ಭಟ್ಕಳ : ಆರೋಗ್ಯ ತಪಾಸಣಾ ಶಿಬಿರ

ಭಟ್ಕಳ : ಇಲ್ಲಿನ ನಿಚ್ಚಲಮಕ್ಕಿ ತಿರುಮಲ ವಂಕಟರಮಣ ಸಭಾಭವನದಲ್ಲಿ ದೇವಾಲಯದ ಆಡಳಿತ ಮಂಡಳಿ, ಭಟ್ಕಳದ ವೆಲಫೇರ್ ಆಸ್ಪತ್ರೆಯ ಸಹಯೋಗದಲಿ ಡಾ. ಯಜ್ಞೇಶ ಕಿದಿಯೂರ ಅವರ ನೇತ್ರತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿ ಅಧ್ಯಕ್ಷ ಕೃಷ್ಣ ನಾಯ್ಕ ಮಾತನಾಡಿ ಇಂದು ನಮ್ಮ ದೇವಾಲಯದ ಆಡಳಿತ ಮಂಡಳಿಯ ವತಿಯಿಂದ ಮೊದಲ ಬಾರಿಗೆ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದ್ದು ಕರೋನಾದ ಸಮಸ್ಯೆಯ ಕಾರಣದಿಂದ ಚಿಕ್ಕ ಪ್ರಮಾಣದಲ್ಲಿ ಶಿಬಿರವನ್ನು ಆಯೋಜಿಸಲಾಗಿದೆ. ಮುಂದೆ ಪ್ರತಿ ವರ್ಷವೂ ದೇವಾಲಯದ ಆಡಳಿತ ಮಂಡಳಿಯ ವತಿಯಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲು ಚಿಂತನೆ ನಡೆಸುತ್ತಿದ್ದೇವೆ ಎಂದರು.
ವೈದ್ಯ ಡಾ.ಯಜ್ಞೇಶ ಕಿದಿಯೂರ ಮಾತನಾಡಿದರು. ಆರೋಗ್ಯ ಶಿಬಿರಕ್ಕೆ ಆಗಮಿಸಿದ ಡಾ.ಯಜ್ಞೇಶ ಕಿದಿಯೂರ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಸನ್ಮಾನಿಸಿ, ಗೌರವಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷ ಭವಾನಿಶಂಕರ ನಾಯ್ಕ, ಕಾರ್ಯದರ್ಶಿ ಮಾಸ್ತಿ ನಾಯ್ಕ, ಗೌರವಾಧ್ಯಕ್ಷ ಎಂ.ಆರ್.ನಾಯ್ಕ, ಡಿ.ಬಿ.ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕೆ.ಆರ್.ನಾಯ್ಕ, ಎಸ್.ಎಂ.ನಾಯ್ಕ, ಶ್ರೀಧರ ನಾಯ್ಕ ಆಸರಕೇರಿ, ಎಂ.ಕೆ.ನಾಯ್ಕ, ಪಾಂಡುರಂಗ ನಾಯ್ಕ, ಶ್ರೀಕಾತ ನಾಯ್ಕ, ಅಡಳಿತ ಮಂಡಳಿಯ ಸದಸ್ಯರು ಹಾಗೂ ಸಾರ್ವಜನಿಕರು ಹಾಜರಿದ್ದರು.
ಗಂಗಾಧರ ನಾಯ್ಕ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು. ಡಾ.ಯಜ್ಞೇಶ ಕಿದಿಯೂರ ಹಾಗೂ ಸಿಬ್ಬಂದಿ ವರ್ಗದವರಿಂದ ಇವರಿಂದ ಉಚಿತ ಆರೋಗ್ಯ ತಪಾಸಣ ಶಿಬಿರ ನಡೆಯಿತು.







