Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಂಜಿನಿಯರಿಂಗ್‌ ಸಂಶೋಧನೆ-ಅಭಿವೃದ್ಧಿ...

ಎಂಜಿನಿಯರಿಂಗ್‌ ಸಂಶೋಧನೆ-ಅಭಿವೃದ್ಧಿ ನೀತಿ ಅಮೆರಿಕ ಕಂಪನಿಗಳ ಹೂಡಿಕೆಗೆ ಪೂರಕ : ಡಾ. ‌ಅಶ್ವತ್ಥನಾರಾಯಣ

ಭಾರತ-ಅಮೆರಿಕ ಕಾರ್ಯತಂತ್ರದ ಸಹಭಾಗಿತ್ವ ವೇದಿಕೆಯ ವರ್ಚುಯಲ್‌ ಸಭೆ

ವಾರ್ತಾಭಾರತಿವಾರ್ತಾಭಾರತಿ30 March 2021 3:46 PM IST
share
ಎಂಜಿನಿಯರಿಂಗ್‌ ಸಂಶೋಧನೆ-ಅಭಿವೃದ್ಧಿ ನೀತಿ ಅಮೆರಿಕ ಕಂಪನಿಗಳ ಹೂಡಿಕೆಗೆ ಪೂರಕ : ಡಾ. ‌ಅಶ್ವತ್ಥನಾರಾಯಣ

ಬೆಂಗಳೂರು: ದೇಶದಲ್ಲಿ ಮೊತ್ತಮೊದಲಿಗೆ ಕರ್ನಾಟಕವು ಸಂಶೋಧನೆ ಮತ್ತು ಅಭಿವೃದ್ಧಿಗೆ ಶಕ್ತಿ ತುಂಬುವ ಎಂಜಿನಿಯರಿಂಗ್‌ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ (ER&D Policy) ಯನ್ನು ಪ್ರಕಟಿಸಿದ್ದು, ಇದರಿಂದ ಅಮೆರಿಕ ಕಂಪನಿಗಳ ಹೂಡಿಕೆಗೆ ಹೆಚ್ಚು ಅನುಕೂಲವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಕೇರಳದಲ್ಲಿನ ಚುನಾವಣಾ ಪ್ರಚಾರದ ನಡುವೆಯೇ ಭಾರತ-ಅಮೆರಿಕ ಕಾರ್ಯತಂತ್ರದ ಸಹಭಾಗಿತ್ವ ವೇದಿಕೆ ಹಮ್ಮಿಕೊಂಡಿದ್ದ ವರ್ಚುವಲ್ ಸಭೆಯಲ್ಲಿ ತಿರುವನಂತಪುರದಿಂದಲೇ ಪಾಲ್ಗೊಂಡು ಮಾತನಾಡಿದ ಅವರು; "ಈ ನೀತಿಯು ಕೈಗಾರಿಕಾಭಿವೃದ್ಧಿಗೆ ಹೆಚ್ಚು ಪೂರಕವಾಗಲಿದೆ ಹಾಗೂ ಅತ್ಯುತ್ತಮ ಮಾನವ ಸಂಪನ್ಮೂಲ ಸೃಷ್ಟಿಗೂ ಇದು ಸಹಾಯಕವಾಗುತ್ತದೆ" ಎಂದರು. 

