Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ ಮಾರ್ಗಸೂಚಿ ಪಾಲಿಸದ ಶಿಕ್ಷಣ...

ಕೋವಿಡ್ ಮಾರ್ಗಸೂಚಿ ಪಾಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ30 March 2021 8:14 PM IST
share
ಕೋವಿಡ್ ಮಾರ್ಗಸೂಚಿ ಪಾಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಮಾ.30: ಎಂಐಟಿ, ಕುಂಜಾರುಗಿರಿ, ಕಾರ್ಕಳ ಹಾಗೂ ಶಂಕರ ನಾರಾಯಣಗಳ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಕೋವಿಡ್ ಪ್ರಕರಣಗಳು ದಾಖಲಾಗಿರುವುದರಿಂದ ಅಲ್ಲಿ ಕೋವಿಡ್ ಮಾರ್ಗಸೂಚಿ ಸರಿಯಾಗಿ ಪಾಲನೆ ಮಾಡದಿರುವುದು ಕಂಡು ಬರುತ್ತಿದೆ. ಆದುದರಿಂದ ಸರಕಾರಿ ಅಥವಾ ಖಾಸಗಿ ಶಿಕ್ಷಣ ಸಂಸ್ಥೆಗಳು ಸರಿಯಾಗಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡದಿದ್ದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರಗಿಸಲಾಗು ವುದೆಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎರಡು ದಿನಗಳ ಹಿಂದೆ ಪರಿಷ್ಕರಿಸಲಾದ ಕೋವಿಡ್ ಮಾರ್ಗಸೂಚಿಯಲ್ಲಿ ಹಬ್ಬಗಳಂತೆ ಜಾತ್ರೆ ಮತ್ತು ಉತ್ಸವಗಳನ್ನು ಕೂಡ ಸಾರ್ವಜನಿಕವಾಗಿ ಆಚರಿ ಸಲು ಅವಕಾಶ ಇಲ್ಲ. ಆದುದರಿಂದ ಜಾತ್ರೆ ಹಾಗೂ ಉತ್ಸವಗಳು ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತ ಆಗಿರಬೇಕೆಂದು ಸಂಬಂಧಪಟ್ಟರಿಗೆ ಸೂಚನೆ ನೀಡಲಾಗಿದೆ ಎಂದರು.

ಪಾಸಿಟಿವಿಟಿ ಪ್ರಮಾಣ ಏರಿಕೆ

ಕೋವಿಡ್ ಪ್ರಕರಣದಲ್ಲಿ ಮಣಿಪಾಲದ ಎಂಐಟಿ ಹೊರತು ಪಡಿಸಿ ಜಿಲ್ಲೆಯ ಪರಿಸ್ಥಿತಿ ಇತರ ಜಿಲ್ಲೆಗಳಿಗಿಂತ ಉತ್ತಮವಾಗಿದೆ. ಎಂಐಟಿಯಲ್ಲಿ ಶೇ.15ರಷ್ಟು ಪಾಸಿಟಿವಿ ಪ್ರಮಾಣ ಇದ್ದರೆ, ಅದರ ಹೊರತು ಪಡಿಸಿ ಜಿಲ್ಲೆಯಲ್ಲಿ ಕೇವಲ ಶೇ.2ರಷ್ಟು ಪಾಸಿಟಿವಿಟಿ ಪ್ರಮಾಣ ಇದೆ. ಆದುದರಿಂದ ಯಾರು ಆತಂಕ ಪಡಬೇಕಾದ ಅಗತ್ಯ ಇಲ್ಲ. ಆದರೆ ಪಾಸಿಟಿವಿಟಿ ಪ್ರಮಾಣ ಕ್ರಮೇಣ ಏರಿಕೆ ಯಾಗುತ್ತಿರುವುದರಿಂದ ಎಚ್ಚರ ವಹಿಸುವುದು ಅತೀ ಅಗತ್ಯ ಎಂದು ಅವರು ಹೇಳಿದರು.

