Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಕ್ಷಣದಲ್ಲಿ ಕಲಿಕೆಗೆ ಒತ್ತು ಕೊಡಬೇಕೆ...

ಶಿಕ್ಷಣದಲ್ಲಿ ಕಲಿಕೆಗೆ ಒತ್ತು ಕೊಡಬೇಕೆ ಹೊರತು ಪರೀಕ್ಷೆಗಲ್ಲ: ಶಿಕ್ಷಣ ತಜ್ಞ ನಿರಂಜನಾರಾಧ್ಯ

ವಾರ್ತಾಭಾರತಿವಾರ್ತಾಭಾರತಿ30 March 2021 5:52 PM IST
share
ಶಿಕ್ಷಣದಲ್ಲಿ ಕಲಿಕೆಗೆ ಒತ್ತು ಕೊಡಬೇಕೆ ಹೊರತು ಪರೀಕ್ಷೆಗಲ್ಲ: ಶಿಕ್ಷಣ ತಜ್ಞ ನಿರಂಜನಾರಾಧ್ಯ

ಬೆಂಗಳೂರು, ಮಾ.30: ಒಂದರಿಂದ ಒಂಬತ್ತನೆ ತರಗತಿಯ ಪರೀಕ್ಷೆಗೆ ಸಂಬಂಧಿಸಿದಂತೆ ಸಚಿವ ಸುರೇಶ್‍ ಕುಮಾರ್ ಗೊಂದಲಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಶಿಕ್ಷಣವೆಂದರೆ ಕಲಿಕೆಗೆ ಒತ್ತು  ಕೊಡಬೇಕೆ ವಿನಃ ಪರೀಕ್ಷೆ ನಡೆಸುವುದೇ ಮುಖ್ಯವಾಗಬಾರದೆಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ ಅಭಿಪ್ರಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಕ್ಕಳ ಕಲಿಕೆ ಮತ್ತು ಮೌಲ್ಯಮಾಪನವನ್ನು ಶಿಕ್ಷಣದ ಹಕ್ಕು ಕಾಯ್ದೆಯ ವ್ಯಾಪ್ತಿಯಲ್ಲಿ ವಸ್ತುನಿಷ್ಠವಾಗಿ ಮತ್ತು ಕಾನೂನು ಬದ್ಧವಾಗಿ ನೋಡಬೇಕು. ಆದರೆ, ಶಿಕ್ಷಣ ಸಚಿವ ಸುರೇಶ್‍ಕುಮಾರ್ ಸೇರಿದಂತೆ ಹಲವು ನಾಯಕರು ಮನಬಂದಂತೆ ಹೇಳಿಕೆಗಳನ್ನು ನೀಡುತ್ತಿರುವುದು ನಿಜಕ್ಕೂ ಶೋಚನೀಯವೆಂದು ವಿಷಾದಿಸಿದ್ದಾರೆ.

