6 ಸಚಿವರು ಕೋರ್ಟ್ ಮೊರೆ ಹೋದ ವಿಚಾರ: ಸುದ್ದಿ ಪ್ರಸಾರ ನಿರ್ಬಂಧ ಮೇ 29ರವರೆಗೆ ವಿಸ್ತರಣೆ

ಬೆಂಗಳೂರು, ಮಾ.31: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವೀಡಿಯೊ ಬಹಿರಂಗಗೊಂಡ ಬೆನ್ನಲ್ಲೇ ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ವರದಿ ಪ್ರಸಾರ ಮಾಡದಂತೆ ನಿರ್ದೇಶಿಸಲು ಕೋರಿ ಆರು ಸಚಿವರು ಸಲ್ಲಿಸಿದ್ದ ಅರ್ಜಿ ಸಂಬಂಧ ಮೆಯೋ ಹಾಲ್ ಕೋರ್ಟ್ ಮಧ್ಯಂತರ ಆದೇಶವನ್ನು ಮೇ 29ರವರೆಗೆ ವಿಸ್ತರಿಸಿದೆ.
ತಮ್ಮ ವಿರುದ್ಧ ಮಾನಹಾನಿಕಾರಿ ಸುದ್ದಿಯನ್ನು ನಿರ್ಬಂಧಿಸುವಂತೆ ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಕ್ರೀಡಾ ಸಚಿವ ನಾರಾಯಣಗೌಡ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ರಾಜಕೀಯ ಷಡ್ಯಂತ್ರದ ಗುಮಾನಿ ಇರುವ ಹಿನ್ನೆಲೆಯಿಂದಾಗಿ ಕೋರ್ಟ್ ಮೊರೆ ಹೋಗಿದ್ದೇವೆ ಎಂದು ಸಚಿವರು ಸ್ಪಷ್ಟನೆ ನೀಡಿದ್ದರು.
Next Story





