Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸೂಯೆಝ್ ಕಾಲುವೆ ದಾಟಿದ 253 ಹಡಗುಗಳು

ಸೂಯೆಝ್ ಕಾಲುವೆ ದಾಟಿದ 253 ಹಡಗುಗಳು

ತೆರವು ಕಾರ್ಯಾಚರಣೆಗೆ ಸಹಕಾರ ನೀಡಿದ್ದ 25 ಭಾರತೀಯ ನಾವಿಕರು

ವಾರ್ತಾಭಾರತಿವಾರ್ತಾಭಾರತಿ30 March 2021 8:09 PM IST
share
ಸೂಯೆಝ್ ಕಾಲುವೆ ದಾಟಿದ 253 ಹಡಗುಗಳು

 ಕೈರೋ (ಈಜಿಪ್ಟ್), ಮಾ. 30: ಈಜಿಪ್ಟ್‌ನ ಸೂಯೆಝ್ ಕಾಲುವೆಯಲ್ಲಿ 6 ದಿನಗಳ ಕಾಲ ಸಿಕ್ಕಿಹಾಕಿಕೊಂಡಿದ್ದ ಸರಕು ಹಡಗು ಸೋಮವಾರ ತೇಲಿದ ಬಳಿಕ, ಅದೇ ರಾತ್ರಿ ಕಾಲುವೆಯ ಇಕ್ಕೆಲಗಳಲ್ಲಿ ಬಾಕಿಯಾಗಿದ್ದ 113 ಹಡಗುಗಳು ಕಾಲುವೆಯನ್ನು ದಾಟಿವೆ ಎಂದು ಸೂಯೆಜ್ ಕಾಲುವೆ ಪ್ರಾಧಿಕಾರ ಅಧ್ಯಕ್ಷ ಉಸಾಮ ರಾಬಿಈ ಮಂಗಳವಾರ ಹೇಳಿದ್ದಾರೆ.

ಮಂಗಳವಾರ ಇನ್ನೂ 140 ಹಡಗುಗಳು ಕಾಲುವೆಯನ್ನು ದಾಟಲಿವೆ ಎಂದು ಅವರು ತಿಳಿಸಿದ್ದಾರೆ.

ಸ್ಥಳೀಯ ಸಮಯ ಸಂಜೆ 7 ಗಂಟೆ ವೇಳೆಗೆ 95 ಹಡಗುಗಳು ಕಾಲುವೆಯನ್ನು ದಾಟುತ್ತವೆ ಹಾಗೂ ಮಧ್ಯರಾತ್ರಿ ವೇಳೆಗೆ ಇನ್ನೂ 45 ಹಡಗುಗಳು ದಾಟಲಿವೆ ಎಂದು ರಾಬಿಈ ನುಡಿದರು.

 ಕಾಲುವೆಯಲ್ಲಿ ತಡೆ ಏರ್ಪಟ್ಟ ಹಿನ್ನೆಲೆಯಲ್ಲಿ ಬಾಕಿಯಾಗಿರುವ ಎಲ್ಲ ಹಡಗುಗಳು ಇನ್ನು 3-4 ದಿನಗಳಲ್ಲಿ ತೆರವುಗೊಳ್ಳುತ್ತವೆ ಎಂಬ ನಿರೀಕ್ಷೆಯನ್ನು ಅವರು ವ್ಯಕ್ತಪಡಿಸಿದರು.

 ‘ಎವರ್ ಗಿವನ್’ ಕಾಲುವೆಯಲ್ಲಿ ಸಿಕ್ಕಿ ಹಾಕಿಕೊಳ್ಳಲು ಏನು ಕಾರಣವೇನು?: ತನಿಖೆ ಆರಂಭ

ಬೃಹತ್ ಕಂಟೇನರ್ ಹಡಗು ‘ಎವರ್ ಗಿವನ್’ ಸೂಯೆಝ್ ಕಾಲುವೆಯಲ್ಲಿ ಅಡ್ಡಕ್ಕೆ ಸಿಲುಕಿಕಕೊಳ್ಳಲು ಕಾರಣವಾದ ಅಂಶಗಳನ್ನು ಪತ್ತೆಹಚ್ಚಲು ಅಧಿಕಾರಿಗಳು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

ಮಾರ್ಚ್ 30ರಂದು ಕಾಲುವೆಯಲ್ಲಿ ಅಡ್ಡಕ್ಕೆ ಸಿಕ್ಕಿಹಾಕಿಕೊಂಡಿದ್ದ ಹಡಗನ್ನು ಬೃಹತ್ ಕಾರ್ಯಾಚರಣೆಯ ಬಳಿಕ ಸೋಮವಾರ ತೆರವುಗೊಳಿಸಲಾಗಿದೆ.