ಶಿಕ್ಷಣ ತಜ್ಞರು, ಚಿಂತಕರು, ಶಿಕ್ಷಕ ಸಂಘಟನೆಗಳು ಲಾಕ್‍ಡೌನ್ ನಂತರ ಕರ್ನಾಟಕದಲ್ಲಿ ಶಾಲಾ ಶಿಕ್ಷಣವನ್ನು ಪ್ರಾರಂಭಿಸಿ ಕಲಿಕೆಯನ್ನು ಸುಗುಮಗೊಳಿಸುವಂತೆ ಹಕ್ಕೊತ್ತಾಯ ಮಾಡುತ್ತಿವೆ. ಈ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಲು ವಿಫಲವಾಗಿರುವ ರಾಜ್ಯ ಸರಕಾರ ಈಗ ಮಕ್ಕಳ ಪರೀಕ್ಷೆ ಮತ್ತು ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡುವ ಬಗ್ಗೆ ಅನಗತ್ಯ ಗೊಂದಲವನ್ನು ಸೃಷ್ಟಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಶಿಕ್ಷಣ ಹಕ್ಕು ಕಾಯ್ದೆ ಮೂಲ ಪ್ರಕರಣ 16ರ ಅನ್ವಯ, ಯಾವುದೇ ವಿದ್ಯಾರ್ಥಿ 8ನೆ ತರಗತಿಯನ್ನು ಪೂರ್ಣಗೊಳಿಸುವವರೆಗೆ ಶಾಲೆಯಿಂದ ಹೊರ ಹಾಕುವುದನ್ನು ಮತ್ತು ಒಂದೇ ತರಗತಿಯಲ್ಲಿ ಒಂದು ವರ್ಷಕ್ಕಿಂತ ಹೆಚ್ಚುಕಾಲ ತಡೆಹಿಡಿಯುವುದನ್ನು ನಿಷೇಧಿಸಲಾಗಿತ್ತು. ಈ ಮೂಲ ಆಶಯಕ್ಕೆ ಇಂಬು ನೀಡಲು ಕೇಂದ್ರ ಸರಕಾರವು 2017 ರಲ್ಲಿ ಕೇಂದ್ರ ಶಿಕ್ಷಣ ಹಕ್ಕು ಕಾಯ್ದೆಯ ನಿಯಮಗಳು-2010ಕ್ಕೆ ತಿದ್ದುಪಡಿ ತಂದು, ಮಕ್ಕಳ ಪರೀಕ್ಷೆಗಿಂತ ಮಕ್ಕಳ ಕಲಿಕೆಗೆ ಒತ್ತು ನೀಡಲು ಅನುಕೂಲವಾಗುವಂತೆ ತರಗತಿವಾರು ವಿಷಯವಾರು ಕಲಿಕಾ ಫಲಿತಾಂಶಗಳನ್ನು ಸಿದ್ಧಪಡಿಸಲು ಸೂಚಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಕಲಿಕಾ ಫಲಿತಾಂಶಗಳನ್ನು ದಿನನಿತ್ಯದ ಆಧಾರದಲ್ಲಿ ಕಲಿಕೆಯ ಮೂಲಕ ಸಾಧಿಸಲು ಮಾರ್ಗಸೂಚಿ ತಯಾರಿಸಿ ನಿರಂತರ ಕಲಿಕೆ ಮತ್ತು ನಿರಂತರ ಮೌಲ್ಯ ಮಾಪನದ ಮೂಲಕ ಮಕ್ಕಳ ಕಲಿಕೆಯನ್ನು ಉತ್ತೇಜಿಸಬೇಕು ಮತ್ತು ನಿಗದಿತ ಕಲಿಕಾ ಫಲಿತಾಂಶಗಳನ್ನು ಕಂಡು ಕೊಳ್ಳಬೇಕೆಂಬುದನ್ನು ಸ್ಪಷ್ಪಪಡಿಸಿದೆ ಎಂದು ಅವರು ತಿಳಿಸಿದ್ದಾರೆ. 