ಉತ್ಕೃಷ್ಟ ಮಾನವ ಸಂಪನ್ಮೂಲ 

ಕೈಗಾರಿಕೆ ಮತ್ತು ಹೂಡಿಕೆಗೆ ಪೂರಕವಾದ ರಾಜ್ಯ ಕರ್ನಾಟಕ. ಹೊಸ ಉದ್ಯಮಗಳನ್ನು ಸ್ಥಾಪಿಸಲು ಸೂಕ್ತವಾದ ತಾಣ. ಈ ನಿಟ್ಟಿನಲ್ಲಿ ನಮ್ಮ ಸರಕಾರ ಎಲ್ಲ ರೀತಿಯ ಸಹಕಾರ ನೀಡುತ್ತಿದೆ ಎಂದ ಅವರು; ರಾಜ್ಯದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ IISc), ಭಾರತೀಯ ತಾಂತ್ರಿಕ ಸಂಸ್ಥೆ (IIT) ಹಾಗೂ ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (IIIT) ಯಂಥ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಿವೆ. ಹೀಗಾಗಿ ಉತ್ಕೃಷ್ಟ ಮಾನವ ಸಂಪನ್ಮೂಲಕ್ಕೂ ರಾಜ್ಯದಲ್ಲಿ ಕೊರತೆ ಇಲ್ಲ ಎಂದು ಡಿಸಿಎಂ ನುಡಿದರು. 

ಇನ್ನು ಆವಿಷ್ಕಾರದಲ್ಲೂ ಕರ್ನಾಟಕ ನಂಬರ್‌ 1ಸ್ಥಾನದಲ್ಲೇ ಇದೆ. ನೀತಿ ಆಯೋಗದ ಆವಿಷ್ಕಾರ ಸೂಚ್ಯಂಕದಲ್ಲಿ ರಾಜ್ಯವು 2019, 2020 ಕ್ರಮವಾಗಿ ಮೊದಲ ಸ್ಥಾನದಲ್ಲೇ ಇದೆ. ಅದೇ ರೀತಿ ಎಲೆಕ್ಟ್ರಾನಿಕ್ಸ್‌ ವ್ಯವಸ್ಥೆ ವಿನ್ಯಾಸ ಮತ್ತು ನಿರ್ವಹಣೆ (ESDM), ಅನಿಮೇಷನ್‌, ವಿಷ್ಯುಯೆಲ್‌ ಎಫೆಕ್ಟ್ಸ್‌, ಗೇಮ್ಸ್‌ ಮತ್ತು ಕಾಮಿಕ್ಸ್‌ (AVGC) ಕ್ಷೇತ್ರದಲ್ಲೂ ರಾಜ್ಯ ದಾಪುಗಾಲಿಡುತ್ತಿದೆ ಎಂಬ ಅಂಶವನ್ನು ಡಿಸಿಎಂ ಒತ್ತಿ ಹೇಳಿದರು. 

ಕರ್ನಾಟಕ ಹೂಡಿಕೆಗೆ ಸೂಕ್ತ ತಾಣ 

ಕೋವಿಡ್‌ ನಂತರದ ದಿನಗಳಲ್ಲಿ ಕೈಗಾರಿಕೆ, ಹೂಡಿಕೆ, ಆವಿಷ್ಕಾರ ಮುಂತಾದ ಕ್ಷೇತ್ರಗಳಲ್ಲಿ ಪುಟಿದೆದ್ದಿರುವ ಭಾರತವು, ಇಡೀ ಜಗತ್ತಿನಲ್ಲಿಯೇ ಸಹಜಸ್ಥಿತಿಗೆ ಮರಳಿದ ಮೊದಲ ದೇಶವಾಗಿದೆ. ಹಾಗೆಯೇ ಕರ್ನಾಟಕವು ಹೂಡಿಕೆಗೆ ಅತ್ಯಂತ ಸೂಕ್ತ ತಾಣ. ಕೋವಿಡ್ಡೋತ್ತರ ಕಾಲದಲ್ಲಿ ಭಾರತ ಮತ್ತು ಅಮೆರಿಕಕ್ಕೆ ವಿಪುಲ ಅವಕಾಶಗಳಿದ್ದು, ಅವೆಲ್ಲವನ್ನೂ ಸದುಪಯೋಗ ಮಾಡಿಕೊಳ್ಳೋಣ  ಎಂದು ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಹೇಳಿದರು.

