Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉಪಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲೂ...

ಉಪಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ30 March 2021 11:30 PM IST
share
ಉಪಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಡಿ.ಕೆ.ಶಿವಕುಮಾರ್

ಕಲಬುರಗಿ, ಮಾ.30: ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಉಪ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಒಳ್ಳೆಯ ವಾತಾವರಣ ಸೃಷ್ಟಿಯಾಗಿದೆ. ಬಿಜೆಪಿ ಸರಕಾರದ ವೈಫಲ್ಯಗಳೆ ನಮಗೆ ಪ್ರಮುಖ ಅಸ್ತ್ರಗಳಾಗಿವೆ ಎಂದರು.

ಬಿಜೆಪಿ ಸರಕಾರ ಕೋವಿಡ್ ಸಂದರ್ಭದಲ್ಲಿ ಸಾರ್ವಜನಿಕರಿಗೆ ನೆರವು ನೀಡಿಲ್ಲ. ಯುವಕರಿಗೆ ಉದ್ಯೋಗ ಇಲ್ಲ. ಬ್ಯಾಂಕ್‍ಗಳಿಂದಲೂ ಅನುಕೂಲವಾಗಿಲ್ಲ. ತೆರಿಗೆಗಳನ್ನು ಏರಿಸಿದ್ದಾರೆ. ಅಡುಗೆ ಅನಿಲ, ತರಕಾರಿ, ಫಲಗಳನ್ನು ತೆಗೆದುಕೊಳ್ಳಲು ಆಗುತ್ತಿಲ್ಲ. ಪೆಟ್ರೋಲ್, ಡಿಸೇಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಜನಸಾಮಾನ್ಯರಿಗೆ ನೆರವು ನೀಡುವಲ್ಲಿ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ಸರಕಾರದ ವಿರುದ್ಧ ಜನರೇ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಬಸವಕಲ್ಯಾಣದಲ್ಲಿ ಜೆಡಿಎಸ್‍ನವರು ಮುಸ್ಲಿಮ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾರೆ. ಅದು ಎಷ್ಟರಮಟ್ಟಿಗೆ ಪರಿಣಾಮ ಬೀರುತ್ತದೆ ಅನ್ನೋದನ್ನು ಕಾದು ನೋಡೋಣ. ಬಸವಕಲ್ಯಾಣದಲ್ಲಿ ಶಾಸಕರಾಗಿದ್ದ ನಾರಾಯಣರಾವ್ ಅವರ ಧರ್ಮ ಪತ್ನಿಗೆ ಎಲ್ಲ ನಾಯಕರ ಒಮ್ಮತದ ತೀರ್ಮಾನದಂತೆ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದು, ಎಲ್ಲರೂ ಅವರನ್ನು ಗೆಲ್ಲಿಸಲು ಪಣ ತೊಟ್ಟಿದ್ದಾರೆ ಎಂದು ಅವರು ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗಕ್ಕೆ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ ಅವರು ಹೋರಾಟ ಮಾಡಿ ಈ ಭಾಗಕ್ಕೆ ನ್ಯಾಯ ಕೊಡಿಸಲು ಶ್ರಮಿಸಿದ್ದಾರೆ. ಆದರೆ, ಈ ಸರಕಾರದಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನೆ ಬಿಡುಗಡೆ ಮಾಡಿಲ್ಲ. ಇದನ್ನು ಆಡಳಿತ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.

ಸಿಡಿ ಪ್ರಕರಣದ ಬಗ್ಗೆ ಮಾತನಾಡಲ್ಲ: ನಾವು ಅಧಿವೇಶನದಲ್ಲಿ ಏನು ಮಾತನಾಡಬೇಕೋ ಅದನ್ನು ಮಾತನಾಡಿದ್ದೇವೆ. ನಾನು ಚುನಾವಣೆ ಮಾಡಲು ಬಂದಿದ್ದೇನೆ. ನಾನು ತಲೆ ಕೆಡಿಸಿಕೊಳ್ಳಲು ಹೋಗಲ್ಲ. ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.

ನನ್ನ ವಿರುದ್ಧದ ಆರೋಪಗಳು, ಪ್ರತಿಭಟನೆಗಳನ್ನೆಲ್ಲ ಕ್ರೀಡಾಸ್ಫೂರ್ತಿಯಿಂದ ತೆಗೆದುಕೊಂಡಿದ್ದೇನೆ. ನಮ್ಮ ಕಾರ್ಯಕರ್ತರಿಗೂ ಹೇಳುತ್ತಿದ್ದೇನೆ. ಯಾರು ಆತಂಕ ಪಡುವ ಅಗತ್ಯವಿಲ್ಲ. ಅದು ಬಿಜೆಪಿಯವರ ಸಂಸ್ಕೃತಿಯೋ ಅಥವಾ ಬೇರೆಯವರ ಸಂಸ್ಕೃತಿಯೋ ಎಲ್ಲ ಜನ ಗಮನಿಸುತ್ತಿದ್ದಾರೆ. ನೀವು ಶಾಂತ ರೀತಿಯಿಂದ ಇರಬೇಕು ಎಂದು ಮನವಿ ಮಾಡುತ್ತಿದ್ದೇನೆ ಎಂದು ಶಿವಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X