ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾಗೆ ಕೊರೋನ ಸೋಂಕು
ಚುನಾವಣಾ ಪ್ರಚಾರ ಪ್ರವಾಸವನ್ನು ರದ್ದುಪಡಿಸಿದ ಪ್ರಿಯಾಂಕಾ ಗಾಂಧಿ

ಹೊಸದಿಲ್ಲಿ, ಎ. 2: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರು ಕೊರೋನ ಸೋಂಕಿಗೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ರಾಬರ್ಟ್ ವಾದ್ರಾ ಸ್ವ ಐಸೋಲೇಷನ್‌ಗೆ ಒಳಗಾಗಿದ್ದಾರೆ. ತನಗೆ ಇದುವರೆಗೆ ಕೊರೋನ ಸೋಂಕಿನ ಯಾವುದೇ ಲಕ್ಷಣ ಕಂಡು ಬಂದಿಲ್ಲ ಎಂದು ರಾಬರ್ಟ್ ವಾದ್ರಾ ಫೇಸ್‌ಬುಕ್‌ನಲ್ಲಿ ಘೋಷಿಸಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಚುನಾವಣಾ ಪ್ರಚಾರಕ್ಕಾಗಿ ಅಸ್ಸಾಂ, ತಮಿಳುನಾಡು ಹಾಗೂ ಕೇರಳ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ‘‘ಕೋರೋನ ಶಿಷ್ಟಾಚಾರಕ್ಕೆ ಅನುಗುಣಮವಾಗಿ ಪ್ರಿಯಾಂಕಾ ಹಾಗೂ ನಾನು ಸ್ವಯಂ ಐಸೋಲೇಷನ್‌ಗೆ ಒಳಗಾಗಿದ್ದೇವೆ. ಅದರೆ, ಪ್ರಿಯಾಂಕಾ ಅವರಿಗೆ ನೆಗೆಟಿವ್ ವರದಿ ಬಂದಿದೆ’’ ಎಂದು ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಅವರು ಹೇಳಿದ್ದಾರೆ. ಟ್ವಿಟ್ಟರ್‌ನಲ್ಲಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ 49ರ ಹರೆಯದ ಪ್ರಿಯಾಂಕಾ ಗಾಂಧಿ ವಾದ್ರಾ, ನನಗೆ ನಿನ್ನೆ ನಗೆಟಿವ್ ವರದಿ ಬಂದಿದೆ. ವೈದ್ಯರ ಸಲಹೆಯಂತೆ ಕೆಲವು ದಿನಗಳು ಸ್ವಯಂ ಐಷೋಲೇಶನ್‌ಗೆ ಒಳಗಾಗಿದ್ದೇನೆ. ಶನಿವಾರ ತಮಿಳುನಾಡು ಹಾಗೂ ರವಿವಾರ ಕೇರಳಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದಿದ್ದಾರೆ.





