ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 53 ಮಂದಿಯಲ್ಲಿ ಕೊರೋನ ಸೋಂಕು ಪತ್ತೆ
ಉಡುಪಿ, ಮಾ.30: ಜಿಲ್ಲೆಯಲ್ಲಿ ಮಂಗಳವಾರ 53 ಮಂದಿ ಕೋವಿಡ್‌ಗೆ ಪಾಸಿಟಿವ್ ಬಂದಿದ್ದಾರೆ. ಇಂದು ಪಾಸಿಟಿವ್ ಬಂದವರಲ್ಲಿ 18 ಮಂದಿ ಎಂಐಟಿಯ ವಿದ್ಯಾರ್ಥಿಗಳಿ ದ್ದಾರೆ. ಇದರೊಂದಿಗೆ ಎಂಐಟಿ ಕ್ಯಾಂಪಸ್‌ನಲ್ಲಿ ಕೋವಿಡ್‌ಗೆ ಪಾಸಿಟಿವ್ ಬಂದವರ ಸಂಖ್ಯೆ 1025ಕ್ಕೇರಿದೆ.
ದಿನದಲ್ಲಿ 79 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆ ಯಲ್ಲಿರುವವರ ಸಂಖ್ಯೆ ಈಗ 753 ಆಗಿದೆ. ಮಂಗಳವಾರ ಪಾಸಿಟಿವ್ ಬಂದವರಲ್ಲಿ 32 ಮಂದಿ ಪುರುಷರು ಹಾಗೂ 21 ಮಂದಿ ಮಹಿಳೆಯರು. ಇವರಲ್ಲಿ 33 ಮಂದಿ ಉಡುಪಿ ತಾಲೂಕಿನವರಾದರೆ 16 ಮಂದಿ ಕುಂದಾಪುರ ತಾಲೂಕು ಹಾಗೂ ಮೂವರು ಕಾರ್ಕಳ ತಾಲೂಕಿನವರು. ಹೊರಜಿಲ್ಲೆಯ ಒಬ್ಬರು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.
ಸೋಮವಾರ 79 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 24,241 ಕ್ಕೇರಿದೆ. ಜಿಲ್ಲೆಯ 2297 ಮಂದಿ ಸೋಮವಾರ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇಂದಿನ 53 ಮಂದಿ ಸೇರಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 25,185 ಆಗಿದೆ ಎಂದು ಡಾ.ಸೂಡ ತಿಳಿಸಿದರು.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,18,510 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ ಸೋಂಕಿನಿಂದ ಸತ್ತವರ ಸಂಖ್ಯೆ 191 ಆಗಿದೆ.







