ನೀವು ಮಾಡಿರುವ ಷಡ್ಯಂತ್ರಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕೇ?: ಡಿಕೆಶಿಗೆ ಬಿಜೆಪಿ ಪ್ರಶ್ನೆ

ಬೆಂಗಳೂರು, ಎ. 1: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ, ಸಂತ್ರಸ್ತೆ ನೇರವಾಗಿ ನಿಮ್ಮ ಹೆಸರು ಹೇಳಿದ್ದಾರೆ. ಸಂತ್ರಸ್ತೆಯ ಪೋಷಕರೂ ನಿಮ್ಮ ಮೇಲೆ ಬೊಟ್ಟು ಮಾಡಿದ್ದಾರೆ. ಈಗ ನಿಮ್ಮದೇ ಪಕ್ಷದ ಮುಖಂಡ ಲಖನ್ ಜಾರಕಿಹೊಳಿ ಅವರು ನಿಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ನೀವು ಮಾಡಿರುವ ಷಡ್ಯಂತ್ರಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕೇ?' ಎಂದು ಬಿಜೆಪಿ, ಲಖನ್ ಜಾರಕಿಹೊಳಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟೀಕಿಸಿದೆ.
ಗುರುವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಮುಳುಗುತ್ತಿರುವ ಕಾಂಗ್ರೆಸ್ ಎಂಬ ಹಡಗಿನಲ್ಲಿ ಅಸ್ತಿತ್ವಕ್ಕಾಗಿ ಹೊಡೆದಾಟವಾಗುತ್ತಿದೆ. ಜೆಡಿಎಸ್ ಪಕ್ಷದಿಂದ ಬಂದ ವಲಸೆ ನಾಯಕ ಸಿದ್ದರಾಮಯ್ಯ ಅವರು ನಾನೇ ಮುಖ್ಯಮಂತ್ರಿ ಎನ್ನುತ್ತಾರೆ. ಮೂಲ ನಾಯಕ ಡಿ.ಕೆ. ಶಿವಕುಮಾರ್ ಅವರು, ನಾನೇಕೆ ಮುಖ್ಯಮಂತ್ರಿ ಆಗಬಾರದು ಎಂದು ಆಕಾಂಕ್ಷೆ ವ್ಯಕ್ತಪಡಿಸುತ್ತಾರೆ' ಎಂದು ಟೀಕಿಸಿದೆ.
Next Story





