ಪಾಣೆಮಂಗಳೂರು : ಕಾರಿಗೆ ಗ್ಯಾಸ್ ಟ್ಯಾಂಕರ್ ಢಿಕ್ಕಿ; ಆರು ಮಂದಿಗೆ ಗಾಯ

ಬಂಟ್ವಾಳ, ಮಾ.30: ಮೆಲ್ಕಾರ್ ಸಮೀಪದ ಪಾಣೆಮಂಗಳೂರಿನಲ್ಲಿ ಮಾರುತಿ ಇಕೋ ಕಾರಿಗೆ ಗ್ಯಾಸ್ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ನಡೆದಿದೆ.
ಮುಲ್ಕಿ ಕಿನ್ನಿಗೋಳಿ ಐಕಳ ನಿವಾಸಿಗಳು ಸುಳ್ಯ ನಿಂತಿಕಲ್ಲು ಎಂಬಲ್ಲಿ ಕೊರಗಜ್ಜ ದೈವದ ನರ್ತನ ಸೇವೆಗೆ ಡೋಲು ಬಾರಿಸುವ ಸೇವೆ ಸಲ್ಲಿಸಿ ಕಾರಿನಲ್ಲಿ ವಾಪಸು ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿಗೆ ಗಂಭೀರ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಿಂದ ಕಾರು ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ಟ್ರಾಫಿಕ್ ಎಸ್ಸೈ ರಾಜೇಶ್ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.






.jpeg)



