ಆಧಾರ್ ಜೊತೆಗೆ ಪಾನ್ ಕಾರ್ಡ್ ಲಿಂಕ್: ಮತ್ತೆ ಗಡುವು ವಿಸ್ತರಿಸಿದ ಕೇಂದ್ರ

ಹೊಸದಿಲ್ಲಿ: ಪಾನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಗಡುವು ಇಂದಿಗೆ ಮುಕ್ತಾಯವಾಗುತ್ತಿದ್ದು, ಸದ್ಯ ಸರಕಾರವು ಮತ್ತೊಮ್ಮೆ ಅವಧಿಯನ್ನು ವಿಸ್ತರಿಸಿದೆ ಎಂದು ndtv.com ವರದಿ ಮಾಡಿದೆ.
ನೂತನ ಆಧಾರ್-ಪಾನ್ ಜೋಡಣೆ ಗಡುವನ್ನು ಜೂನ್ 30ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ. ಒಂದು ವೇಳೆ, ಪಾನ್ ಕಾರ್ಡ್ ಕೊನೆಯ ದಿನಾಂಕದ ಮೊದಲು ಆಧಾರ್ ಕಾರ್ಡ್‌ನೊಂದಿಗೆ ಸಂಪರ್ಕ ಹೊಂದಿಲ್ಲದಿದ್ದರೆ, ಅದು ನಿಷ್ಕ್ರಿಯಗೊಳ್ಳುವ ಸಾಧ್ಯತೆಯಿದೆ.
Next Story