Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟೀಕೆ-ಟಿಪ್ಪಣಿಗಳಿಗೆ ಅಳುಕದೇ,...

ಟೀಕೆ-ಟಿಪ್ಪಣಿಗಳಿಗೆ ಅಳುಕದೇ, ನ್ಯಾಯಸಮ್ಮತವಾಗಿ ಕಾರ್ಯ ನಿರ್ವಹಿಸಿ: ಪೊಲೀಸರಿಗೆ ಬೊಮ್ಮಾಯಿ ಕರೆ

ವಾರ್ತಾಭಾರತಿವಾರ್ತಾಭಾರತಿ2 April 2021 6:01 PM IST
share
ಟೀಕೆ-ಟಿಪ್ಪಣಿಗಳಿಗೆ ಅಳುಕದೇ, ನ್ಯಾಯಸಮ್ಮತವಾಗಿ ಕಾರ್ಯ ನಿರ್ವಹಿಸಿ: ಪೊಲೀಸರಿಗೆ ಬೊಮ್ಮಾಯಿ ಕರೆ

ಬೆಂಗಳೂರು, ಎ. 2: ಅತ್ಯಂತ ಸಂಕೀರ್ಣ ಅಪರಾಧ ಪ್ರಕರಣಗಳ ತನಿಖೆ ಮಾಡುವ ಸಂದರ್ಭದಲ್ಲಿ ಹಲವರು ಅಡ್ಡಿಪಡಿಸುವ ಕೆಲಸ ಮಾಡುತ್ತಾರೆ. ಆದರೆ, ಈ ಎಲ್ಲ ಅಡ್ಡಿ ಆತಂಕ, ಟೀಕೆ-ಟಿಪ್ಪಣಿಗಳನ್ನು ಮೆಟ್ಟಿನಿಂತು ವಿಷಕಂಠನಂತೆ ನ್ಯಾಯ ಸಮ್ಮತವಾಗಿ ತನಿಖೆ ಮಾಡಿ ಟೀಕೆ ಟಿಪ್ಪಣಿಗಳಿಗೆ ಉತ್ತರ ನೀಡಬೇಕು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ, ಪೊಲೀಸ್ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.

ಶುಕ್ರವಾರ ಇಲ್ಲಿನ ಕೆಎಸ್ಸಾರ್ಪಿ ಮೈದಾನದಲ್ಲಿ ಗೃಹ ಇಲಾಖೆ ಏರ್ಪಡಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಮುಖ್ಯಮಂತ್ರಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಪದಕ ವಿತರಿಸಿದ ಬಳಿಕ ಮಾತನಾಡಿದ ಅವರು, ಕರ್ನಾಟಕ ಪೊಲೀಸರು ಹಲವಾರು ಪ್ರಕರಣಗಳಲ್ಲಿ ಸಾಹಸ ಮತ್ತು ಚಾಣಾಕ್ಷತನ ಮೆರೆದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ ಎಂದರು.

ಅತ್ಯಂತ ಸಂಕೀರ್ಣ ಪ್ರಕರಣಗಳನ್ನು ಬಗೆಹರಿಸಿದ್ದಾರೆ. ಆ ಕಾರಣಕ್ಕಾಗಿಯೇ ದೇಶದಲ್ಲಿ ಕರ್ನಾಟಕ ಪೊಲೀಸ್ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ. ಅದರೆ, ಇದೆಲ್ಲದರ ಮಧ್ಯೆ ತನಿಖೆಯ ಸಂದರ್ಭದಲ್ಲಿ ಹಲವಾರು ಸವಾಲುಗಳು ಎದುರಾಗುತ್ತವೆ. ಕೆಲವರು ಟೀಕೆ ಟಿಪ್ಪಣಿಗಳನ್ನು ಮಾಡುತ್ತಾರೆ. ಆದರೆ, ಇದಾವುದಕ್ಕೂ ವಿಚಲಿತರಾಗದೇ ವಿಷಕಂಠನಂತೆ ಕರ್ತವ್ಯ ನಿರ್ವಹಣೆ ಮಾಡಬೇಕು ಎಂದು ಅವರು ಪೊಲೀಸ್ ಅಧಿಕಾರಿಗಳಿಗೆ ಕರೆ ನೀಡಿದರು.

