Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಬ್ಸಿಡಿ ಆಹಾರಧಾನ್ಯ ಪೂರೈಕೆಗಾಗಿ...

ಸಬ್ಸಿಡಿ ಆಹಾರಧಾನ್ಯ ಪೂರೈಕೆಗಾಗಿ ಕ್ರಮಗಳನ್ನು ರೂಪಿಸಲು ಕೇಂದ್ರಕ್ಕೆ ನೀತಿ ಆಯೋಗ ಶಿಫಾರಸು

ವಾರ್ತಾಭಾರತಿವಾರ್ತಾಭಾರತಿ1 April 2021 11:14 PM IST
share
ಸಬ್ಸಿಡಿ ಆಹಾರಧಾನ್ಯ ಪೂರೈಕೆಗಾಗಿ ಕ್ರಮಗಳನ್ನು ರೂಪಿಸಲು ಕೇಂದ್ರಕ್ಕೆ ನೀತಿ ಆಯೋಗ ಶಿಫಾರಸು

ಹೊಸದಿಲ್ಲಿ,ಎ.1: ಕೇಂದ್ರ ಸರಕಾರದ ಆರ್ಥಿಕ ಸಂಪನ್ಮೂಲಗಳನ್ನು‘‘ಚಿವುಟದೆಯೇ’’ ಅಗತ್ಯವಿರುವವರಿಗೆ ಕಡಿಮೆ ದರದಲ್ಲಿ ಆಹಾರಧಾನ್ಯಗಳ ಪೂರೈಕೆಯನ್ನು ಖಾತರಿಪಡಿಸುವುದಕ್ಕಾಗಿ ಕೈಗೊಳ್ಳಬಹುದಾದಂತಹ ವಿವಿಧ ಕ್ರಮಗಳನ್ನು ಜಾರಿಗೆ ತರಲು ನೀತಿ ಆಯೋಗವು ಗುರುವಾರ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದೆ.

 ಜನಸಂಖ್ಯಾ ಏರಿಕೆಯ ಹಿನ್ನೆಲೆಯಲ್ಲಿ ಕೆಲವು ರಾಜ್ಯಗಳಲ್ಲಿ ಸಬ್ಸಿಡಿ ದರದಲ್ಲಿ ಆಹಾರಧಾನ್ಯಗಳಿಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ಸಚಿವಾಲಯವು ಈ ಬಗ್ಗೆ ನೀತಿ ಆಯೋಗದ ಸಲಹೆಯನ್ನು ಕೋರಿತ್ತು.

 ಬಹುತೇಕ ಎಲ್ಲಾ ರಾಜ್ಯಗಳಲ್ಲಿ ಜನಸಂಖ್ಯೆಯು ಹೆಚ್ಚುತ್ತಿರುವುದರಿಂದ ಆಹಾರಧಾನ್ಯಗಳ ವಿತರಣೆ ಹೆಚ್ಚಿಸುವಂತೆ ರಾಜ್ಯಗಳಿಗೆ ಬೇಡಿಕೆ ಸಲ್ಲಿಸುತ್ತಿರುವುದಾಗಿ ಆಹಾರ ಸಚಿವಾಲಯ ತನಗೆ ತಿಳಿಸಿದೆಯೆಂದು ನೀತಿ ಆಯೋಗ ಹೇಳಿದೆ.

‘‘ ಆಹಾರ ಸಬ್ಸಿಡಿಯು ಅತ್ಯಂತ ಕ್ಷಿಪ್ರ ದರದಲ್ಲಿ ಹೆಚ್ಚುತ್ತಿದೆ ಎಂದು ಸಚಿವಾಲಯವು ಕಳವಳ ವ್ಯಕ್ತಪಡಿಸಿತ್ತು. ಹೀಗಾಗಿ ಭರಿಸಲು ಸಾಧ್ಯವಾಗಬಹುದಾದಂತಹ ಆಹಾರ ಸಬ್ಸಿಡಿಯನ್ನು ಉಳಿಸಿಕೊಳ್ಳಬೇಕಾಗಿದೆ. ಆದರೆ ಅದು ನಮ್ಮ ಆರ್ಥಿಕ ಸಂಪನ್ಮೂಲಗಳನ್ನು ಚಿವುಟುವಂತಿರಬಾರದು’’ ಎಂದು ನೀತಿ ಆಯೋಗದ ಸದಸ್ಯ (ಕೃಷಿ) ರಮೇಶ್ ಅಭಿಪ್ರಾಯಿಸಿದ್ದಾರೆ.

2013ರಲ್ಲಿ ಅಂಗೀಕಾರಗೊಂಡಿರುವ ರಾಷ್ಟ್ರೀಯ ಭದ್ರತಾ ಕಾಯ್ದೆಯುಡಿ ಗ್ರಾಮೀಣ ಜನಸಂಖ್ಯೆಯ ಶೇ.75ರಷ್ಟು ಮಂದಿಗೆ ಹಾಗೂ ನಗರಪ್ರದೇಶಗಳ ಶೇ.50ರಷ್ಟು ಜನರಿಗೆ ಅಂದರೆ ದೇಶ ಗರಿಷ್ಠ 81.35 ಕೋಟಿ ಮಂದಿಗೆ ಪಡಿತರ ಆಹಾರಧಾನ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.

2013 ಹಾಗೂ 2021ರ ನಡುವಿನ ಅವಧಿಯಲ್ಲಿ ಜನರ ತಲಾ ಆದಾಯದಲ್ಲಿ ಶೇ.40- 50 ಏರಿಕೆಯಾಗಿದ್ದು, ಹಲವಾರು ಮಂದಿಯ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಯಾಗಿರುವುದು ಸ್ಪಷ್ಟವಾಗಿ ಕಂಡುಬರುತ್ತದೆ. ಸಬ್ಸಿಡಿ ದರದ ಆಹಾರಧಾನ್ಯಗಳ ವಿತರಣೆಗೆ ಸಂಬಂಧಿಸಿ ನೂತನ ಕ್ರಮಗಳನ್ನು ರೂಪಿಸುವಾಗ ಈ ಅಂಶವನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿದೆ ಎಂದು ಚಾಂದ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X