ಚಿಕ್ಕಮಗಳೂರು : ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ನಿಧನ

ಚಿಕ್ಕಮಗಳೂರು : ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯರೋರ್ವರು ನಿಧನರಾದ ಘಟನೆ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಪಂಚನಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ವಿಶ್ವನಾಥ್ (40) ಎಂದು ಗುರುತಿಸಲಾಗಿದೆ. ಹೃದಯಾಘಾತಕ್ಕೊಳಗಾದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
Next Story





