ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳ ಅನಧಿಕೃತ ಕಾರ್ಯಾಚರಣೆ: ಕಾನೂನು ರೀತಿಯ ಕ್ರಮದ ಎಚ್ಚರಿಕೆ
ಬೆಂಗಳೂರು, ಎ. 1: ಬೆಂಗಳೂರು ನಗರ ಜಿಲ್ಲೆಯಲ್ಲಿ ಕಾನೂನುಬಾಹಿರವಾಗಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿಗಳು ಸಂಚರಿಸುತ್ತಿದ್ದು, ಇವರುಗಳು ಕೆಲವೊಂದು ಕಂಪೆನಿಗಳ ಆ್ಯಪ್ ಅನ್ನು ಅಳವಡಿಸಿಕೊಂಡು ಕಾನೂನುಬಾಹಿರವಾಗಿ ಸಂಚರಿಸುತ್ತಿದ್ದು, ಇಂತಹ ಬೈಕ್ ಟ್ಯಾಕ್ಸಿ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು ತಿಳಿಸಿದ್ದಾರೆ.
ಕೆಲವೊಂದು ಆ್ಯಪ್ ಆಧಾರಿತ ಕಂಪೆನಿಗಳು ಪ್ರತಿನಿತ್ಯ ಮಾಧ್ಯಮಗಳಲ್ಲಿ ಜಾಹೀರಾತು ಪ್ರಚಾರ ನೀಡಿ ಬೈಕ್ ಮಾಲಕರಿಗೆ ತಪ್ಪು ಮಾಹಿತಿ ನೀಡಿ, ಅವರ ವಾಹನಗಳನ್ನು ಕಾನೂನುಬಾಹಿರವಾಗಿ ಆಚರಣೆ ಮಾಡಲು ಪ್ರೋತ್ಸಾಹಿಸುತ್ತಿದ್ದು, ಇದರಿಂದ ಬೈಕ್ ಮಾಲಕರಿಗೆ, ಬೈಕ್ ಟ್ಯಾಕ್ಸಿ ಉಪಯೋಗಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದು ಗಮನಕ್ಕೆ ಬಂದಿದ್ದು, ಸಾರ್ವಜನಿಕರಿಗೆ ಯಾವುದೇ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿಗಳನ್ನು ಉಪಯೋಗಿಸಬಾರದೆಂದು ಪ್ರಕಟಣೆ ಮನವಿ ಮಾಡಿದೆ.
Next Story





