರಿ: ನಡ್ಸಾಲ್ ಗ್ರಾಮದ ಅಬ್ಬೇಡಿಯ ಸುಜ್ಲೋನ್ ಆರ್.ಆರ್ ಕಾಲನಿ ಬಳಿ ಪಡುಬಿದ್ರಿ ಗ್ರಾಮ ಪಂಚಾಯಿತಿ ನಿರ್ಮಿಸಲು ಉದ್ದೇಶಿಸಿರುವ ಘನ ಮತ್ತು ದ್ರವ್ಯ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣದ ಪ್ರಸ್ತಾಪಕ್ಕೆ ಸ್ಥಳೀಯ ನಿವಾಸಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರವಿವಾರ ಸುಜ್ಲೋನ್  ಕಾಲೊನಿ ಸಭಾಂಗಣದಲ್ಲಿ ಸ್ಥಳೀಯ ನಿವಾಸಿಗಳು ಸಭೆ ನಡೆಸಿದ್ದು. ಯಾವುದೇ ಕಾರಣಕ್ಕೂ ತ್ಯಾಜ್ಯ ನಿರ್ವಹಣ ಘಟಕ ಇಲ್ಲಿ ನಿರ್ಮಿಸಬಾರದು ಎಂದು ನಿರ್ಣಯ ಕೈಗೊಂಡಿದ್ದಾರೆ.

ಪಡುಬಿದ್ರಿ ಗ್ರಾಮ ಪಂಚಾಯಿತ್ ಸರಕಾರಿ ಜಮೀನಿನ ಪೈಕಿ 0.19.ಎಕ್ರೆ ಸರ್ಕಾರಿ ಜಮೀನ ಎನ್‍ಟಿಪಿಸಿ ಜಾಗದ ಬಳಿ ತ್ಯಾಜ್ಯ ನಿರ್ವಹಣ ಘಟಕ ನಿರ್ಮಿಸಲು ಮುಂದಾಗಿದೆ. ಪ್ರಸ್ತಾವಿತ ಜಾಗದ ಪಕ್ಕದಲ್ಲಿ ಅಂಗನವಾಡಿ ಇದ್ದು,  ಸುತ್ತ ಮುತ್ತ ಇರುವ ಸುಮಾರು 500 ಮನೆಗಳ ನಿವಾಸಿಗಳಿಗೆ ಆರೋಗ್ಯ ಸಮಸ್ಯೆ ಹಾಗೂ ವಾಯು ಮಾಲಿನ್ಯ ಇನ್ನಿತರ ಸಮಸ್ಯೆಗಳು ಉಂಟಾಗಲಿವೆ. ಈ ಆದೇಶವನ್ನ ತತಕ್ಷಣವೇ ಹಿಂಪಡೆದು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಿರ್ಜನ ಪ್ರದೇಶದಲ್ಲಿ ಈ ಪ್ರಸ್ಥಾಪಿತ ತ್ಯಾಜ್ಯ ನಿರ್ವಹಣ ಘಟಕ ಸ್ಥಾಪಿಸ ಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಘನ ಮತ್ತು ದ್ರವ್ಯ ತ್ಯಾಜ್ಯ ನಿರ್ವಹಣ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗ್ರಾಮದಲ್ಲಿ ಸಾರ್ವಜನಿಕ ನೋಟಿಸ್ ಪ್ರಚುರಪಡಿಸಲಾಗಿದ್ದು ಯಾವುದೇ ಆಕ್ಷೇಪಣೆ ಬಂದಿರುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಅವರ ನಡಾವಳಿಯಲ್ಲಿ ಉಲ್ಲೇಖಿಸಿರುವುದು ಅತ್ಯಂತ ಖಂಡನಾರ್ಹ. ಈ ವಿಷಯದಲ್ಲಿ ಸಾರ್ವಜನಿಕರಿಗೆ ಯಾವುದೇ ನೋಟಿಸ್ ಅಥವಾ ಮಾಹಿತಿ ನೀಡದೆ ಗ್ರಾಮಪಂಚಾಯತ್ ನಲ್ಲಿರುವ ಜನವಿರೋಧಿಗಳು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ಈ ಆತಂಕಕಾರಿ ಆದೇಶ ಹೊರಡಿಸಲು ಕಾರಣಕರ್ತರಾಗಿದ್ದಾರೆ ಎಂದು ಸಭೆಯಲ್ಲಿ ಪಂಚಾಯತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯತ್ ಸದಸ್ಯೆ ಸಂಜೀವಿ ಪೂಜಾರ್ತಿ ಅವರ ಅಧ್ಯಕ್ಷತೆ ವಹಿಸಿದ್ದರು. ಚಿಂತಕ ಲೋಲಾಕ್ಷ, ನಾರಾಯಣ ಶೆಟ್ಟಿ, ಭಾಸ್ಕರ್ ಪಡುಬಿದ್ರಿ, ಲೋಕೇಶ್ ಕಂಚಿನಡ್ಕ, ಮನೋಜ್ ಅಬ್ಬೇಡಿ, ಮೋಹನಾಂಗಯ್ಯ ಸ್ವಾಮಿ, ಮೊಹಿಯುದ್ದೀನ್ , ಉಮಾನಾಥ ಕೆ.ಆರ್ ಮತ್ತು ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X