ಯಕ್ಷಗಾನ, ಸಿನೆಮಾ, ನಾಟಕಗಳನ್ನು ಸದ್ಯಕ್ಕೆ ನಿಷೇಧ ಮಾಡಿಲ್ಲ. ಅಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲನೆ ಮಾಡುವಂತೆ ಸೂಚನೆ ನೀಡಲಾ ಗಿದೆ. ಯಾವುದೇ ಕಾರ್ಯಕ್ರಮ ಆಯೋಜಿಸಿದರೂ ಅಲ್ಲಿ ಕೋವಿಡ್ ನಿಯಮ ಉಲ್ಲಂಘನೆಯಾದರೆ ಆ ಸ್ಥಳದ ಮಾಲಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಮರೀನಾ ನಿರ್ಮಾಣದ ಬಗ್ಗೆ ಜಿಲ್ಲಾಡಳಿತ ಯಾವುದೇ ನಿರ್ಧಾರ ತೆಗೆದು ಕೊಂಡಿಲ್ಲ. ಗೋವಾದ ಖಾಸಗಿ ಸಂಸ್ಥೆಯೊಂದು ಬಂದು ಮರೀನಾ ನಿರ್ಮಾಣ ದ ಬಗ್ಗೆ ವಿಸ್ಕೃತ ವಿವರವನ್ನು ಪ್ರಸ್ತುತ ಪಡಿಸಿದೆ. ಅದು ಬಿಟ್ಟು ಈ ಯೋಜನೆಗೆ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಮಣಿಪಾಲದ ಅಪಾರ್ಟ್‌ಮೆಂಟ್ ಸೀಲ್‌ಡೌನ್ 

ಮಣಿಪಾಲ ಎಂಐಟಿಯ ಎಲ್ಲ ವಿದ್ಯಾರ್ಥಿಗಳನ್ನು ಪರೀಕ್ಷೆ ಮಾಡಲಾಗಿದೆ. ಇದೀಗ ಹೊರ ಭಾಗದಲ್ಲಿ ನೆಲೆಸಿರುವ ವಿದ್ಯಾರ್ಥಿಗಳನ್ನು ಪರೀಕ್ಷಿಸ ಲಾಗುತ್ತಿದೆ. ಅದರಿಂದ 10ಕ್ಕಿಂತ ಹೆಚ್ಚು ಪ್ರಕರಣ ಕಂಡು ಬಂದ ಮಣಿಪಾಲದ ಮಾಂಡವಿ ಅಪಾರ್ಟ್‌ಮೆಂಟ್‌ನ್ನು ಸೀಲ್‌ಡೌನ್ ಮಾಡಿ ಕಂಟೈನ್‌ ಮೆಂಟ್ ವಲಯ ಎಂಬುದಾಗಿ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈವರೆಗೆ ಜಿಲ್ಲೆಯಲ್ಲಿ ಒಟ್ಟು ಮೂರು ಪ್ರದೇಶಗಳನ್ನು ಕಂಟೈನ್‌ಮೆಂಟ್ ವಲಯ ಎಂಬುದಾಗಿ ಘೋಷಿಸಲಾಗಿದೆ. ಇದೀಗ ಬಫರ್ ರೆನ್‌ಗಳಲ್ಲಿ ರುವ ಎಲ್ಲರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅಲ್ಲಿಯೂ ಸಾಕಷ್ಟು ಪ್ರಕರಣಗಳು ಕಂಡುಬರುತ್ತಿವೆ. ಆದುದರಿಂದ ಮಣಿಪಾಲ ದಲ್ಲಿ ವ್ಯಾಪಾರ ವಹಿವಾಟು ಮಾಡುವಾಗ ಸಾರ್ಜನಿಕರು ಸಾಕಷ್ಟು ಎಚ್ಚರಿಕೆ ವಹಿಸ ಬೇಕು. ಎಂದು ಅವರು ಮನವಿ ಮಾಡಿದರು.

ಉಡುಪಿ ಉತ್ಸವಕ್ಕೆ ಅನುಮತಿ ನಿರಾಕರಣೆ

ನಗರದ ಕಲ್ಸಂಕ ರಾಯಲ್ ಗಾರ್ಡನ್‌ನಲ್ಲಿ ನಡೆಸಲು ಉದ್ದೇಶಿಸಿರುವ ಉಡುಪಿ ಉತ್ಸವಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.

ಈ ಸಂಬಂಧ ಬಂದ ಅರ್ಜಿಗಳನ್ನು ಕೂಡ ವಜಾಗೊಳಿಸಲಾಗಿದೆ. ಅನು ಮತಿ ಇಲ್ಲದೆಯೇ ಈಗಾಗಲೇ ಖಾಸಗಿ ಜಾಗದಲ್ಲಿ ಉಡುಪಿ ಉತ್ಸವಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಲಾಗಿದೆ. ಆದರೆ ಕೋವಿಡ್ ಹೆಚ್ಚಾಗಿರುವುದರಿಂದ ನಾವು ಅದಕ್ಕೆ ಅವಕಾಶ ಕೊಡುವುದಿಲ್ಲ. ಅವರು ಸೆಟ್ ಮಾಡಿ ದ್ದರೆ ಅದನ್ನು ವಾಪಾಸ್ಸು ತೆಗೆದುಕೊಂಡು ಹೋಗಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X