ಅನೇಕ ಕ್ಷೇತ್ರಗಳಲ್ಲಿ ಭಾರತ-ಅಮೆರಿಕ ದೇಶಗಳು ಜಾಗತಿಕ ಶಕ್ತಿಗಳಾಗಿ ಹೊರಹೊಮ್ಮಿವೆ. ರಕ್ಷಣೆ, ವಿಜ್ಞಾನ-ತಂತ್ರಜ್ಞಾನ, ವೈದ್ಯಕೀಯ, ಮಾನವ ಸಂಪನ್ಮೂಲ, ಬಾಹ್ಯಾಕಾಶ ಮುಂತಾದ ಕ್ಷೇತ್ರಗಳಲ್ಲಿ ಎರಡೂ ದೇಶಗಳು ಬಹಳ ನಿಕಟವಾಗಿ ಕೆಲಸ ಮಾಡುತ್ತಿವೆ. ಈ ಕಾರಣಕ್ಕೆ 2019ನೇ ಸಾಲಿನಲ್ಲಿ ಎರಡೂ ದೇಶಗಳ ನಡುವೆ ಸರಕು ಮತ್ತು ಸೇವೆಗಳಲ್ಲಿ ಒಟ್ಟಾರೆ ದ್ವಿಪಕ್ಷೀಯ ವ್ಯಾಪಾರವು 149 ಬಿಲಿಯನ್ ಮೀರಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಇದಕ್ಕೆ ಪೂರಕವಾಗಿ ಹೇಳುವುದಾದರೆ, ಭಾರತ-ಅಮೆರಿಕ ಪಾಲುದಾರಿಕೆಯಲ್ಲಿ ಕರ್ನಾಟಕದ ಪಾತ್ರ ಮಹತ್ವದ್ದಾಗಿದೆ. ತಂತ್ರಜ್ಞಾನ ಮತ್ತು ಡಿಜಿಟಲ್ ವ್ಯವಸ್ಥೆಯ ಬೆಳವಣಿಗೆಗೆ ರಾಜ್ಯವು ಅನನ್ಯ ಕೊಡುಗೆ ನೀಡಿದೆ. 220 ಬಿಲಿಯನ್‌ನಷ್ಟು ಒಟ್ಟು ದೇಶಯ ಉತ್ಪನ್ನ (ಜಿಎಸ್‌ಡಿಪಿ) ಹೊಂದಿರುವ ಕರ್ನಾಟಕವು ದೇಶದ ಅತ್ಯಂತ ಶ್ರೀಮಂತ ರಾಜ್ಯಗಳಲ್ಲಿ ಒಂದು. ಮಾಹಿತಿ-ಜೈವಿಕ ತಂತ್ರಜ್ಞಾನ, ಆರೋಗ್ಯ, ಆವಿಷ್ಕಾರ, ಎಲೆಕ್ಟ್ರಾನಿಕ್ಸ್, ಯಂತ್ರೋಪಕರಣ, ಏರೋಸ್ಪೇಸ್ ಮುಂತಾದ ಕ್ಷೇತ್ರಗಳಲ್ಲಿಯೂ ರಾಜ್ಯವು ಮುಂಚೂಣಿಯಲ್ಲಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಈ ವರ್ಚುಯಲ್‌ ಸಭೆಯಲ್ಲಿ ಭಾರತದಲ್ಲಿರುವ ಸ್ಯಾನ್‌ಪ್ರಾನ್ಸಿಸ್ಕೋ ರಾಜ್ಯದ ಕಾನ್ಸುಲ್‌ ಜನರಲ್‌ ಡಾ.ಟಿ.ವಿ.ನಾಗೇಂದ್ರ ಪ್ರಸಾದ್‌, ಉಪ ಕಾನ್ಸುಲ್‌ ಜನರಲ್‌ ರಾಜೇಶ್‌ ನಾಯಕ್‌, ಅಮೆರಿಕ-ಭಾರತ ಕಾರ್ಯತಂತ್ರ ವೇದಿಕೆಯ ಅಧ್ಯಕ್ಷ ಜಾನ್‌ ಚಾಂಬರ್ಸ್‌, ಇದೇ ವೇದಿಕೆಯ ವೆಸ್ಟ್‌ ಕೋಸ್ಟ್‌ ವಿಭಾಗದ ಮುಖ್ಯಸ್ಥರಾದ ದೀಪ್ತಿ ದೇಸಾಯಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X