Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಅನಧಿಕೃತ ಮೀನುಗಾರಿಕೆ ನಡೆಯದಂತೆ ಎಚ್ಚರ...

​ಅನಧಿಕೃತ ಮೀನುಗಾರಿಕೆ ನಡೆಯದಂತೆ ಎಚ್ಚರ ವಹಿಸಿ: ಕ್ಯಾ.ಮಣಿವಣ್ಣನ್ ಪಿ.

‘ಸಿ-ಅಂಬುಲೆನ್ಸ್ ಬೋಟ್ ಶೀಘ್ರವೇ ಲಭ್ಯ’

ವಾರ್ತಾಭಾರತಿವಾರ್ತಾಭಾರತಿ1 April 2021 8:12 PM IST
share
​ಅನಧಿಕೃತ ಮೀನುಗಾರಿಕೆ ನಡೆಯದಂತೆ ಎಚ್ಚರ ವಹಿಸಿ: ಕ್ಯಾ.ಮಣಿವಣ್ಣನ್ ಪಿ.

ಉಡುಪಿ, ಎ.1: ಅರಬಿ ಸಮುದ್ರದಲ್ಲಿ ಯಾವುದೇ ರೀತಿಯ ಅನಧಿಕೃತ ಹಾಗೂ ನಿಷೇಧಿತ ಮೀನುಗಾರಿಕಾ ಚಟುವಟಿಕೆಗಳನ್ನು ನಡೆಸದಂತೆ ಎಚ್ಚರವಹಿಸಬೇಕು ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಪಿ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗುರುವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲೆಯ ಪಶುಪಾಲನೆ ಮತ್ತು ಮೀನುಗಾರಿಕಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಬಂದರುಗಳಲ್ಲಿ ಮೀನುಗಾರರು ತಪ್ಪದೇ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳಾದ ಮಾಸ್ಕ್ ಧರಿಸುವುದು, ಸುರಕ್ಷತಾ ಅಂತರ ಪಾಲನೆ ಹಾಗೂ ಕೈಗಳ ಸ್ವಚ್ಛತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ತಪ್ಪಿದ್ದಲ್ಲಿ ಅಂತವರ ವಿರುದ್ಧ ಕ್ರು ತೆಗೆದುಕೊಳ್ಳಬೇಕು ಎಂದರು.

ಸಮುದ್ರದಲ್ಲಿ ಅಪಘಾತಕ್ಕೀಡಾದವರನ್ನು ರಕ್ಷಿಸಿ, ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಸಿ-ಆಂಬುಲೆನ್ಸ್ ಬೋಟ್ ಅನ್ನು ಶೀಘ್ರದಲ್ಲಿಯೇ ನಿಯೋಜಿಸಲಾಗುವುದು ಎಂದವರು ತಿಳಿಸಿದರು.

ಬಂದರುಗಳಲ್ಲಿ ಈಗಾಗಲೇ ಅಳವಡಿಸಿರುವ ಸಿಸಿ ಕ್ಯಾಮೆರಾಗಳು ದಿನಪೂರ್ತಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳು ಆಗ್ಗಿಂದಾಗೆ ಪರಿಶೀಲಿಸಬೇಕು. ಅಗತ್ಯವಿದ್ದಲ್ಲಿ ಹೆಚ್ಚುವರಿ ಉತ್ತಮ ಗುಣಮಟ್ಟದ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಲ್ಪೆಬಂದರಿಗೆ ಪ್ರತಿದಿನ 8ರಿಂದ 10 ಸಾವಿರ ಜನ ಬಂದು ಹೋಗುತ್ತಿರುತ್ತಾರೆ. ಅವುಗಳಲ್ಲಿ ಸ್ಥಳೀಯರು, ಹೊರ ಜಿಲ್ಲೆ ಹಾಗೂ ರಾಜ್ಯದಿಂದ ಬಂದು ಹೋಗುವವರ ಸಂಖ್ಯೆಯು ಹೆಚ್ಚಿದ್ದು, ಮೀನುಗಾರಿಕಾ ಚಟುವಟಿಕೆಗಳಲ್ಲಿ ಭಾಗವಹಿಸುವವರ ನೋಂದಣಿ ಸೇರಿದಂತೆ ನಿಯಂತ್ರಣಕ್ಕೆ ವಿವಿಧ ಯೋಜನೆಗಳನ್ನು ರೂಪಿಸಬೇಕು ಎಂದು ಕರಾವಳಿ ಕಾವಲು ಪಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ನೋಂದಣಿಯಾಗದಿರುವ ಪಾತಿ ದೋಣಿಗಳನ್ನು ಮುಂದಿನ ಮೂರು ತಿಂಗಳ ಒಳಗಾಗಿ ನೋಂದಣಿ ಮಾಡಿ ಮುಗಿಸಬೇಕು ಎಂದ ಅವರು, ಮೀನುಗಾರಿಕೆಗೆ ತೆರಳುವ ವಿವಿಧ ರೀತಿಯ ಬೋಟ್‌ಗಳು ಸರಕಾರದ ಸೂಚನೆಯನ್ವಯ ನಿಗದಿಪಡಿಸಿರುವ ಕಲರ್ ಕೋಡಿಂಗ್‌ಗಳನ್ನು ತಪ್ಪದೇ ಪಾಲಿಸಬೇಕು ಎಂದರು.

ಹೊರ ಜಿಲ್ಲೆಗಳಿಂದ ಅನಧಿಕೃತವಾಗಿ ಮೀನುಗಾರಿಕೆ ಚಟುವಟಿಕೆ ನಡೆಸುವ ದೋಣಿ ಗಳಿಗೆ ದಂಡ ವಿಧಿಸಬೇಕು. ದೋಣಿಗಳಿಗೆ ಚೀನಾ ನಿರ್ಮಿತ ಟ್ರೇಸಿಂಗ್ ಡಿವೈಸ್‌ಗಳನ್ನು ಅಳವಡಿಸಿದ್ದು, ಅವುಗಳು ಬಂದರು ಕಡೆ ಬರುವಾಗ ಅವುಗಳನ್ನು ಗುರುತಿಸಲು ಗೊಂದಲಗಳು ಉಂಟಾಗುತ್ತಿವೆ. ಅಂತಹ ಸಾಧನಗಳ ತಾಂತ್ರಿಕೆಯನ್ನು ಸರಿಪಡಿಸಬೇಕು ಎಂದರು.

ಈಗಾಗಲೇ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಲಾಗಿದೆ ಎಂದ ಅವರು, ಪ್ರತಿ ಜಿಲ್ಲೆಯಲ್ಲೂ ಗೋ-ಶಾಲೆಗಳನ್ನು ತೆರೆಯಲು ಸ್ಥಳಗಳನ್ನು ಗುರುತಿಸುವುದರೊಂದಿಗೆ ಸುಸಜ್ಜಿತ ಗೋಶಾಲೆಗಳನ್ನು ಪ್ರಾರಂಭಿಸಲು ಅಧಿಕಾರಿಗಳು ಮುಂದಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಮುಖ್ಯ ನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಕರಾವಳಿ ಕಾವಲು ಪೊಲೀಸ್ ಘಟಕದ ಪೊಲೀಸ್ ಅಧೀಕ್ಷಕ ಚೇತನ್ ಆರ್. ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X