Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಈಶ್ವರಪ್ಪ ತಮ್ಮ ರಾಜಕೀಯ ಜೀವನದಲ್ಲಿ ಮೊದಲ...

ಈಶ್ವರಪ್ಪ ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ ವ್ಯಂಗ್ಯ

''ರಾಜ್ಯಪಾಲರು ಮುಖ್ಯಮಂತ್ರಿಯನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಲಿ''

ವಾರ್ತಾಭಾರತಿವಾರ್ತಾಭಾರತಿ1 April 2021 11:34 AM IST
share
ಈಶ್ವರಪ್ಪ ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು, ಎ.1: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ. ಆದ್ದರಿಂದ ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕನಾಗಿ ನಾನು ಮಾಡುತ್ತಾ ಬಂದಿರುವ ಆರೋಪಗಳಿಗೆ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಮಾತಿಗೆ ಬದ್ದರಾಗಿ ಉಳಿಯಬೇಕು ಎಂದಿರುವ ಸಿದ್ದರಾಮಯ್ಯ, ಈಶ್ವರಪ್ಪ ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.

ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. ಬಿಜೆಪಿ ವರಿಷ್ಠರು ಈಶ್ವರಪ್ಪರ ಬಾಯಿ ಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

- ಮುಖ್ಯಮಂತ್ರಿ ವಿರುದ್ಧ ಈಶ್ವರಪ್ಪನವರು ರಾಜ್ಯಪಾಲರಿಗೆ ‌ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ ಮೋದಿ ಮತ್ತು ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದು ಸಿದ್ದರಾಮಯ್ಯ ಎಂದು ಹೇಳಿದ್ದಾರೆ.

ರಾಜ್ಯ ಸರಕಾರದ‌ ಖಜಾನೆ ಖಾಲಿಯಾಗಿರುವುದಕ್ಕೆ ಕೊರೋನ ವೈರಸ್ ಕಾರಣ ಅಲ್ಲ, ಈ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎನ್ನುವುದನ್ನು ಈಶ್ವರಪ್ಪ ತನ್ನ ಸಂಶೋಧನೆ‌ ಮೂಲಕ ಬಹಿರಂಗಗೊಳಿಸಿದ್ದಾರೆ.

- ನಮ್ಮ ಸರ್ಕಾರ 10 ಶೇ. ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನ ಮಂತ್ರಿಯವರೇ, ನಿಮ್ಮದೇ ಸಚಿವರು ನಿಮಗೆ ಕಳಿಸಿರುವ ನಿಮ್ಮ ಸರ್ಕಾರದ ಜಾತಕ ಪತ್ರವನ್ನು ಪರಿಶೀಲಿಸಿ ನೀವೇ ರಾಜ್ಯ ಸರಕಾರಕ್ಕೆ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, ‘ನಾ ಖಾವುಂಗಾ, ನಾ ಖಾನೆ ದೂಂಗಾ’ ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು ಬ ‘ಮೈ ಬಿ ಖಾವೂಂಗಾ, ತುಮ್ ಬಿ ಖಾವೋ’ ಎಂದು ಬದಲಿಸಿ ಬಿಡಿ.

ಆಪರೇಷನ್ ಕಮಲ‌ ಪ್ರಕರಣದ  ತನಿಖೆಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ನೀಡಿರುವುದು, ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲ ಎಂಬ‌ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎನ್ನುವ ನಮ್ಮ ಆರೋಪವನ್ನು ಪುಷ್ಟೀಕರಿಸಿದೆ.

ರಾಜ್ಯದ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣವಾದ ಆಪರೇಷನ್ ಕಮಲ‌ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೋಟ್ಯಂತರ  ರೂಪಾಯಿಗಳ ಆಮಿಷದ ಬಗ್ಗೆ ಸಮಗ್ರಸ್ವರೂಪದ ತನಿಖೆ ನಡೆಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X