ಧರ್ಮಗುರುವಿಗೆ ಹಲ್ಲೆ ಪ್ರಕರಣ: ದುಷ್ಕರ್ಮಿಗಳ ಬಂಧನಕ್ಕೆ ಸೌತ್ ಕರ್ನಾಟಕ ಸಲಫಿ ಮೂವ್‌ಮೆಂಟ್ ಆಗ್ರಹ
ಮಂಗಳೂರು, ಮಾ.30: ಸೌತ್ ಕರ್ನಾಟಕ ಸಲಫಿ ಮೂವ್‌ಮೆಂಟ್ ಅಧೀನದ ಫರಂಗಿಪೇಟೆಯ ಬಿರ್ರುಲ್ ವಾಲಿದೈನ್ ಮಸೀದಿಗೆ ನುಗ್ಗಿ ಧರ್ಮಗುರುಗಳ ಮೇಲೆ ಹಲ್ಲೆ ನಡೆಸಿರುವ ದುಷ್ಕರ್ಮಿಗಳನ್ನು ಕೂಡಲೇ ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೌತ್ ಕರ್ನಾಟಕ ಸಲಫಿ ಮೂವ್‌ಮೆಂಟ್ ಆಗ್ರಹಿಸಿದೆ.
ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ಧಾರ್ಮಿಕ ಕೇಂದ್ರಗಳಾದ ಮಸೀದಿ, ಚರ್ಚ್‌ಗಳನ್ನು ಗುರಿಪಡಿಸಿ ದುಷ್ಕರ್ಮಿಗಳು ಸಮಾಜದ ಶಾಂತಿ ಕದಡಲು ಷಡ್ಯಂತರ ನಡೆಸುತ್ತಿದ್ದಾರೆ. ಇಂತಹ ದುಷ್ಕರ್ಮಿಗಳನ್ನು ಪೊಲೀಸ್ ಇಲಾಖೆ ಪತ್ತೆ ಹಚ್ಚಿ ಕ್ರಮ ಜರುಗಿಸಬೇಕು ಮತ್ತು ಧಾರ್ಮಿಕ ಕೇಂದ್ರಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಸೌತ್ ಕರ್ನಾಟಕ ಸಲಫಿ ಮೂವ್‌ಮೆಂಟ್ ಮನವಿ ಮಾಡಿದೆ.
Next Story





