ಬೆಳಗಾವಿ ಪ್ರವಾಸ ಮೊಟಕುಗೊಳಿಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು, ಮಾ.30: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಳ್ಳಲು ಮಂಗಳವಾರ ಬೆಳಗಾವಿಗೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಜೆ ಶಾಸಕರು ಹಾಗೂ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಬುಧವಾರ ಬೆಳಗ್ಗೆ ಬೆಂಗಳೂರಿಗೆ ಹಿಂದಿರುಗಬೇಕಿತ್ತು.
ಆದರೆ, ಸಿಡಿ ಪ್ರಕರಣಕ್ಕೆ ಸಂಬಂಧಿಸಿದ ಯುವತಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸುತ್ತಿರುವ ಮಾಹಿತಿ ಪಡೆದ ಮುಖ್ಯಮಂತ್ರಿ, ಶಾಸಕರು ಹಾಗೂ ಮುಖಂಡರ ಸಭೆಯನ್ನು ರದ್ದುಗೊಳಿಸಿ, ರಸ್ತೆ ಮಾರ್ಗವಾಗಿ ಬೆಳಗಾವಿಯಿಂದ ಹುಬ್ಬಳ್ಳಿಗೆ ಬಂದು ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ.
Next Story





