ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ರಿಗೆ ಕೊರೋನ ಪಾಸಿಟಿವ್

ಮೈಸೂರು,ಮಾ.31: ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ.ಪುಷ್ಪಾ ಅಮರ್‍ನಾಥ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿರುವ ಅವರು ನನ್ನ ಕೋವಿಡ್ ಪರೀಕ್ಷೆ ಪಾಸಿಟಿವ್ ಬಂದಿದ್ದು, ಮುಂಜಾಗ್ರತೆ ದೃಷ್ಟಿಯಿಂದ ಸಮೀಪದ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
Next Story





