ಕೋವಿಡ್-19 ಸೋಂಕಿಗೆ ಒಳಗಾದ ಆರು ದಿನಗಳ ಬಳಿಕ ಆಸ್ಪತ್ರೆಗೆ ದಾಖಲಾದ ಸಚಿನ್ ತೆಂಡುಲ್ಕರ್

ಹೊಸದಿಲ್ಲಿ: ಕೋವಿಡ್-19 ಸೋಂಕಿಗೆ ಒಳಗಾದ ಆರು ದಿನಗಳ ಬಳಿಕ ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ವೈದ್ಯರ ಸಲಹೆಯ ಮೇರೆಗೆ ಮುನ್ನಚ್ಚರಿಕೆಯ ವಿಷಯವಾಗಿ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ನಿಮ್ಮ ಶುಭ ಹಾರೈಕೆಗಳು ಹಾಗೂ ಪ್ರಾರ್ಥನೆಗಳಿಗೆ ಧನ್ಯವಾದಗಳು. ವೈದ್ಯಕೀಯ ಸಲಹೆ ಮೇರೆಗೆ ಮುನ್ನಚ್ಚರಿಕೆಯ ಕ್ರಮವಾಗಿ ನನ್ನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕೆಲವೇ ದಿನಗಳಲ್ಲಿ ಮನೆಗೆ ಮರಳುವ ಭರವಸೆ ಇದೆ. ಎಲ್ಲರೂ ಕಾಳಜಿ ವಹಿಸಿ ಸುರಕ್ಷಿತವಾಗಿರಿ. ನಮ್ಮ ವಿಶ್ವಕಪ್ ಗೆಲುವಿನ 10ನೇ ವಾರ್ಷಿಕೋತ್ಸವದಂದು ಎಲ್ಲ ಭಾರತೀಯರು ಹಾಗೂ ನನ್ನ ತಂಡದ ಆಟಗಾರರಿಗೆ ಶುಭ ಹಾರೈಸುತ್ತೇನೆ ಎಂದು ಸಚಿನ್ ತೆಂಡುಲ್ಕರ್ ಟ್ವೀಟ್ ಮಾಡಿದ್ದಾರೆ.
Next Story