ಹಡಗನ್ನು ಮಂಗಳವಾರ ಸೂಯೆಝ್ ಕಾಲುವೆಯ ಉತ್ತರ ಮತ್ತು ದಕ್ಷಿಣದ ತುದಿಗಳ ನಡುವೆ ಇರುವ ಬೃಹತ್ ಜಲಪ್ರದೇಶ ಗ್ರೇಟ್ ಬಿಟರ್ ಲೇಕ್‌ನಲ್ಲಿ ಸುರಕ್ಷಿತವಾಗಿ ಲಂಗರು ಹಾಕಲಾಗಿದೆ.

ಹಡಗಿಗೆ ಆಗಿರಬಹುದಾದ ಹಾನಿಗಳು ಮತ್ತು ಅದು ನೆಲಕ್ಕೆ ತಾಗಿ ನಿಲ್ಲಲು ಕಾರಣವಾದ ಅಂಶಗಳ ಬಗ್ಗೆ ಪರಿಣತರು ತನಿಖೆ ನಡೆಸಲಿದ್ದಾರೆ ಎಂದು ಹಿರಿಯ ಕ್ಯಾನಲ್ ಪೈಲಟ್ ಒಬ್ಬರು ‘ಅಸೋಸಿಯೇಟಡ್ ಪ್ರೆಸ್’ ಸುದ್ದಿ ಸಂಸ್ಥೆಗೆ ಹೇಳಿದರು.

ಜಪಾನ್ ಕಂಪೆನಿಯೊಂದರ ಒಡೆತನದ ಹಡಗಿನ ಇಂಜಿನ್‌ಗಳನ್ನು ಇಂಜಿನಿಯರ್‌ಗಳು ಪರಿಶೀಲಿಸುತ್ತಿದ್ದಾರೆ. ಅದು ಏಶ್ಯದಿಂದ ನೆದರ್‌ಲ್ಯಾಂಡ್ಸ್‌ಗೆ ಸರಕು ಸಾಗಿಸುತ್ತಿದೆ.

ಭಾರತೀಯ ನಾವಿಕರ ವೃತ್ತಿಪರತೆಗೆ ಶ್ಲಾಘನೆ

ಮಾರ್ಚ್ 23ರಿಂದ ಸೋಮವಾರದವರೆಗೆ ಸೂಯೆಝ್ ಕಾಲುವೆಯಲ್ಲಿ ಸಿಕ್ಕಿಹಾಕಿಕೊಂಡಿದ್ದ ದೈತ್ಯ ಕಂಟೇನರ್ ಹಡಗಿನ 25 ಭಾರತೀಯ ನಾವಿಕರು, ಕೊನೆಯವರೆಗೂ ಹಡಗಿನಲ್ಲೇ ಇದ್ದು ತೆರವು ಕಾರ್ಯಾಚರಣೆಗೆ ಸಹಕಾರ ನೀಡಿದ್ದರು ಎಂದು ಹಡಗಿನ ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

 ಹಡಗನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಈ ಸಿಬ್ಬಂದಿ ಕೂಡ ಭಾಗಿಯಾಗಿದ್ದರು ಎಂದು ಜಪಾನ್ ಕಂಪೆನಿಯೊಂದರ ಮಾಲೀಕತ್ವದ ಹಡಗಿನ ತಾಂತ್ರಿಕ ನಿರ್ವಹಣೆಯ ಉಸ್ತುವಾರಿ ಹೊತ್ತಿರುವ ಜರ್ಮನಿಯ ಬೆರ್ನಾರ್ಡ್ ಶಲ್ಟ್ ಶಿಪ್‌ಮ್ಯಾನೇಜ್‌ಮೆಂಟ್ (ಬಿಎಸ್‌ಎಮ್) ಕಂಪೆನಿ ಮಾಧ್ಯಮ ಹೇಳಿಕೆಯೊಂದರಲ್ಲಿ ತಿಳಿಸಿದೆ.

‘‘25 ಭಾರತೀಯರನ್ನು ಒಳಗೊಂಡ ನಾವಿಕ ತಂಡವು ಹಡಗಿನಲ್ಲೇ ಇತ್ತು. ಅವರು ಸುರಕ್ಷಿತರಾಗಿದ್ದಾರೆ ಹಾಗೂ ಉತ್ತಮ ಆರೋಗ್ಯದಲ್ಲಿದ್ದಾರೆ. ಅವರು ಹಡಗನ್ನು ಮರುತೇಲಿಸುವ ಕಾರ್ಯಾಚರಣೆಯಲ್ಲಿ ಎಲ್ಲರೊಂದಿಗೆ ನಿಕಟವಾಗಿ ಬೆರೆತು ಕೆಲಸ ಮಾಡುತ್ತಿದ್ದರು. ಅವರ ಕಠಿಣ ಪರಿಶ್ರಮ ಮತ್ತು ವೃತ್ತಿಪರತೆ ಪ್ರಶಂಸನೀಯ’’ ಎಂದು ಕಂಪೆನಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X