ಡ್ರಗ್ ವಿರುದ್ಧ ಸಮರ: ಮಹಿಳೆಯರು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಸೆಲ್ಫ್ ಡಿಫೆನ್ಸ್ ತರಬೇತಿ ನೀಡಲಾಗುವುದು. ಇದಕ್ಕೆ ಕೆಎಸ್‍ಆರ್‍ಪಿ ಸಜ್ಜಾಗಿದೆ ಎಂದ ಅವರು, ರಾಜ್ಯದಲ್ಲಿ ಕಳೆದ ಕೆಲ ವರ್ಷಗಳ ಅವಧಿಯಲ್ಲಿ ಅತಿಹೆಚ್ಚು ಡ್ರಗ್ ಪತ್ತೆ ಹಚ್ಚಿ ಸೀಝ್ ಮಾಡಿದ್ದೇವೆ. ರಾಜ್ಯದ ಮೂಲೆ ಮೂಲೆಗಳಿಗೆ ಹೋಗಿ ಮಾದಕ ವಸ್ತುಗಳ ಮಾರಾಟ ಜಾಲಗಳನ್ನು ಪತ್ತೆ ಮಾಡಿ ಸೆದೆ ಬಡಿದಿದ್ದೇವೆ. ಡ್ರಗ್ ವಿರುದ್ಧ ಸಮರ ಸಾರಿದ್ದೇವೆ ಎಂದರು.

ರಾಜ್ಯದ ಪ್ರತಿ ಜಿಲ್ಲೆಗಳಿಗೆ ಒಂದರಂತೆ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪನೆಗೆ ಕ್ರಮ ಜರುಗಿಸಲಾಗಿದೆ. ಸೈಬರ್ ಅಪರಾಧಗಳನ್ನು ಪತ್ತೆ ಮಾಡಿದ್ದೇವೆ. ಬ್ಯಾಂಕುಗಳಲ್ಲಿ ನಡೆಯುವ ವಂಚನೆಗಳನ್ನು ಆರ್‍ಬಿಐ ನೆರವಿನೊಂದಿಗೆ ಪತ್ತೆ ಮಾಡಿದ್ದೇವೆ. ಇದಕ್ಕೆ ಕಾರಣ ನಮ್ಮ ಪೊಲೀಸರು ಎಂದು ಬಸವರಾಜ ಬೊಮ್ಮಾಯಿ ಮೆಚ್ವುಗೆ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪನವರು ಗೃಹ ಇಲಾಖೆಯ ಹಲವಾರು ಕಾರ್ಯಕ್ರಮಗಳಿಗೆ ಸಕಲ ರೀತಿಯ ನೆರವು ನೀಡಿದ್ದಾರೆ. ಪೊಲೀಸರಿಗೆ ಮನೆ ನಿರ್ಮಿಸುವ ಯೋಜನೆಗೆ ಒಪ್ಪಿಗೆ ನೀಡಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಆರೋಗ್ಯ ಭಾಗ್ಯ ಯೋಜನೆ ವಿಸ್ತರಣೆಗೆ 20 ಕೋಟಿ ರೂ.ಅನುದಾನ ನೀಡಿದ್ದಾರೆ. ಆ ಪೈಕಿ 7 ಕೋಟಿ ರೂ.ಹಣ ಮಂಜೂರು ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದ ಹುದ್ದೆ ಭರ್ತಿಗೆ ಸಮ್ಮತಿಸಿದ್ದಾರೆ. ಬಂದೊಬಸ್ತ್ ಭತ್ತೆಯನ್ನು 100 ರಿಂದ 200 ರೂ.ಗಳಿಗೆ ಹೆಚ್ವಿಸಿದ್ದಾರೆ. ಇಲಾಖೆಯ ಆಧುನಿಕರಣ ಸೇರಿದಂತೆ ಇಲಾಖೆಯಲ್ಲಿ ಆಮೂಲಾಗ್ರ ಬದಲಾವಣೆ ತರಲು ಸಿಎಂ ಎಲ್ಲ ನೆರವು ನೀಡಿದ್ದಾರೆಂದು ಬೊಮ್ಮಾಯಿ ಹೇಳಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X