ಮಕ್ಕಳ ಪ್ರಗತಿಯನ್ನು ತಿಳಿದುಕೊಳ್ಳಲು ಅನುವಾಗುವಂತೆ ಕೇಂದ್ರ ಸರಕಾರ 2019 ರಲ್ಲಿ ಶಿಕ್ಷಣ ಹಕ್ಕು ಕಾಯಿದೆಯ ಪ್ರಕರಣ 16ಕ್ಕೆ ತಿದ್ದುಪಡಿಯನ್ನು ಮಾಡಿ ಪರೀಕ್ಷೆ ನಡೆಸುವ ವಿಚಾರದಲ್ಲಿ ಕೆಲವೊಂದು ಅಂಶಗಳನ್ನು ಕಾಯ್ದೆಯಲ್ಲಿ ಸೇರಿಸಿದೆ. ಅದರಂತೆ ಮೊದಲನೆಯದಾಗಿ 5 ಹಾಗೂ 8ನೇ ತರಗತಿ ಹೊರತುಪಡಿಸಿ 1ರಿಂದ 7ನೇ ತರಗತಿಯ ಮಕ್ಕಳಿಗೆ ನಿರಂತರ ಹಾಗೂ ವ್ಯಾಪಕ ಮೌಲ್ಯಮಾಪನ ಹೊರತುಪಡಿಸಿ ಯಾವುದೇ ಪರೀಕ್ಷೆ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಎಲೆಮೆಂಟರಿ ಶಿಕ್ಷಣದ ಹಂತದಲ್ಲಿ 5 ಮತ್ತು 8ನೇ ತರಗತಿಗಳಿಗೆ ಪರೀಕ್ಷೆ ನಡೆಸಬಹುದಾಗಿದೆ. ಈ ಪರೀಕ್ಷೆಯಲ್ಲಿ ಮಗು ಕಾರಣಾಂತರಗಳಿಂದ ಅನುತೀರ್ಣ(ಫೇಲ್) ಆದರೆ, ಪೂರಕ ಬೋಧನೆ ಮತ್ತು ಕಲಿಕೆಯ ಮೂಲಕ ಮತ್ತೊಮ್ಮೆ ಮಕ್ಕಳಿಗೆ ಕಲಿಸಲು ಕ್ರಮ ವಹಿಸಬೇಕು. ಜೊತೆಗೆ ಮೊದಲ ಪರೀಕ್ಷೆ ಫಲಿತಾಂಶ ಪ್ರಕಟವಾದ ಎರಡು ತಿಂಗಳ ಒಳಗಾಗಿ ಮರು ಪರೀಕ್ಷೆಯ ಅವಕಾಶವನ್ನು ಮಗುವಿಗೆ ಒದಗಿಸಬೇಕು. ಮರುಪರೀಕ್ಷೆಯಲ್ಲಿಯೂ ಅನುತ್ತೀರ್ಣವಾದ ವಿದ್ಯಾರ್ಥಿಗಳನ್ನು ಅದೇ ತರಗತಿಯಲ್ಲಿ ತಡೆಹಿಡಿಯಬಹುದು. ಆದರೂ ಸರಕಾರ ಯಾವುದೇ ಶಾಲೆಗಳು ಮಕ್ಕಳನ್ನು 8ನೇ ತರಗತಿ ಮುಗಿಸುವವರೆಗೆ ಯಾವುದೇ ತರಗತಿಯಲ್ಲಿ ಫೇಲ್ ಮಾಡದಂತೆ ನಿರ್ಧರಿಸುವಂತಹ ಅಧಿಕಾರವನ್ನು ಹೊಂದಿದೆ ಎಂದು ಅವರು ತಿಳಿಸಿದ್ದಾರೆ.

ಶಿಕ್ಷಣ ಹಕ್ಕು ಕಾಯಿದೆಯಲ್ಲಿ ಕಲಿಕೆ, ಪರೀಕ್ಷೆ ಮತ್ತು ಮಕ್ಕಳನ್ನು ಪಾಸು ಅಥವಾ ನಪಾಸು ಮಾಡುವ ಬಗ್ಗೆ ಹಾಗು ಮಕ್ಕಳನ್ನು ಶಾಲೆಯಿಂದ ಹೊರದೂಡುವ ಬಗ್ಗೆ ಅತ್ಯಂತ ಸರಳವಾಗಿ ಮತ್ತು ಸ್ಪಷ್ಟವಾಗಿ ಹೇಳಲಾಗಿದೆ. ಆದರೂ ಸರಕಾರ ಹಾಗು ಶಿಕ್ಷಣ ಸಚಿವರು ಈ ವಿಷಯದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿರುವುದು ವಿಷಾದನೀಯವೆಂದು ಅವರು ತಿಳಿಸಿದ್ದಾರೆ.

ರಾಜ್ಯ ಸರಕಾರ ಕೂಡಲೇ ಶಿಕ್ಷಣ ಹಕ್ಕು ಕಾಯ್ದೆ ಮತ್ತು ನಿಯಮಗಳ ಚೌಕಟ್ಟಿನಲ್ಲಿ ಒಂದು ಸ್ಪಷ್ಟತೆ ಒದಗಿಸುವ ತೀರ್ಮಾನ ಕೈಗೊಂಡು ಕೂಡಲೇ ಅಗತ್ಯ  ಆದೇಶವನ್ನು ಹೊರಡಿಸಬೇಕು  ಹಾಗು ಶಿಕ್ಷಣ ಕ್ಷೇತ್ರದಲ್ಲಿ ಪದೇ ಪದೇ ಗೊಂದಲಗಳು ಬಾರದಂತೆ ಕ್ರಮವಹಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X